ಬೀದರ್ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೇ 22ರಂದು ಬೀದರ್ ನಗರದಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನೀಮಯ ಕಛೇರಿ ಬೀದರ ವತಿಯಿಂದ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನೀಮಯ ಕಛೇರಿ ಬೀದರ, ಸರ್ಕಾರಿ ಐಟಿಐ ಕಾಲೇಜು ಆವರಣ, ಕುಂಬಾರವಾಡ ಕ್ರಾಸ್, ಮನ್ನಳ್ಳಿ ರೋಡ್ ಇಲ್ಲಿ ನಡೆಯಲಿದೆ.
ಈ ನೇರ ಸಂದರ್ಶನದಲ್ಲಿ ಮೆಡಪ್ಲಸ್ ಕಂಪನಿ ಭಾಗವಹಿಸುತ್ತಿದೆ. 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಪಿಯುಸಿ, ಪದವಿ, ಡಿ ಫಾರ್ಮಾ, ಬಿ ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು. ಗ್ರಾಮೀಣ ಆಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.
ಸಂದರ್ಶನದಲ್ಲಿ ಭಾಗವಹಿಸಲು ಇಚಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9901563260, 9164741989 ಗೆ ಕರೆ ಮಾಡಿ ತಮ್ಮ ಹೆಸರನ್ನು ಮೊದಲೇ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಗಡಿನಾಡು ಕನ್ನಡ ವಿದ್ಯಾರ್ಥಿಗಳ ಪ್ರಶಸ್ತಿ, ಶಿಷ್ಯವೇತನ ಬಿಡುಗಡೆಗೆ ಒತ್ತಾಯ




