ಬೀದರ್‌ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ

Date:

ಸಮಾಜದಲ್ಲಿ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಅವರು ಕರೆ ನೀಡಿದರು.

- Advertisement -

ಬೀದರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ನಗರದ ರಂಗ ಮಂದಿರದಲ್ಲಿ ಆಯೋಜಿಸಿದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಭಾರತದಲ್ಲಿ ಶಾಸನಾತ್ಮಕವಾಗಿ ಹಾಗೂ ಕಾನೂನಾತ್ಮಕವಾಗಿ ಬಾಲಕಾರ್ಮಿಕ ಪದ್ಧತಿಗೆ ಶಿಕ್ಷೆ ಇದೆ. ಬಾಲಕಾರ್ಮಿಕರನ್ನಾಗಿ ಮಕ್ಕಳನ್ನು ದುಡಿಸಿಕೊಳ್ಳುವ ಪಾಲಕರಲ್ಲಿ ಸೂಕ್ತ ಅರಿವು ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ. ಮಕ್ಕಳು ಮನೆಗಳಲ್ಲಿ ಕೆಲಸ ಮಾಡುವುದು ಹಿರಿಯರಿಗೆ ಗೌರವ ನೀಡಿದಂತೆ. ಆದರೆ 14 ವರ್ಷ ಒಳಗಿನ ಬಾಲಕಾರ್ಮಿಕರು ಹಾಗೂ 14 ರಿಂದ 18 ವರ್ಷ ಒಳಗಿನ ಕಿಶೋರ್ ಮಕ್ಕಳನ್ನು ಬಾಲಕಾರ್ಮಿಕತೆಗೆ ಬಳಸುವುದು ಅಪರಾಧ ಹಾಗೂ ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಇದೆ” ಎಂದು ಹೇಳಿದರು.

ಸಾಮಾನ್ಯ ಮಕ್ಕಳಂತೆ ಬಾಲಕಾರ್ಮಿಕ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಮಕ್ಕಳು ಬಾಲಕಾರ್ಮಿಕರಾಗಿ ಉಳಿಯುವುದರಿಂದ ದೇಶದ ಅಭಿವೃದ್ಧಿಗೆ ಮಾರಕ. ಅದರಂತೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೂ ತೊಂದರೆಯಾಗುವುದರಿಂದ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನೆರವಾಗಬೇಕು. ಮಕ್ಕಳ ಹಕ್ಕುಗಳ ಬಗ್ಗೆ  ಪಾಲಿಕ, ಪೋಷಕರಲ್ಲಿ ಸೂಕ್ತ ಅರಿವು ಮೂಡಿಸುವಂತೆ ಅವರು ಸಲಹೆ ನೀಡಿದರು.

photo 1 date 12 06 2026 1

“ನಮ್ಮ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ದೇಶದಲ್ಲಿ ಮಕ್ಕಳ ಮೇಲೆ ಹಲವು ರೀತಿಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿದೆ. ಬಾಲ್ಯ ವಿವಾಹ ತಡೆಯಲು 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು. ಪೋಷಕರು ಮಕ್ಕಳಿಗೆ ನೈತಿಕ ಶಿಕ್ಷಣ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ” ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಮಾತನಾಡಿ, “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ 2002ರಿಂದ ಇಡೀ ವಿಶ್ವದಲ್ಲಿ ಆಚರಣೆಯನ್ನು ಹಮ್ಮಿಕೊಳ್ಳಲಾಯಿತು. 18 ವರ್ಷ ಒಳಗಿನ ಮಕ್ಕಳು  ಬಾಲ ಕಾರ್ಮಿಕರು, ಮಕ್ಕಳು ಕೆಲಸ ಮಾಡಬಾರದು. ಯಾವುದೇ ಒಂದು ಮಗು ಸಹ ಕಾರ್ಖಾನೆ ಸೇರಿ ಎಲ್ಲಿಯೂ ಕೆಲಸ ಮಾಡಬಾರದು. ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿ ಎಲ್ಲ ಇಲಾಖೆಗಳು ಕೈಜೋಡಿಸಬೇಕು” ಎಂದರು.

ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೇಹಮಾನ ಅವರು ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾಥಾವು ಜಿಲ್ಲಾ ನ್ಯಾಯಾಲಯದಿಂದ ಜಾಥಾ ಕಾರ್ಯಕ್ರಮವು ತಹಶೀಲ್ ಕಛೇರಿ, ಬಸವೇಶ್ವರ ಚೌಕ, ಅಂಬೇಡ್ಕರ್ ವೃತ್ತದಿಂದ ರೋಟರಿ ಕ್ಲಬ್ ವೃತ್ತದ ಮಾರ್ಗವಾಗಿ ರಂಗಮಂದಿರವರೆಗೆ ನಡೆಯಿತು.

ಇದನ್ನೂ ಓದಿ : ಬೀದರ್‌ | ಕನೇರಿ ಶ್ರೀ ಪ್ರವೇಶ ನಿಷೇಧಿಸದಿದ್ದರೆ ಬಸವಕಲ್ಯಾಣ ಬಂದ್ : ಎಚ್ಚರಿಕೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ದಿಲೀಪ್ ಬದೋಲೆ, ಬೀದರ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಓಂಕಾರ ಎಸ್.ಆರ್, ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಮಠಪತಿ ಸಂಜಯ, ಬೀದರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೀಮಪ್ಪಾ ಬಿ.ಸರ್ಕುರೆ, ಬೀದರ ಬಾಲಕಾರ್ಮಿಕ ಯೋಜನಾ ಸೋಸೈಟಿ ಯೋಜನಾ ನಿರ್ದೇಶಕರ ಅರ್ಜುನ ಸೀತಾಳಗೇರ, ಕಾರ್ಮಿಕ ನಿರೀಕ್ಷಕ ಕೆ.ಸುವರ್ಣಾ, ಸಂತೋಷ ಗಾಯಕವಾಡ, ರಾಹುಲ ರತ್ನಾಕರ್, ಮಂಜುನಾಥ ಕಾರ್ಮಿಕ, ಸಂಜುಪಾಟೀಲ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.  

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...