ಬೀದರ್‌ | ಅ.24, 25ರಂದು ʼಕಲ್ಯಾಣ ಪರ್ವʼ ರಜತ ಮಹೋತ್ಸವ

Date:

ಬಸವ ಧರ್ಮ ಪೀಠದ ಸ್ವಾಭಿಮಾನಿ ಹಾಗೂ ತತ್ವನಿಷ್ಠ ಶರಣರಿಂದ ಅಕ್ಟೋಬರ್ 24 ಮತ್ತು 25ರಂದು 25ನೇ ಕಲ್ಯಾಣ ಪರ್ವ ರಜತ ಮಹೋತ್ಸವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಅಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೀದರ್ ಜಿಲ್ಲಾ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ ಹಾಗೂ ಕ್ರಾಂತಿ ಗಂಗೋತ್ರಿ ಮಹಿಳಾ ಗಣದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“2002ರಲ್ಲಿ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಆರಂಭವಾದ ಕಲ್ಯಾಣ ಪರ್ವ ಇದೀಗ 25ನೇ ವರ್ಷಕ್ಕೆ ಕಾಲಿಟ್ಟಿದೆ. ಮಾತೆ ಮಹಾದೇವಿ ಅವರ ಆಶಯದಂತೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಬಸವದಳದ 25 ಶಾಖೆಗಳನ್ನು ಆಯ್ಕೆ ಮಾಡಿ ಅತ್ಯುತ್ತಮ ರಾಷ್ಟ್ರೀಯ ಬಸವದಳ ಪ್ರಶಸ್ತಿ ನೀಡಲಾಗುವುದು. ಲಿಂಗಾನಂದ ಅಪ್ಪಾಜಿ ಅವರ ಸ್ಮರಣಾರ್ಥ ಗೌರವ ಪುರಸ್ಕಾರವನ್ನೂ ಪ್ರದಾನ ಮಾಡಲಾಗುವುದು” ಎಂದು ಹೇಳಿದರು.

ಬಸವ ತತ್ವ ಅನುಸರಿಸುತ್ತಿರುವ 25 ಜೋಡಿ ದಂಪತಿಗಳಿಗೆ ‘ಆದರ್ಶ ಶರಣ ದಂಪತಿಗಳು’ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 25 ಸಾಧಕರಿಗೆ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕ್ರಾಂತಿ ಗಂಗೋತ್ರಿ ಮಹಿಳಾ ಗಣದ ರಾಷ್ಟ್ರೀಯ ಅಧ್ಯಕ್ಷೆ ಸತ್ಯಾದೇವಿ ಮಾತೆ ಮಾತನಾಡಿ, “ಕಲ್ಯಾಣ ಪರ್ವದಲ್ಲಿ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳು ಹಾಗೂ ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಸುಮಾರು 10 ಸಾವಿರಕ್ಕೂ ಅಧಿಕ ಬಸವ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಗಮಿಸುವ ಭಕ್ತರಿಗೆ ಪ್ರಸಾದ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು” ಎಂದರು.

ಅ.24ರಂದು ಬೆಳಿಗ್ಗೆ 6ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜೆ, 7ಕ್ಕೆ ವೇದಿಕೆ ದೈವೀಕರಣ ಹಾಗೂ ಶ್ರೀ ಬಸವೇಶ್ವರ ಪೂಜಾವೃತ್ತ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಕಲ್ಯಾಣ ಪರ್ವದ ರಜತ ಮಹೋತ್ಸವ ಉದ್ಘಾಟನಾ ಸಮಾರಂಭ ಹಾಗೂ ಲಿಂಗಾಯತ ಧರ್ಮದ ಮಾನ್ಯತೆ ಹೋರಾಟ ಕುರಿತು ಚಿಂತನಗೋಷ್ಠಿ ನಡೆಯಲಿದೆ.

ಅ.25ರಂದು ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಪಥಸಂಚಲನ, ಭವ್ಯ ಮೆರವಣಿಗೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ನಿಮ್ಕಡಿ ಸೋಯಾ ಕೊಯ್ಲಕ ಮಂದಿ ಸಿಗ್ತಾರೇನ್?

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ ಹಾರೂರಗೇರಿ, ಮಲ್ಲಿಕಾರ್ಜುನ ಶಾಪೂರ, ಮಲ್ಲಿಕಾರ್ಜುನ ಬುಕ್ಕಾ, ಬಸವರಾಜ ಸಂಗಮದ, ವಿಶ್ವನಾಥ ಪಾಟೀಲ ಗೊಂದೆಗಾಂವ, ರವಿಕಾಂತ ಬಿರಾದಾರ, ಸರಸ್ವತಿ ಶಟಕಾರ, ಮನ್ಮಥಯ್ಯ ಸ್ವಾಮಿ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...