ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

Date:

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಪ್ರಜಾ ಸೇವಾ ಆಂದೋಲನದ ಅಂಗವಾಗಿ ಜನ ಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು.

- Advertisement -

ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನ್ನಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಗ್ರಾಮಗಳ ಸಾಮೂಹಿಕ ಸಮಸ್ಯೆಗಳನ್ನು ಶಾಸಕರ ಮುಂದೆ ಹೇಳಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ವಿದ್ಯುತ್, ಬೀದಿ ದೀಪ, ಕಂದಾಯ, ಪಿಂಚಣಿ, ಪಡಿತರ ಚೀಟಿ, ಕೃಷಿ, ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಲವು ಅಹವಾಲುಗಳನ್ನು ಸಲ್ಲಿಸಿದರು. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸಮಸ್ಯೆಗಳ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡರು. ಬಾಕಿ ಇರುವ ಸಮಸ್ಯೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಶೀಘ್ರ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisements

ಈ ವೇಳೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಜನರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡುವುದಲ್ಲ, ಅವುಗಳ ಪರಿಹಾರಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವುದು ಜನಪ್ರತಿನಿಧಿಯ ಕರ್ತವ್ಯ. ಸಾರ್ವಜನಿಕರು ವಿವಿಧ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ, ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜನ ಸ್ಪಂದನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ” ಎಂದು ಹೇಳಿದರು.

“ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳು ಸಮರ್ಪಕವಾಗಿ ತಲುಪಬೇಕು. ಅಧಿಕಾರಿಗಳು ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿ, ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಗಳ ವಾಸ್ತವಿಕ ಸ್ಥಿತಿಯನ್ನು ಅರಿತು ಪರಿಹಾರ ಕಂಡುಕೊಳ್ಳಬೇಕು. ವಿವಿಧ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಬೇಕು” ಎಂದು ಸೂಚಿಸಿದರು.

WhatsApp Image 2026 09 12 at 6.21.39 PM

ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ಪ್ರಜಾ ಸೇವಾ ಆಂದೋಲನದ ಮೂಲಕ ಕ್ಷೇತ್ರದ ವಿವಿಧ ಭಾಗಗಳಲ್ಲಿ ಇಂತಹ ಜನ ಸ್ಪಂದನ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

ಬೀದರ್ ತಹಶೀಲ್ದಾರ್ ರವಿಕುಮಾರ ದಾಮಾ‌ ಮಾತನಾಡಿ, “ಜನ ಸ್ಪಂದನ ಕಾರ್ಯಕ್ರಮದ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಲು ಉತ್ತಮ ಅವಕಾಶ ದೊರೆತಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸ್ವೀಕರಿಸಲಾದ ಅಹವಾಲುಗಳನ್ನು ಪರಿಶೀಲಿಸಿ, ನಿಯಮಾನುಸಾರ ಶೀಘ್ರವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.

ತಾಲೂಕು ಪಂಚಾಯಿತಿ ಇಒ ಮಾಣಿಕರಾವ್ ಪಾಟೀಲ್ ಮಾತನಾಡಿ, “ಜನ ಸ್ಪಂದನ ಕಾರ್ಯಕ್ರಮದ ಮೂಲಕ ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ : ವಚನ ಕಲ್ಯಾಣ | ಭಕ್ತಂಗೆ ಸುಖವೂ ಸರಿ, ದುಃಖವೂ ಸರಿ..

ಜನಸ್ಪಂದನದಲ್ಲಿ ಒಟ್ಟು 214 ದೂರುಗಳು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 183 ಕಂದಾಯ ಇಲಾಖೆಗೆ ಹಾಗೂ 10 ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ದೂರುಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. ಉಳಿದ ಅಹವಾಲುಗಳನ್ನು ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಶೀಲಿಸಿ ಶೀಘ್ರವಾಗಿ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ –...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...