ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

Date:

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ) ಗ್ರಾಮದ ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು (ಬಿಎಸ್‌ಎಸ್‌ಕೆ) ಶೀಘ್ರ ಪುನಶ್ಚೇತನಗೊಳಿಸಿ ಪುನರಾರಂಭಿಸುವಂತೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

- Advertisement -

ಈ ಕುರಿತು ವೇದಿಕೆಯ ಬೀದರ್ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

“ಬಿಎಸ್‌ಎಸ್‌ಕೆ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವುದರಿಂದ ಕಬ್ಬು ಬೆಳೆಗಾರರು, ಕಾರ್ಮಿಕರು ಹಾಗೂ ಕಾರ್ಖಾನೆಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಕಾರ್ಖಾನೆ ಪುನರಾರಂಭಗೊಂಡರೆ ಕಬ್ಬು ಬೆಳೆಗಾರರಿಗೆ ಸ್ಥಳೀಯವಾಗಿಯೇ ಕಬ್ಬು ವಿಲೇವಾರಿಗೆ ಅನುಕೂಲವಾಗುವುದರ ಜೊತೆಗೆ ನೇರ ಹಾಗೂ ಪರೋಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬಿಎಸ್‌ಎಸ್‌ಕೆ ಕೇವಲ ಕೈಗಾರಿಕಾ ಘಟಕವಲ್ಲದೆ, ಜಿಲ್ಲೆಯ ರೈತರು ಮತ್ತು ಕಾರ್ಮಿಕರ ಆರ್ಥಿಕ ಬದುಕಿಗೆ ಪ್ರಮುಖ ಆಧಾರವಾಗಿದೆ. ಹೀಗಾಗಿ ಕಾರ್ಖಾನೆಯ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರ ಪುನಶ್ಚೇತನಗೊಳಿಸಿ ಪುನರಾರಂಭಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಈ ಸಂದರ್ಭದಲ್ಲಿ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ರಮೇಶ ಮರ್ಜಾಪೂರ, ಗೌರವಾಧ್ಯಕ್ಷ ಸೈಯದ್ ನವಾಜ್, ಉಪಾಧ್ಯಕ್ಷ ಮೊಹಸಿನ್ ಪಟೇಲ್, ಪ್ರಧಾನ ಕಾರ್ಯದರ್ಶಿ ತುಕಾರಾಮ ಚಿದ್ರಿ, ಮಹಿಳಾ ಘಟಕದ ಉಪಾಧ್ಯಕ್ಷೆ ತೇಜಮ್ಮಾ ಗುಂಡಪ್ಪ, ಕಾರ್ಯಾಧ್ಯಕ್ಷ ಸ್ಯಾಮವೇಲ್ ಸಾಜನ, ಕಾರ್ಮಿಕ ಘಟಕದ ಅಧ್ಯಕ್ಷ ಸಿಜಾವುದ್ದಿನ್, ಮೈನಾರಿಟಿ ಘಟಕದ ಅಧ್ಯಕ್ಷ ಎಂ.ಡಿ. ನವೀದ್, ಬೀದರ್ ಉತ್ತರ ತಾಲೂಕು ಅಧ್ಯಕ್ಷ ಮಾಣಿಕ್ ಸೋಲಾಪುರ, ತಾಲೂಕು ಕಾರ್ಯದರ್ಶಿ ಪ್ರಕಾಶ್ ಬಗದಲ, ಗುಂಡಪ್ಪ ಶಾಹಾಪುರ, ಎಂ.ಡಿ. ಇಕ್ಬಾಲ್, ಮೊಹಸಿನ್ ಮಾಳೆಗಾಂವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...