ಬೀದರ್‌ | ಡಿಕೆಶಿ ಸಂಪುಟದಲ್ಲಿ ಈಶ್ವರ ಖಂಡ್ರೆಗೆ ಒಲಿದ ಸಚಿವ ಸ್ಥಾನ

Date:

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿ.ಕೆ.ಶಿವಕುಮಾರ ಸಂಪುಟದಲ್ಲಿ 13 ಜನ ಸಚಿವರು ಪದಗ್ರಹಣ ಸ್ವೀಕರಿಸಿದ್ದು, ಈ ಪೈಕಿ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಈಶ್ವರ ಖಂಡ್ರೆ ಅವರಿಗೂ ಸಚಿವ ಸ್ಥಾನ ದಕ್ಕಿದೆ. ಈಶ್ವರ ಖಂಡ್ರೆಯವರು ಭಾಲ್ಕಿ ಹಿರೇಮಠದ ಲಿಂಗೈಕ್ಯ‌ ಡಾ.ಚನ್ನಬಸವ ಪಟ್ಟದ್ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗುರುಭಕ್ತಿ ಪ್ರದರ್ಶಿಸಿದರು.

- Advertisement -

ಕರ್ನಾಟಕದ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಲೋಕಭವನದ ಗಾಜಿನ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, 64 ವರ್ಷದ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರಾದ ತಾವರಚಂದ್ ಗೆಹಲೋತ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ರಾಜ್ಯದಲ್ಲಿ ನೂತನ ಸರ್ಕಾರದ ಅಧಿಕೃತ ಆಡಳಿತ ಪರ್ವ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮುಖ್ಯಮಂತ್ರಿಗಳ ಪ್ರಮಾಣವಚನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ಡಾ. ಜಿ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ನೂತನ ಸಚಿವ ಸಂಪುಟದ ಸದಸ್ಯರಾಗಿ ಶಾಸಕರುಗಳಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

WhatsApp Image 2026 06 03 at 6.50.34 PM

ಭಾಲ್ಕಿ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಈಶ್ವರ ಖಂಡ್ರೆ ಅವರು ಕಳೆದ 2013ರಲ್ಲಿ ಸಿದ್ದರಾಮಯ್ಯ ನೇತ್ರತ್ವದ ಸರ್ಕಾರದಲ್ಲಿ ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾಗಿದ್ದರು. 2023ರಲ್ಲಿ ಕಾಂಗ್ರೆಸ್‌ ನೇತ್ರತ್ವದ ಸರ್ಕಾರದಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮೂರು ವರ್ಷಗಳ ಕಾಲ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಸಚಿವರಾಗಿದ್ದರು. ಇದೀಗ ಡಿಕೆಶಿ ಸಂಪುಟದಲ್ಲಿ ಸಚಿವರಾಗಿ ಈಶ್ವರ ಖಂಡ್ರೆ ಅವರು ಪದಗ್ರಹಣ ಸ್ವೀಕರಿಸಿದ್ದಾರೆ.

ಈ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಐದು ವರ್ಷಗಳ ಕಾಲ ಪಕ್ಷ ಸಂಘಟಿಸಿದರು. ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಈಶ್ವರ ಖಂಡ್ರೆಯವರು ʼಈ ಬಾರಿ ಪಕ್ಷ ನನಗೆ ಹೆಚ್ಚಿನ ಜವಾಬ್ದಾರಿ ವಹಿಸಿದರೆ ನಿಭಾಯಿಸುತ್ತೇನೆʼ ಎಂದು ಮಾಧ್ಯಮಗಳ ಮುಂದೆ ತಮ್ಮ ಇಂಗಿತ ವ್ಯಕ್ತಪಡಿಸಿದರು.

ಬೀದರ್‌ ಸೇರಿದಂತೆ ರಾಜ್ಯದ ವಿವಿಧೆಡೆ ಈಶ್ವರ ಖಂಡ್ರೆ ಅವರ ಬೆಂಬಲಿಗರು, ಮಠಾಧೀಶರು ಖಂಡ್ರೆಯವರಿಗೆ ಈ ಬಾರಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಅದಕ್ಕಾಗಿ ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಸ್ಥಾನಕ್ಕಾಗಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಮುಖರು ಖಂಡ್ರೆ ಪರ ದನಿ ಎತ್ತಿದ್ದರು.

ಸಿದ್ದರಾಮಯ್ಯನವರ ಸಂಪುಟದಲ್ಲಿ 3 ವರ್ಷ ಸಚಿವರಾಗಿದ್ದ ಖಂಡ್ರೆ ಅವರು ಡಿಕೆಶಿ ಸಂಪುಟದಲ್ಲಿ ಮತ್ತೆ ಸಚಿವ ಸ್ಥಾನ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿ ಪರಿಣಮಿಸಿತು. ತಮಗೆ ಮತ್ತೊಮ್ಮೆ ಮಂತ್ರಿ ಸ್ಥಾನ ಸಿಗಲೇಬೇಕು ಎಂದು ಪಟ್ಟು ಹಿಡಿದು ವರಿಷ್ಠರನ್ನು ಭೇಟಿ ಮಾಡಿದರು. ಕೊನೆಗೂ ಮೂರನೇ ಬಾರಿಗೆ ಸಚಿವ ಸ್ಥಾನ ಗಾದಿ ಒಲಿದಿದೆ.

WhatsApp Image 2026 06 03 at 6.50.33 PM 1

2023ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಎರಡರಲ್ಲಿ ಮಾತ್ರ ಗೆದ್ದಿತ್ತು. ಉಳಿದ ನಾಲ್ಕು ಕ್ಷೇತ್ರ ಬಿಜೆಪಿ ಪಾಲಾಗಿದ್ದವು. ಭಾಲ್ಕಿ, ಬೀದರ್‌ ಉತ್ತರ ಕ್ಷೇತ್ರದಲ್ಲಿ ಜಯ ಗಳಿಸಿದ ಈಶ್ವರ ಖಂಡ್ರೆ ಹಾಗೂ ರಹೀಂ ಖಾನ್‌ ಇಬ್ಬರಿಗೂ ಸಿದ್ದರಾಮಯ್ಯ ನೇತ್ರತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ಪಟ್ಟ ಒಲಿದು ಬಂದಿತು. ಆದರೀಗ ಡಿಕೆಶಿ ನೇತ್ರತ್ವದ ನೂತನ ಸಂಪುಟದಲ್ಲಿ ಸದ್ಯಕ್ಕೆ ಜಿಲ್ಲೆಗೆ ಒಂದು ಸಚಿವ ಸ್ಥಾನ ಸಿಕ್ಕಿದೆ.

ಅರಣ್ಯ ಸಚಿವರಾಗಿ ಗಮನಾರ್ಹ ಸಾಧನೆ

ಈವರೆಗೆ ಯಾವುದೇ ಅರಣ್ಯ ಸಚಿವರು ತೋರದ ಧೈರ್ಯ ಪ್ರದರ್ಶಿಸಿರುವ ಈಶ್ವರ ಖಂಡ್ರೆ ಅವರು 12 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಿದ್ದಾರೆ. ಹೊಸದಾಗಿ 15 ಸಾವಿರ ಎಕರೆ ಭೂಮಿಯನ್ನು ಮೀಸಲು ಅರಣ್ಯ ಎಂದು ಘೋಷಣೆ ಮಾಡಿಸಿದ್ದಾರೆ. ಅರಣ್ಯ ಇಲಾಖೆಯ ವತಿಯಿಂದ 2023ರಿಂದ ಇಲ್ಲಿಯವರೆಗೆ 11 ಕೋಟಿ ಸಸಿ ನೆಟ್ಟು ಪೋಷಣೆ ಮಾಡುವ ಗುರಿಯನ್ನು ಪೂರೈಸಿದ್ದು, ಈ ಪೈಕಿ ಎಷ್ಟು ಗಿಡಗಳು ಬದುಕುಳಿದಿವೆ ಎಂದು ತಿಳಿಯಲು ಆಡಿಟ್ ಕೂಡ ಮಾಡಿಸಿದ್ದಾರೆ.ಅರಣ್ಯ ಅಪರಾಧ ತಡೆಗಟ್ಟಲು ʼಗರುಡಾಕ್ಷಿʼ ಎಂಬ ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿ ಮಾಡಿಸಿದ್ದಾರೆ.

ಬೆಂಗಳೂರಿನಲ್ಲಿ 150 ವರ್ಷಗಳ ತರುವಾಯ ಮೊಟ್ಟ ಮೊದಲ ಬಾರಿಗೆ 153 ಎಕರೆ ಪ್ರದೇಶದಲ್ಲಿ ವಿಶ್ವಗುರು ಬಸವಣ್ಣ ಬೃಹತ್ ಜೈವಿಕ ಉದ್ಯಾನ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಂಗಳೂರು ನಗರದಲ್ಲಿ ಶ್ವಾಸತಾಣಗಳನ್ನು ಉಳಿಸಲು ಹೆಸರುಘಟ್ಟ ಕೆರೆ ಪ್ರದೇಶದಲ್ಲಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾರೆ.

ಕಷ್ಟಪಟ್ಟು ಕೆಲಸ ಮಾಡುವ ಅರಣ್ಯ ಮುಂಚೂಣಿ ಸಿಬ್ಬಂದಿಗೆ ರಿಸ್ಕ್ ಅಲೋಯನ್ಸ್ ಅಪಾಯ ಭತ್ಯೆ ನೀಡಿದ ಶ್ರೇಯವೂ ಇವರಿಗೆ ಸಲ್ಲುತ್ತದೆ. ಇದಲ್ಲದೆ ಖಾಲಿ ಇದ್ದ ಹುದ್ದೆಗಳ ಭರ್ತಿಗೂ ಕ್ರಮ ವಹಿಸಿದ್ದಷ್ಟೇ ಅಲ್ಲದೆ, ನಗರ ಪ್ರದೇಶದ ಮರಗಳ ಸಂರಕ್ಷಣೆಗಾಗಿ ಮರದ ಸುತ್ತಲೂ ಹಾಕಲಾದ ಕಾಂಕ್ರೀಟ್ ತೆರವಿಗೆ ಆದೇಶ ಹೊರಡಿಸಿದ್ದಾರೆ. ವನ್ಯಜೀವಿಗಳ ಅಂಗಾಂಗಕ್ಕಾಗಿ ವನ್ಯಜೀವಿ ಹತ್ಯೆ ತಡೆಯಲು ಇವರು ಕೈಗೊಂಡ ಕಠಿಣ ಕ್ರಮಗಳು ಜನರಲ್ಲಿ ಜಾಗೃತಿ ಮೂಡಿಸಿವೆ. 5 ನಗರಗಳನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಿ, ಅದರ ಅನುಷ್ಠಾನಕ್ಕೆ ಶ್ರಮಿಸಿದ್ದಾರೆ. ಇಡೀ ರಾಜ್ಯವೇ ಅರಣ್ಯ ಇಲಾಖೆಯತ್ತ ಚಿತ್ತ ಹರಿಸುವಂತೆ ಗಮನಾರ್ಹ ಕೆಲಸ ನಿರ್ವಹಿಸಿದ್ದಾರೆ.

WhatsApp Image 2026 06 03 at 6.50.32 PM

ಬೀದರ್ ನಲ್ಲಿ ರಾಜ್ಯಮಟ್ಟದ ಪಾರಂಪರಿಕ ವೈದ್ಯರ ಸಮ್ಮೇಳನ ಆಯೋಜಿಸಿ ಔಷಧೀಯ ಸಸ್ಯಗಳ ಸಂರಕ್ಷಣೆಗೂ ಕ್ರಮ ಕೈಗೊಂಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದಲ್ಲಿ 10 ಸಾವಿರ ಕೋಟಿ ಬೆಲೆ ಬಾಳುವ 250 ಎಕರೆ ಸೇರಿದಂತೆ ಸಾವಿರಾರು ಕೋಟಿ ಮೌಲ್ಯದ ಅರಣ್ಯಭೂಮಿ ಒತ್ತುವರಿ ತೆರವು ಮಾಡಿಸಿದ್ದಾರೆ. ಸುಮಾರು 50 ಸಾವಿರ ಕೋಟಿ ರೂ. ಬೆಲೆ ಬಾಳುವ ಎಚ್.ಎಂ.ಟಿ. ಅರಣ್ಯ ಭೂಮಿ ಸೇರಿದಂತೆ ಗುತ್ತಿಗೆ ಭೂಮಿಗಳ ವಶಕ್ಕೆ ಕ್ರಮ ಕೈಗೊಂಡಿದ್ದಾರೆ.

ಮೂಲತಃ ಭಾಲ್ಕಿಯವರಾದ ಖಂಡ್ರೆ ಅವರು ಓದಿದ್ದು ಬಿಇ ಮ್ಯಾಕಾನಿಕಲ್‌, ಸೇವಾದಳದ ಮುಖಾಂತರ ರಾಜಕೀಯ ರಂಗ ಪ್ರವೇಶಿಸಿದ್ದು, ಸೇವಾದಳದ ಶಿಬಿರದಲ್ಲಿ ಅಂದಿನ ಯುವ ನಾಯಕ ರಾಜೀವ್ ಗಾಂಧಿ ಅವರ ಭಾಷಣದಿಂದ ಪ್ರೇರಿತರಾಗಿ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟರು. ಸ್ವಾತಂತ್ರ್ಯ ಹೋರಾಟಗಾರರು, ಏಕೀಕರಣ ಹೋರಾಟದ ನೇತಾರರು, ನಿಜಾಮರು ಮತ್ತು ರಜಾಕಾರರ ದೌರ್ಜನ್ಯದ ವಿರುದ್ಧ ಹೋರಾಡಿದ ತಮ್ಮ ತಂದೆ ಲೋಕನಾಯಕ ಮಾಜಿ ಸಚಿವ ಲಿಂಗೈಕ್ಯ ಭೀಮಣ್ಣ ಖಂಡ್ರೆ ಬದುಕಿಗೆ ರೋಲ್ ಮಾಡಲ್ ಆಗಿದ್ದಾರೆ.

64 ವರ್ಷದ ಈಶ್ವರ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಲವು ವರ್ಷ ಸೇವೆ ಸಲ್ಲಿಸಿದ ಅವರು ಪ್ರಸ್ತುತ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಈಶ್ವರ ಖಂಡ್ರೆ ಅವರ ಪತ್ನಿ ಗೀತಾ ಖಂಡ್ರೆ ವೈದ್ಯರಾಗಿದ್ದಾರೆ. ಹಿರಿಯ ಪುತ್ರ ಗುರುಪ್ರಸಾದ್ ವೈದ್ಯರು. ದ್ವಿತೀಯ ಪುತ್ರ ಸಾಗರ್ ಖಂಡ್ರೆ ಹಾಲಿ ಬೀದರ್ ಸಂಸತ್ ಸದಸ್ಯರಾಗಿದ್ದಾರೆ. ಅವರ ಸಹೋದರ ಅಮರ ಖಂಡ್ರೆ ಬೀದರ್‌ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಮೂರು ಸಚಿವ ಸ್ಥಾನ

ಸಿಎಂ ಡಿ.ಕೆ.ಶಿವಕುಮಾರ ನೇತ್ರತ್ವದ ನೂತನ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕ ಭಾಗದಿಂದ ಮೂವರು ಶಾಸಕರಿಗೆ ಸಚಿವ ಸ್ಥಾನ ದೊರೆತಿದೆ. ಪ್ರಿಯಾಂಕ್‌ ಖರ್ಗೆ ಅವರಿಗೆ ಗೃಹಮಂತ್ರಿ , ಈಶ್ವರ ಖಂಡ್ರೆ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ಸಿಗುವ ಸಾಧ್ಯತೆ ಇರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.‌

WhatsApp Image 2026 06 03 at 6.50.33 PM

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್‌ ಖರ್ಗೆ, ಸೇಡಂ ಕ್ಷೇತ್ರದ ಶಾಸಕ ಡಾ.ಶರಣಪ್ರಕಾಶ ಪಾಟೀಲ್‌ ಹಾಗೂ ಬೀದರ್‌ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ಮೊದಲ ಅವಧಿಯಲ್ಲಿ ಡಿಕೆಶಿ ಸಂಪುಟದಲ್ಲಿ ಸ್ಥಾನ ದಕ್ಕಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಕಲ್ಯಾಣ ಕರ್ನಾಟಕದಿಂದ ಸಚಿವರಾಗಿದ್ದ ಎನ್. ಎಸ್.ಬೋಸರಾಜು, ಶಿವರಾಜ ತಂಗಡಗಿ, ರಹೀಂ ಖಾನ್‌ ಹಾಗೂ ಶರಣಬಸಪ್ಪ ದರ್ಶನಾಪುರ ಅವರಿಗೆ ಮೊದಲ ಅವಧಿಯಲ್ಲಿ ಸಚಿವ ಸ್ಥಾನ ದಕ್ಕಿಲ್ಲ.

“ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವನಾಗಿ ಮತ್ತೊಮ್ಮೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಪಾಲಿಗೆ ಅತ್ಯಂತ ಸಂತಸದ ಹಾಗೂ ಜವಾಬ್ದಾರಿಯ ಕ್ಷಣವಾಗಿದೆ. ಈ ಅವಕಾಶ ಕಲ್ಪಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ ಗಾಂಧಿ ಹಾಗೂ ಪಕ್ಷದ ವರಿಷ್ಠರಾದ ಕೆ.ಸಿ.ವೆಣಗೋಪಾಲ್‌, ರಣದೀಪ್‌ ಸಿಂಗ್‌ ಸರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ, ನೂತನ ಸಿಎಂ ಡಿ.ಕೆ.ಶಿವಕುಮಾರ ಹಾಗೂ ಸಂಪೂರ್ಣ ಕಾಂಗ್ರೆಸ್ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸುವೆ” ಎಂದರು.

ಇದನ್ನೂ ಓದಿ : ಬೀದರ್‌ | ಎಸ್‌ಐಆರ್ : ಜೂ.30ರಿಂದ ಮನೆ-ಮನೆ ಸಮೀಕ್ಷೆ : ಡಿಸಿ ಶಿಲ್ಪಾ ಶರ್ಮಾ

“ನನ್ನ ರಾಜಕೀಯ ಪಯಣದ ಪ್ರತಿಯೊಂದು ಹಂತದಲ್ಲೂ ಬೆಂಬಲವಾಗಿ ನಿಂತಿರುವ ಬೀದರ್ ಜಿಲ್ಲೆಯ, ವಿಶೇಷವಾಗಿ ಭಾಲ್ಕಿ ಕ್ಷೇತ್ರದ ಜನತೆ, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ನನ್ನ ಕುಟುಂಬದವರ ಪ್ರೀತಿ, ಆಶೀರ್ವಾದ ಮತ್ತು ವಿಶ್ವಾಸವೇ ನನ್ನ ಶಕ್ತಿ. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿದು, ಜನಸೇವೆ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಇನ್ನಷ್ಟು ಬದ್ಧತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪದೊಂದಿಗೆ ನನ್ನ ಜವಾಬ್ದಾರಿಯನ್ನು ಮುಂದುವರಿಸುತ್ತೇನೆ” ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...

CJP ಮುಖಂಡರ ಬಂಧನ ʼಸರ್ಕಾರ ಪ್ರಾಯೋಜಿತ ಭಯೋತ್ಪಾದನೆʼ: ಮಾಜಿ ಸಿಎಂ ಮಮತಾ ಬ್ಯಾನರ್ಜಿ

CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...