ಬೀದರ್, ಕಲಬುರಗಿ ಕುಡಿಯುವ ನೀರು ಯೋಜನೆ : ಜಲಶಕ್ತಿ ಸಚಿವರಿಗೆ ಈಶ್ವರ ಖಂಡ್ರೆ ಮನವಿ

Date:

ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಸ್ಥಿರ ಕುಡಿಯುವ ನೀರು ಖಾತ್ರಿಪಡಿಸುವ ಯೋಜನೆ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಚರ್ಚಿಸಿದ್ದಾರೆ.

- Advertisement -

ಕರ್ನಾಟಕದ ಉತ್ತರ ತುದಿಯ ಈ ಎರಡು ಜಿಲ್ಲೆಗಳು ಕುಡಿಯುವ ನೀರಿನ ಕೊರತೆ ಎದುರಿಸುತ್ತಿವೆ, ಅಂತರ್ಜಲ ಮಟ್ಟವೂ ಕುಸಿದಿದೆ. ಹೀಗಾಗಿ ಮುಂದಿನ 30 ವರ್ಷಗಳವರೆಗೆ ಶಾಶ್ವತ, ಸುಸ್ಥಿರ ಮತ್ತು ಮೇಲ್ಮೈ ನೀರು ಆಧಾರಿತ ಕುಡಿಯುವ ನೀರಿನ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರವು ಈ ಸಮಗ್ರ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಗೊಳಿಸಲು ಪ್ರಾಥಮಿಕ ಯೋಜನಾ ವರದಿಯನ್ನು ಅಂತಿಮಗೊಳಿಸಿದೆ ಎಂದು ಕೇಂದ್ರ ಸಚಿವರಿಗೆ ತಿಳಿಸಿ, ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾರಾಯಣಪುರ ಜಲಾಶಯದ ಸುಸ್ಥಿರ ಮತ್ತು ದೀರ್ಘಕಾಲಿಕ ಸಂಗ್ರಹಣೆಯಿಂದ ನೀರನ್ನು ಎತ್ತುವಳಿ ಮಾಡುವ ಉದ್ದೇಶ ಹೊಂದಿದ್ದು, ಇದರ ಒಟ್ಟು ಅಂದಾಜು ವೆಚ್ಚ 7,200 ಕೋಟಿ ರೂ. ಆಗುತ್ತದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಟ್ಟು 28.09 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಸಲು ಈ ಯೋಜನೆ ಸಹಕಾರಿ ಆಗಲಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

18 ತಾಲ್ಲೂಕುಗಳು ಮತ್ತು 943 ಗ್ರಾಮಗಳನ್ನು ಒಳಗೊಂಡ ಈ ಉಪಕ್ರಮವು ಸುಮಾರು 200 ಎಂಎಲ್.ಡಿ. ನೀರಿನ ಅಗತ್ಯವನ್ನು ಪೂರೈಸುವ ಗುರಿಯನ್ನು ಹೊಂದಿದೆ. ಒಟ್ಟು ಫಲಾನುಭವಿಗಳ ಜನಸಂಖ್ಯಾ ವಿಭಜನೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) 6.76 ಲಕ್ಷ ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ) 1.84 ಲಕ್ಷ ಸೇರಿವೆ ಎಂಬ ವಿವರವನ್ನು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ!

ನೀರು ಜೀವಜಲವಾಗಿದ್ದು, ಗ್ರಾಮೀಣ ಜನರ ಕುಡಿಯುವ ನೀರು ಪೂರೈಕೆಯ ಹಿತದೃಷ್ಟಿಯಿಂದ ಈ ಯೋಜನೆಯನ್ನು ಅನುಮೋದಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಕೋರಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮತ್ತು ಇಲಾಖೆಯ ಅಧಿಕಾರಿಗಳು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....