ಬೀದರ್‌ | ಪತ್ರಕರ್ತರ ಲೇಖನಿ ಸತ್ಯದ ಪರವಾಗಿರಲಿ : ಸಭಾಧ್ಯಕ್ಷ ಯು.ಟಿ.ಖಾದರ್

Date:

ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ. ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಲೇಖನಿ ಸದಾ ಸತ್ಯದ ಪರವಾಗಿರಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

- Advertisement -

ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಏಪ್ರಿಲ್ 12ರಂದು ನಡೆದ ಎರಡನೇ ದಿನ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನಮ್ಮ ದೇಶದ ಪ್ರಬಲ ಶಕ್ತಿಯಾದ ಪತ್ರಿಕೋದ್ಯಮ, ಪತ್ರಕರ್ತರು, ಈ ದೇಶದ ಎಲ್ಲ ಜನರು ಒಂದೇ ಎಂದು ಹೇಳುವ ಅವಶ್ಯಕತೆಯಿದೆ. ಪ್ರತಿಯೊಬ್ಬರಿಗೂ ಪ್ರೇರಣಾದಾಯಕವಾದ ಬರವಣಿಗೆಯ ಶಕ್ತಿಯನ್ನು ಪತ್ರಕರ್ತರು ಹೊಂದಬೇಕು. ರಾಜಕೀಯ ಮತ್ತು ಪತ್ರಿಕೋದ್ಯಮ ಸಮಾಜದ ಎರಡು ಕಣ್ಣುಗಳಿದ್ದಂತೆ. ಎರಡೂ ಉತ್ತಮವಾದಾಗ ಸಮಾಜವು ಸಂಪನ್ನವಾಗಿರಲು ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟರು.

“ಪತ್ರಿಕೆಗಳು ಬರೀ ಟೀಕೆ, ಹೊಗಳಿಕೆಗೆ ಮಾತ್ರ ಸೀಮಿತವಾಗಬಾರದು. ಉತ್ತಮವಾಗಿ ಕೆಲಸ ಮಾಡುವರಿಗೆ ಪ್ರೇರಣೆಯಾಗುವ ಕಾರ್ಯ ಮಾಡಬೇಕು. ಸತ್ಯ, ನ್ಯಾಯ, ಪ್ರಾಮಾಣಿಕತೆಯನ್ನು ಪ್ರತಿಪಾದಿಸಬೇಕು. ಕಣ್ಣು, ಕಿವಿ ತೆರೆದು ಸಮಾಜವನ್ನು ತಲಸ್ಪರ್ಶಿಯಾಗಿ ನೋಡಿದಾಗಲೇ ಉತ್ತಮ ಪತ್ರಕರ್ತನಾಗಲು ಸಾಧ್ಯವಿದೆ” ಎಂದು ಸಲಹೆ ನೀಡಿದರು.

ಪತ್ರಕರ್ತರಿಗೆ ಪತ್ರಿಕಾ ಸ್ವಾತಂತ್ರ್ಯವೇ ಪ್ರಾಣವಾಯು :

ʼ371(ಜೆ) ಸಾಂವಿಧಾನಿಕ ತಿದ್ದುಪಡಿಯಿಂದಾಗಿ ಕಲ್ಯಾಣ ಕರ್ನಾಟಕ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ಈ ಭಾಗದ ಅಭಿವೃದ್ಧಿಗೆ ಮಾಧ್ಯಮಗಳು ಸಲಹೆ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

WhatsApp Image 2026 04 12 at 6.46.13 PM
ಸಮ್ಮೇಳನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿದರು.

“ಅಭಿವ್ಯಕ್ತಿ ಸ್ವಾತಂತ್ರ್ಯದ ನೆಲೆಗಟ್ಟಿನಲ್ಲಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿದ್ದು, ಪತ್ರಿಕಾ ಸ್ವಾತಂತ್ರ್ಯ ಪತ್ರಕರ್ತರಿಗೆ ಜೀವಾಳವಾಗಿದೆ. ಎಲ್ಲ ಕ್ಷೇತ್ರದಲ್ಲೂ ಸ್ಪರ್ಧೆ ಇದ್ದಂತೆ ಮಾಧ್ಯಮ ರಂಗದಲ್ಲೂ ಸ್ಪರ್ಧೆ ಇದೆ. ನಾವೇ ಮೊದಲು ಎಂಬ ಧಾವಂತದಲ್ಲಿ ಅಸತ್ಯವಾದ, ಆಧಾರ ರಹಿತ ವರದಿ ಬಿತ್ತರವಾಗದಂತೆ ಮಾಧ್ಯಮಗಳು ಎಚ್ಚರ ವಹಿಸಬೇಕು” ಎಂದು ಸಲಹೆ ನೀಡಿದರು.

“ಜನಾಭಿಪ್ರಾಯ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಹಿರಿದಾಗಿದೆ. ಪತ್ರಕರ್ತರ ಮುಂದೆ ಅನೇಕ ಸವಾಲುಗಳಿವೆ. ಕಷ್ಟದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ರಕ್ಷಣೆ ನೀಡುವ ನೀಟ್ಟಿನಲ್ಲಿ ಸರ್ಕಾರ ಸ್ಪಂದಿಸಲಿದೆ. ಮಾಧ್ಯಮಗಳು ಸಮಾಜದ ಓರೆಕೋರೆಯನ್ನು ಎತ್ತಿ ತೋರಿಸುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡುತ್ತಿದ್ದವು. ಸಮಾಜದ ನಾಲ್ಕನೇ ಅಂಗವಾದ ಮಾಧ್ಯಮ ವಿಶ್ವಾಸಾರ್ಹತೆ ಗಳಿಸಬೇಕು. ಇಂದು ರಾಜ್ಯದಲ್ಲಿ ಪ್ರಕೃತಿ, ಪರಿಸರ ಹಾಗೂ ಅರಣ್ಯ ಉಳಿದಿದ್ದರೆ ಅದರಲ್ಲಿ ಮಾಧ್ಯಮಗಳ ಪಾತ್ರವೂ ಹಿರಿದಾಗಿದೆ” ಎಂದರು.

ಈ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ಇಲ್ಲಿ ಯಶಸ್ವಿಯಾಗಿ ನಡೆದಿದ್ದು, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮತ್ತು ಮಾಧ್ಯಮ ಕುರಿತಂತೆ ಹಾಗೂ ಗಡಿ ಭಾಗದ ಸಮಸ್ಯೆಗಳ ಬಗ್ಗೆ ಸಹ ಇಲ್ಲಿ ಚಿಂತನ ಮಂಥನ ಆಗಿರುವುದು ಸಂತೋಷದ ವಿಷಯವಾಗಿದೆ. ಯಾವುದೇ ಮಾಧ್ಯಮಕ್ಕೆ ತನ್ನ ವಿಶ್ವಾಸಾರ್ಹತೆಯೇ ಜೀವಾಳ. ಅದೇ ರೀತಿ ಪತ್ರಕರ್ತರಿಗೆ ಪತ್ರಿಕಾ ಸ್ವಾತಂತ್ರ್ಯವೇ ಪ್ರಾಣವಾಯು. ನೀವೆಲ್ಲರೂ ಸಮಾಜದ ಒಳಿತಿಗಾಗಿ ಕೆಲಸ ಮಾಡಿ, ಸಮಾಜಕ್ಕೆ ಹಿತವಾದ ಸುದ್ದಿ, ವರದಿ ಪ್ರಕಟಿಸಿ ಎಂದು ಹೇಳಿ, 40ನೇ ಪತ್ರಕರ್ತರ ಸಮ್ಮೇಳನದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದರು.

WhatsApp Image 2026 04 12 at 6.46.43 PM
ನಾಡಿನ ವಿವಿಧ ಕಡೆಯಿಂದ ಆಗಮಿಸಿದ ಪತ್ರಕರ್ತರು

ವಿರೋಧ ಪಕ್ಷದ ‌ನಾಯಕ ಆರ್.ಅಶೋಕ ಅವರು ಮಾತನಾಡಿ, ʼಪತ್ರಿಕೋದ್ಯಮವು ಈಗ ಹೊಸ ತಿರುವು ಪಡೆದಿದೆ. ಮಾಧ್ಯಮವನ್ನು ಕಪಿಮುಷ್ಟಿಯಲ್ಲಿಡಬಾರದು. ವಿರೋಧ ಪಕ್ಷದ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಎದೆಗಾರಿಕೆಯಿಂದ, ಧೈರ್ಯದಿಂದ ವೃತ್ತಿ ಮಾಡಿದಾಗ ಪತ್ರಿಕಾವೃತ್ತಿಯ ಘನತೆ ಹೆಚ್ಚಲಿದೆʼ ಎಂದರು.

ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ ಅವರು ಮಾತನಾಡಿ, ʼಪತ್ರಿಕಾವೃತ್ತಿ ಈಗ ಕಷ್ಟಕರವಾಗಿದೆ. ಹಾಗಾಗಿ ಸರ್ಕಾರ ಪತ್ರಕರ್ತರಿಗೆ ಸ್ಪಂದನೆ ನೀಡಬೇಕು. ಪತ್ರಕರ್ತರ ಸಂಘ ಕಟ್ಟಿದ ಡಿವಿಜಿ ಅವರ ಶ್ರಮವನ್ನು ಸ್ಮರಿಸಬೇಕುʼ ಎಂದರು.

WhatsApp Image 2026 04 12 at 6.46.29 PM
ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ಎಂ.ಜಿ.ಮೂಳೆ, ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟಸಿಂಗ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಮುಖಂಡರಾದ ರಮೇಶ ಪಾಟೀಲ, ಶಕುಂತಲಾ ಬೆಲ್ದಾಳೆ ಮತ್ತಿತರಿದ್ದರು. ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಸ್ವಾಗತಿಸಿದರು.

ರಾಯಚೂರನಲ್ಲಿ ಪತ್ರಕರ್ತರ 41ನೇ ರಾಜ್ಯ ಸಮ್ಮೇಳನ :

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ಪತ್ರಕರ್ತರ ರಾಜ್ಯ ಸಮ್ಮೇಳನ ರಾಯಚೂರಿನಲ್ಲಿ ನಡೆಯಲಿದೆ.

ಬೀದರ್ ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ನಡೆದ ಪ್ರತಿನಿಧಿಗಳ ಸಮಾವೇಶ/ಸರ್ವ ಸದಸ್ಯರ ಸಭೆಯಲ್ಲಿ ಈ ಕುರಿತು ಒಕ್ಕೂರಲ ತೀರ್ಮಾನ ಕೈಗೊಳ್ಳಲಾಯಿತು.‌

ರಾಯಚೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲಾ ಘಟಕಗಳು ಮುಂದಿನ ರಾಜ್ಯ ಸಮ್ಮೇಳನ ಆಯೋಜನೆಗೆ ಮುಂದೆ ಬಂದಿದ್ದವು. ರಾಯಚೂರಿನಲ್ಲಿ ಸಮ್ಮೇಳನ ನಡೆಸಲು ನಿರ್ಣಯಿಸಲಾಗಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಘೋಷಿಸಿದರು.

WhatsApp Image 2026 04 12 at 7.16.39 PM

ಸಂಘದ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಈ ಕುರಿತು ಜಿಲ್ಲಾ ಘಟಕಗಳಿಗೆ ಪತ್ರ ಬರೆದು ಅಭಿಪ್ರಾಯ ಪಡೆಯಲಾಗುವುದು. ಬಳಿಕ ರಾಜ್ಯ ಘಟಕದ ವಿಶೇಷ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಸಂಘದ ಬೈಲಾ ತಿದ್ದುಪಡಿ ಮಾಡಿ ಪದಾಧಿಕಾರಿಗಳ ಅವಧಿಯನ್ನು ಮೂರು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಬೇಕೇ ಅಥವಾ ಈಗಿರುವಂತೆ ಮೂರು ವರ್ಷಗಳಿಗೆ ಸೀಮಿತಗೊಳಿಸಬೇಕೇ ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಬೈಲಾ ತಿದ್ದುಪಡಿ ಸಂಬಂಧಿಸಿದಂತೆ ಸದಸ್ಯರಿಂದ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾದವು.

ಸದಸ್ಯರ ಗುರುತಿನ ಚೀಟಿಯ ಅವಧಿಯನ್ನು ಮೂರು ವರ್ಷಕ್ಕೆ ವಿಸ್ತರಣೆ ಮಾಡಬೇಕು. ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ವಿತರಣೆಯಲ್ಲಿನ ಸಮಸ್ಯೆ ಬಗೆಹರಿಸಬೇಕು. ನಕಲಿ ಪತ್ರಕರ್ತರ ಹಾವಳಿ ತಪ್ಪಿಸಬೇಕು ಎಂಬ ಒತ್ತಾಯ ಕೇಳಿ ಬಂದವು.

ಇದನ್ನೂ ಓದಿ : ಬೀದರ್‌ | ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವೈಷ್ಣವಿಗೆ ಸನ್ಮಾನ

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾದ ಮದನ್ ಪಾಟೀಲ, ಮತ್ತಿಕೆರೆ ಜೈರಾಮ್, ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಕಾರ್ಯದರ್ಶಿಗಳಾದ ಪುಂಡಲೀಕ ಬಾಳೋಜಿ, ಸೋಮಶೇಖರ ಕೆರೆಗೂಡು, ಲಿಂಗಪ್ಪ ಚಾವಡಿ, ಖಜಾಂಚಿ ವಾಸುದೇವ ಹೊಳ್ಳಾ, ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ, ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...