ಜುಲೈ 27 ರಂದು ಬೀದರ ಉದ್ಯೋಗ ವಿನಿಮಯ ಕಚೇರಿಯಿಂದ ಉದ್ಯೋಗ ಮೇಳವನ್ನು ಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಬೀದರ-ಮನಳ್ಳಿ ರಸ್ತೆಯಲ್ಲಿ ಕುಂಬಾರವಾಡಾ ಕ್ರಾಸ್ ಎದುರುಗಡೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಿಯ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಈ ಮೇಳದಲ್ಲಿ ಯುವ ನಿಧಿ ಫಲಾನುಭವಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು, ಯುವನಿಧಿ ಅಭ್ಯರ್ಥಿಗಳು ತಪ್ಪದೇ ಈ ಮೇಳದಲ್ಲಿ ಭಾಗವಹಿಸಿ ಸದುಪಯೋಗಪಡೆಯಬೇಕು, ಮೇಳದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಸಂಪೂರ್ಣವಾಗಿ ಗೆದ್ದ ಸಿಜೆಪಿ; ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಒಪ್ಪಿಗೆ
ಭಾಗವಹಿಸುವ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 7892620675, 9886367517 ಹಾಗೂ 9100124287ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.





