ಬೀದರ್‌ | ಹಳೆಗನ್ನಡ ಸಾಹಿತ್ಯ ಮುಂದಿನ ಪೀಳಿಗೆಗೆ ತಲುಪಿಸುವುದು ಅತ್ಯವಶ್ಯಕ: ಪ್ರೊ.ಬಿ.ಎಸ್.ಬಿರಾದಾರ

Date:

ಹಳೆಗನ್ನಡ ಸಾಹಿತ್ಯವು ಪಂಪ, ರನ್ನ, ಜನ್ನ ಸೇರಿದಂತೆ ಮಹಾನ್ ಕವಿಗಳ ಕಾಲದಿಂದ ಕನ್ನಡ ಸಾಹಿತ್ಯದ ಭದ್ರ ಬುನಾದಿಯಾಗಿ ಬೆಳೆದು ಬಂದಿದೆ. ಇಂದಿನ ಓದು-ಬರಹದ ಕನ್ನಡ ಸಾಹಿತ್ಯಕ್ಕೆ ಹಳೆಗನ್ನಡವೇ ಮೂಲಾಧಾರವಾಗಿದ್ದು, ಅದರ ಪರಂಪರೆ ಮತ್ತು ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅತ್ಯವಶ್ಯಕವಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಹೇಳಿದರು.

- Advertisement -

ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಬೀದರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶುಕ್ರವಾರ ನಡೆದ ಹಳೆಗನ್ನಡ ಸಾಹಿತ್ಯ ಕುರಿತ ಒಂದು ದಿನದ ವಿಶೇಷ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಬಸವರಾಜ ಹೂಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಬಿ.ಎಸ್.ಮಂಜುನಾಥ ಸ್ವಾಮಿ ಅವರ ಪರಿಕಲ್ಪನೆಯಂತೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ “ಹಳೆಗನ್ನಡ ಓದು-ಬೋಧನಾ ವಿಧಾನ” ಕುರಿತ ಒಂದು ದಿನದ ವಿಶೇಷ ಕಾರ್ಯಾಗಾರ ಆರಂಭಿಸಲಾಗಿದ್ದು, ಅದರ ಚಾಲನೆಯನ್ನು ಗಡಿ ಜಿಲ್ಲೆಯಾದ ಬೀದರದಿಂದ ನೀಡಿರುವುದು ಶ್ಲಾಘನೀಯ” ಎಂದರು.

ಬೀದರ ಜಿಲ್ಲೆಯು ವಚನ, ಭಾಷಾ ಚಳುವಳಿ ಹಾಗೂ ಶರಣ ಸಂಸ್ಕೃತಿಯ ಮೂಲಕ ಸಮಾಜಕ್ಕೆ ತನ್ನದೇ ಆದ ಮೌಲ್ಯಗಳು ಮತ್ತು ಸಿದ್ಧಾಂತಗಳನ್ನು ನೀಡಿರುವ ಪವಿತ್ರ ಭೂಮಿಯಾಗಿದ್ದು, ಕನ್ನಡ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಪ್ರಾಸ್ತಾವಿಕವಾಗಿ ಮಾತನಾಡಿ, “ಹಳೆಗನ್ನಡ ಓದು-ಬೋಧನಾ ವಿಧಾನದ ಕುರಿತು ಆಯೋಜಿಸಿರುವ ಈ ಒಂದು ದಿನದ ಕಾರ್ಯಾಗಾರದಲ್ಲಿ ನುರಿತ ಕನ್ನಡ ಉಪನ್ಯಾಸಕರಿಂದ ನಾಲ್ಕು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರವು ಕನ್ನಡ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಹಳೆಗನ್ನಡ ಸಾಹಿತ್ಯದ ಅಧ್ಯಯನ ಮತ್ತು ಬೋಧನಾ ವಿಧಾನಗಳನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳಲು ಸಹಕಾರಿಯಾಗಲಿದೆ. ಹಳೆಗನ್ನಡ ಸಾಹಿತ್ಯದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸಿ, ಅದರ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಇಂತಹ ಶೈಕ್ಷಣಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.

ಮೊದಲ ಗೋಷ್ಠಿಯಲ್ಲಿ ಡಾ.ರಾಮಚಂದ್ರ ಗಣಾಪೂರ ಅವರು ʼಹಳೆಗನ್ನಡ ಕಾವ್ಯ ಪರಂಪರೆ  ಅಸ್ಮಿತೆʼ ವಿಷಯದ ಕುರಿತು ಉಪನ್ಯಾಸ ನೀಡಿ, “ಹಳೆಗನ್ನಡ ಕಾವ್ಯ ಪರಂಪರೆಯು ಕನ್ನಡ ಸಾಹಿತ್ಯದ ವೈಭವವನ್ನು ಜಗತ್ತಿಗೆ ಪರಿಚಯಿಸಿದ ಅಮೂಲ್ಯ ಪರಂಪರೆಯಾಗಿದ್ದು, ಅದರ ಸಂರಕ್ಷಣೆ ಹಾಗೂ ಅಧ್ಯಯನ ಅತ್ಯಗತ್ಯವಾಗಿದೆ” ಎಂದು ತಿಳಿಸಿದರು.

ಎರಡನೇ ಗೋಷ್ಠಿಯಲ್ಲಿ ಡಾ.ಶ್ರೀಕಾಂತ ಪಾಟೀಲ್ ಅವರು ʼಹಳೆಗನ್ನಡ ಕಲಿಕಾ ವಿಧಾನʼ ಕುರಿತು ಉಪನ್ಯಾಸ ನೀಡಿ, ವಿದ್ಯಾರ್ಥಿಗಳಿಗೆ ಹಳೆಗನ್ನಡವನ್ನು ಸುಲಭ ಹಾಗೂ ಪರಿಣಾಮಕಾರಿಯಾಗಿ ಬೋಧಿಸಲು ಅನುಸರಿಸಬೇಕಾದ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಮಧ್ಯಾಹ್ನ ನಡೆದ ಗೋಷ್ಠಿಯಲ್ಲಿ ಡಾ.ರಾಜಕುಮಾರ ಅಲ್ಲೂರೆ ಅವರು ʼಹಳೆಗನ್ನಡ ಸಾಹಿತ್ಯದ ನೆಲೆಗಳುʼ ಕುರಿತು ಮಾತನಾಡಿ, ಹಳೆಗನ್ನಡ ಸಾಹಿತ್ಯದ ಬೆಳವಣಿಗೆಗೆ ಕಾರಣವಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಅಂಶಗಳನ್ನು ವಿವರಿಸಿದರು. ಅಂತಿಮ ಗೋಷ್ಠಿಯಲ್ಲಿ ಡಾ. ಲಕ್ಷ್ಮಿಕಾಂತ ಪಂಚಾಳ ಅವರು “ಹಳೆಗನ್ನಡ ಮತ್ತು ಸಮಕಾಲೀನ ಪಠ್ಯಗಳು” ವಿಷಯದ ಕುರಿತು ಉಪನ್ಯಾಸ ನೀಡಿ, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಹಳೆಗನ್ನಡ ಸಾಹಿತ್ಯವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಪ್ರತಿಪಾದಿಸಿದರು.

ಬಳಿಕ ಅಧ್ಯಾಪಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ಹಳೆಗನ್ನಡ ಸಾಹಿತ್ಯದ ಅಧ್ಯಯನ, ಬೋಧನೆ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಭಾಗವಹಿಸಿದ ಅಧ್ಯಾಪಕರು, ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿ : ಬೀದರ್‌ | ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಮನವಿ

ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಕುಲಸಚಿ ಪ್ರೊ. ಪರಮೇಶ್ವರ ನಾಯ್ಕ್, ವಿಶೇಷಾಧಿಕಾರಿ ಡಾ.ರವೀಂದ್ರನಾಥ ಗಬಾಡಿ ಸೇರಿದಂತೆ ವಿವಿಧ ಕಾಲೇಜುಗಳ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ಡಾ.ಸುನೀತಾ ಮಹೇಶ್ವರಿ ಸ್ವಾಗತಿಸಿದರು. ಡಾ.ಸುರೇಖಾ ಬಿರಾದಾರ್ ನಿರೂಪಿಸಿದರು, ಕು. ಕ್ಲೆಂಮೆಂಟಿನಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...