ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

Date:

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಜಾಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ಬೀದರ್ ನಗರದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯು ಪ್ರಮುಖರು ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

- Advertisement -

“ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು” ಎಂದು ಒತ್ತಾಯಿಸಿದರು .

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

“ಚುನಾವಣಾ ಆಯೋಗವು ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕ ಎದುರಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರು ಇತರ ಇಬ್ಬರು ಚುನಾವಣಾ ಆಯುಕ್ತರ ಅರಿವು ಮತ್ತು ಸಮ್ಮತಿಯಿಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂಬ ಆರೋಪಗಳು ಮಾಧ್ಯಮ ವರದಿಗಳ ಮೂಲಕ ಬಹಿರಂಗವಾಗಿವೆ. ಎಸ್‌ಐಆರ್ ಪ್ರಕ್ರಿಯೆಯ ಕಾನೂನುಬದ್ಧತೆ ಮತ್ತು ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ” ಎಂದು ಸಮಿತಿ ಆರೋಪಿಸಿದೆ.

ಹೊಸ ಮತದಾರರ ನೋಂದಣಿಗಾಗಿ ಬಳಸುವ ಫಾರಂ-6ಕ್ಕೆ ಎಸ್‌ಐಆರ್ ಅವಧಿಯಲ್ಲಿ ಘೋಷಣಾ ಪತ್ರವನ್ನು ಕಡ್ಡಾಯಗೊಳಿಸಿರುವುದು ಮತದಾರರ ಹಕ್ಕುಗಳನ್ನು ಮೊಟಕುಗೊಳಿಸುವ ಕ್ರಮವಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ರೀತಿಯಲ್ಲಿ ನಡೆಯಬೇಕು. ಆದರೆ, ಪ್ರಸ್ತುತ ಪ್ರಕ್ರಿಯೆಯಿಂದ ನೈಜ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ದೇಶದಾದ್ಯಂತ 13 ಕೋಟಿಗೂ ಹೆಚ್ಚು ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಹಿನ್ನೆಲೆಯಲ್ಲಿ ಸಮಗ್ರ ಪರಿಶೀಲನೆ ನಡೆಸಿ, ಮತದಾರರ ಹಕ್ಕುಗಳನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಮುಂಬರುವ ಚುನಾವಣೆಗಳನ್ನು ತಡೆಹಿಡಿಯಬೇಕು. 2023ರ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಯನ್ನು ರದ್ದುಗೊಳಿಸಿ, ಸ್ವತಂತ್ರ ಮತ್ತು ವಿಶ್ವಾಸಾರ್ಹ ಆಯ್ಕೆ ಪ್ರಕ್ರಿಯೆಯನ್ನು ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಚಾಲಕ ಅರುಣ ಪಟೇಲ್, ಜಿಲ್ಲಾ ಸಂಘಟಾ ಸಂಚಾಲಕ ರಾಜಕುಮಾರ ವಾಘಮಾರೆ, ಶ್ರೀನಿವಾಸ ದಯಾಳ ಭೀಮನಗರ, ಶಿರೋಮಣಿ ಹಲಗೆ, ಶಿವರಾಜ ತಡಪಳ್ಳಿ, ಬಸವರಾಜ ಭಾವಿದೊಡ್ಡಿ, ವಿಜಯಕುಮಾರ ಭಾವಿಕಟ್ಟಿ, ರಾಹುಲ ಹಾಲಹಿಪ್ಪರ್ಗಿಕರ್, ಮಹೇಶ ಗೋರನಾಳ, ಮಲ್ಲಿಕಾರ್ಜುನ ಮಾಳೆ, ಅಶೋಕ ಗಾಯಕವಾಡ, ಗೌತಮ ಮುತ್ತಂಗಿಕರ್ ಹಾಗೂ ವಿನಯಕುಮಾರ ಮಾಳಗೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ...

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...