ಬೀದರ್‌ | ಕನ್ನಡ ನಾಡು-ನುಡಿಗೆ ಜಯದೇವಿತಾಯಿ ಲಿಗಾಡೆ ಸೇವೆ ಅನನ್ಯ : ಬಸವರಾಜ ಮಯೂರ

Date:

ಕನ್ನಡ ನಾಡು-ನುಡಿ, ಸಾಹಿತ್ಯ ಹಾಗೂ ಸಮಾಜಸೇವೆ ಡಾ.ಜಯದೇವಿತಾಯಿ ಲಿಗಾಡೆ ಅವರ ಜೀವನದ ಉಸಿರಾಗಿದ್ದವು, ಲಿಗಾಡೆಯವರ ಸೇವೆ ಅನನ್ಯ ಎಂದು ಉಪನ್ಯಾಸಕ ಬಸವರಾಜ ಮಯೂರ ಅಭಿಪ್ರಾಯಪಟ್ಟರು.

- Advertisement -

ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಕರ್ನಾಟಕ ಪುಸ್ತಕ ಮಳಿಗೆಯಲ್ಲಿ ಪ್ರಭುರಾವ ಕಂಬಳಿವಾಲೆ ಪ್ರತಿಷ್ಠಾನ ಬೀದರ ಹಾಗೂ ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನ ಬಸವಕಲ್ಯಾಣ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಜಯದೇವಿತಾಯಿ ಲಿಗಾಡೆ ಅವರ 114ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

“ಜಯದೇವಿತಾಯಿ ಲಿಗಾಡೆ ಅವರು ಕನ್ನಡದ ನೆಲದವರಾಗಿದ್ದರೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜನಿಸಿದರು. ಮರಾಠಿ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದರೂ, ಶರಣ ಸಾಹಿತ್ಯದ ಮೇಲಿನ ಅಪಾರ ಅಭಿಮಾನದಿಂದ ನಾಲ್ಕು ಮಕ್ಕಳ ತಾಯಿಯಾದ ನಂತರ ಸ್ವಯಂಪ್ರೇರಣೆಯಿಂದ ಕನ್ನಡ ಕಲಿತು ಶ್ರೀಸಿದ್ದರಾಮೇಶ್ವರ ಪುರಾಣದಂತಹ ಮಹಾಕಾವ್ಯ ರಚಿಸಿದರು. ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಅವರು ತಮ್ಮ ರಕ್ತದಲ್ಲಿಯೇ ಪತ್ರ ಬರೆದು ಹೋರಾಟಗಾರರಿಗೆ ಸ್ಪೂರ್ತಿ ತುಂಬಿದರು. ಕರ್ನಾಟಕ–ಮಹಾರಾಷ್ಟ್ರ ಗಡಿಭಾಗದ ಶಾಲೆಗಳಲ್ಲಿ ಸ್ವಂತ ಖರ್ಚಿನಲ್ಲಿ ಸುಮಾರು 400 ಕನ್ನಡ ಶಿಕ್ಷಕರನ್ನು ನೇಮಿಸಿ ಕನ್ನಡ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದರು” ಎಂದರು.

“ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಿದ್ದ ಶ್ರೀ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಪ್ರವೇಶಿಸಿ ದೇವರ ದರ್ಶನ ಪಡೆಯುವ ಮೂಲಕ ಮಹಿಳಾ ಸ್ವಾತಂತ್ರ್ಯದ ದಿಟ್ಟ ಸಂದೇಶ ಸಾರಿದರು. ಅಲ್ಲದೆ ಸರಸ್ವತಿ ಸದನ ಹಾಗೂ ಮಹಿಳಾ ಮಂದಿರ ಸಂಸ್ಥೆಗಳ ಮೂಲಕ ಮಹಿಳೆಯರಿಗೆ ಅಕ್ಷರಾಭ್ಯಾಸ, ಹೊಲಿಗೆ ಮತ್ತು ಕಸೂತಿ ತರಬೇತಿ ನೀಡಿ ಮಹಿಳಾ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದರು” ಎಂದು ವಿವರಿಸಿದರು.

ಬೀದರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಂ.ಎಸ್.ಮನೋಹರ್ ಮಾತನಾಡಿ, “ಹೈದರಾಬಾದ್ ಸಂಸ್ಥಾನದ ವಿಲೀನ ಹೋರಾಟದ ಸಂದರ್ಭದಲ್ಲಿ ರಜಾಕಾರರ ದೌರ್ಜನ್ಯದಿಂದ ಸಂಕಷ್ಟಕ್ಕೊಳಗಾದ ಬೀದರ, ಕಲಬುರಗಿ ಹಾಗೂ ರಾಯಚೂರು ಭಾಗದ ನಿರಾಶ್ರಿತರಿಗೆ ಸೊಲ್ಲಾಪುರದಲ್ಲಿರುವ ತಮ್ಮ ತೋಟದಲ್ಲಿ ಗಂಜಿ ಕೇಂದ್ರ ತೆರೆಯುವ ಮೂಲಕ ಅನ್ನ ಹಾಗೂ ಆಶ್ರಯ ನೀಡಿದ ಮಾನವತಾವಾದಿ ಲಿಗಾಡೆ ತಾಯಿಯಾಗಿದ್ದರು. ನಿಜಾಮ ಸರ್ಕಾರ ನಿಷೇಧ ಹೇರಿದ್ದರೂ ಅದನ್ನು ಲೆಕ್ಕಿಸದೆ ಜಹೀರಾಬಾದ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಉದ್ದೇಶಿಸಿ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ ಧೀರ ಮಹಿಳೆ ಲಿಗಾಡೆ” ಎಂದು ಸ್ಮರಿಸಿದರು.

ಪತ್ರಕರ್ತ ನಾಗಶೆಟ್ಟಿ ಪಾಟೀಲ ಗಾದಗಿ ಮಾತನಾಡಿ, “ಶ್ರೀ ಪ್ರಭುರಾವ ಕಂಬಳಿವಾಲೆ, ಪೂಜ್ಯ ಚನ್ನಬಸವ ಪಟ್ಟದೇವರು ಹಾಗೂ ಡಾ. ಜಯದೇವಿತಾಯಿ ಲಿಗಾಡೆ ಅವರ ಶ್ರಮದಿಂದಲೇ ಬೀದರ ಕರ್ನಾಟಕದಲ್ಲಿ ಉಳಿಯಲು ಸಾಧ್ಯವಾಯಿತು. ಸರ್ಕಾರ ಈಗಾಗಲೇ ಅವರ ಹೆಸರಿನಲ್ಲಿ ಪ್ರತಿಷ್ಠಾನಗಳನ್ನು ರಚಿಸಿದ್ದು, ಅವುಗಳಿಗೆ ಅಧ್ಯಕ್ಷರನ್ನು ನೇಮಿಸಿ ಕಾರ್ಯಪ್ರವೃತ್ತಗೊಳಿಸಬೇಕು. ಇದರಿಂದ ಅವರ ಆದರ್ಶಗಳು ಮತ್ತು ವಿಚಾರಗಳು ಜನಸಾಮಾನ್ಯರಿಗೆ ಇನ್ನಷ್ಟು ತಲುಪಲಿವೆ” ಎಂದು ಆಗ್ರಹಿಸಿದರು.

ಇದನ್ನೂ ಓದಿ : ಔರಾದ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಶ್ರೀ ಪ್ರಭುರಾವ ಕಂಬಳಿವಾಲೆ ಪ್ರತಿಷ್ಠಾನದ ನಿರ್ದೇಶಕ ಶಾಂತಕುಮಾರ ಉದಗಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಷ್ಣುಕಾಂತ ಮಹೇಂದ್ರಕರ್ ಉಪಸ್ಥಿತರಿದ್ದರು. ಡಾ. ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ಕಾರ್ಯದರ್ಶಿ ದೇವಿಂದ್ರ ಬರಗಾಲೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...