ಬೀದರ್ | ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣ ಸಾಧ್ಯ

Date:

ಬಸವಾದಿ ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು.

- Advertisement -

ಬಸವಕಲ್ಯಾಣ ಬಸವ ಧರ್ಮ ಪೀಠ ಸಭಾಂಗಣದಲ್ಲಿ ಭಾನುವಾರ ನಡೆದ ಕಲ್ಯಾಣ ನಡಿಗೆ ಮತ್ತು ಹರಳಯ್ಯ ಜ್ಯೋತಿಯಾತ್ರೆ ಹಾಗೂ ಶರಣ ಸಂಸತ್, ಶರಣ ವಂದನೆ ಹಾಗೂ ಶರಣಾರತಿ ಸಮಾವೇಶದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದಿಂದ ಫೆ.15 ರಿಂದ ಬಸವಕುಮಾರ್ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆ ವಿವಿಧ ಗ್ರಾಮಗಳ ಮುಖಾಂತರ ಬಸವಕಲ್ಯಾಣದಲ್ಲಿ ಭಾನುವಾರ ಸಮಾವೇಶಗೊಂಡಿತು.

‘ಶರಣ ಹರಳಯ್ಯ ಕಲ್ಯಾಣಮ್ಮ ದಂಪತಿ ತಮ್ಮ ತೊಡೆ ಚರ್ಮದಿಂದ ತಯಾರಿಸಿದ ಚಮ್ಮಾವುಗೆಗಳಿರುವ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬಿಜನಳ್ಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅನುದಾನ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಬಿತ್ತಿದ ಬಸವಕಲ್ಯಾಣ ಜಗತ್ತಿನ ಪವಿತ್ರ ಕ್ಷೇತ್ರವಾಗಿದೆ. ಮುಂದಿನ ಶತಮಾನದಲ್ಲಿ ವಿಶ್ವದ ಎಲ್ಲ ಸಮುದಾಯದ ಜನರ ದಾರಿ ಬಸವಕಲ್ಯಾಣದತ್ತ ಬರುವಂತಾಗುತ್ತದೆ. ಬಸವಕಲ್ಯಾಣದ ತ್ರಿಪುರಾಂತ ಕೆರೆ ಅಭಿವೃದ್ಧಿ ಹಾಗೂ ಕೆರೆ ಮಧ್ಯದಲ್ಲಿ ನಿತ್ಯ ವಚನ ಪಠಣ ನಡೆಸಲು ವಚನ ಮಂಟಪ ನಿರ್ಮಿಸಲು ಸರ್ಕಾರ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.

1004974257

ಸಾನಿಧ್ಯ ವಹಿಸಿದ ಬಸವಕಲ್ಯಾಣ ಗುಣತೀರ್ಥವಾಡಿ ಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ, ‘ಲಿಂಗಾಯತ ಧರ್ಮ ಭಕ್ತಿ ಪ್ರಧಾನ ಧರ್ಮವಾಗಿದೆ. ಈ ಧರ್ಮಕ್ಕೆ ವೈಜ್ಞಾನಿಕ, ವೈಚಾರಿಕತೆಯ ಅರಿವು, ಆಚಾರ ಹಾಗೂ ಭಕ್ತಿ ತಳಹದಿಯಾಗಿದೆ. ಬಸವಣ್ಣನವರ ಬಹುತೇಕ ವಚನಗಳಲ್ಲಿ ಭಕ್ತಿ ಭಾವ ತುಂಬಿದೆ’ ಎಂದರು.

ಶಿಕ್ಷಕ ಮಹಾಂತೇಶ ಕುಂಬಾರ ಅವರು ಮಾತನಾಡಿ, ‘ಸಮಾಜದಲ್ಲಿ ಬಸವ ಪ್ರಜ್ಞೆ ಎಚ್ಚರಗೊಳಿಸುವ ಕೆಲಸ ಆಗಬೇಕು. ಧಾರ್ಮಿಕ ಪರಂಪರೆಯಾದ ಇಷ್ಟಲಿಂಗದ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಬಸವಾದಿ ಶರಣರ ಸಾಮಾಜಿಕ ಮೌಲ್ಯಗಳನ್ನು ಪಾಲಿಸಬೇಕು. ಮಕ್ಕಳಿಗೆ ಶರಣ ಸಂಸ್ಕೃತಿಯ ಆಶಯಗಳನ್ನು ತಿಳಿಸುವುದು ಅತ್ಯಗತ್ಯ’ ಎಂದರು ಹೇಳಿದರು.

ಬೇಲೂರು ಮಠದ ನಿಜಗುಣಾನಂದ ಸ್ವಾಮೀಜಿ, ಹುಲಸೂರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಸೇರಿದಂತೆ ಮತ್ತಿತರರು ಮಾತನಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಜಗತ್ತು ಬಯಸುತ್ತಿರುವುದು ಯುದ್ಧವನ್ನಲ್ಲ; ಶಾಂತಿ-ನೆಮ್ಮದಿಯನ್ನು

ನಿವೃತ್ತ ನ್ಯಾಯಾಧೀಶ ಶರಣ ಎಸ್.ಎಸ್. ನಾಗರಾಣೆ ವಹಿಸಿದ್ದರು. ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಪದ್ಮಶ್ರೀ ಪುರಸ್ಕೃತೆ ಸುಶೀಲಮ್ಮ , ಬಸವ ಧರ್ಮ ಪೀಠದ ಸಿದ್ದರಾಮೇಶ್ವರ ಸ್ವಾಮೀಜಿ, ಅನುಭವ ಮಂಟಪ ಸಂಚಾಲಕ ಶಿವಾನಂದ ಸ್ವಾಮೀಜಿ, ಧುಮ್ಮನಸೂರಿನ ಶಂಕರಲಿಂಗ ಸ್ವಾಮಿಜಿ, ಲಾವಣ್ಯ ಮಾತಾಜಿ, ಬಸವ ದೇವರು, ಸತ್ಯಕ್ಕ ಮಾತಾಜಿ, ಶರಣ ಪಂಡಿತ ಬಾಳೂರೆ, ವೀರಣ್ಮ ಕೊರ್ಲಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...