ಬೀದರ್‌ | ಏ.11, 12ರಂದು 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ : 50 ಮಳಿಗೆ ಸ್ಥಾಪನೆ

Date:

ಬೀದರ್ ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಏ.11 ಹಾಗೂ 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 50ಕ್ಕೂ ಹೆಚ್ಚು ತಾತ್ಕಾಲಿಕ ಮಳಿಗೆಗಳು ಸ್ಥಾಪಿಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

- Advertisement -

ʼಒಟ್ಟು 50 ಮಳಿಗೆಯಲ್ಲಿ 30 ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆ, 20 ನೋಂದಣಿ ಹಾಗೂ ಇತರ ಮಳಿಗೆಗಳು ಇರಲಿವೆ. ವಸ್ತು ಪ್ರದರ್ಶನ ಮಳಿಗೆಗಳಲ್ಲಿ ಪತ್ರಿಕೆ, ಕ್ಯಾಮೆರಾ, ಕಾರ್ಟೂನ್, ಛಾಯಾಚಿತ್ರ ಪ್ರದರ್ಶನ ಮಳಿಗೆಗಳು ವಿಶೇಷ ಆಕರ್ಷಣೆ ಆಗಿರಲಿವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ತಾತ್ಕಾಲಿಕ ಮಳಿಗೆ, ಪ್ರಧಾನ ವೇದಿಕೆ ಹಾಗೂ ಇತರ ತಯಾರಿಗಳು ತೀವ್ರಗತಿಯಲ್ಲಿ ನಡೆದಿವೆ. ಒಟ್ಟು ಮೂರು ಸಾವಿರ ಆಸನಗಳನ್ನು ಹಾಕಲಾಗುತ್ತಿದೆ. ಎಲ್‍ಇಡಿ ಪರದೆಗಳನ್ನು ಅಳವಡಿಸಲಾಗುತ್ತಿದೆ ಎಂದು ಈಚೆಗೆ ಬೀದರ್‌ ಆಗಮಿಸಿದ ವೇಳೆ ಝೀರಾ ಕನ್ವೆನ್ಶನ್ ಹಾಲ್‍ಗೆ ಭೇಟಿ ನೀಡಿ ಸಮ್ಮೇಳನದ ಸಿದ್ಧತಾ ಕಾರ್ಯ ಪರಿಶೀಲಿಸಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೀದರ್ | ಬೇಸಿಗೆ ಬೆಳಿಗ್ಗೆಯೇ ಮಳೆ ಆರ್ಭಟ : ಸಿಡಿಲು ಬಡಿದು ಯುವಕ ಸಾವು

ಸಿದ್ಧತಾ ಪರಿಶೀಲನಾ ವೇಳೆ ಸಂಘದ ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ, ಜಿಲ್ಲಾ ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ, ಪತ್ರಕರ್ತರಾದ ಸಿದ್ರಾಮಯ್ಯ ಸ್ವಾಮಿ, ಪೃಥ್ವಿರಾಜ್ ಎಸ್, ನಂದಕುಮಾರ ಕರಂಜೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...