ಬೀದರ್‌ | ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಿಸಿ : ಸಂಜೀವಕುಮಾರ ಅತಿವಾಳೆ

Date:

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಹೇಳಿದರು.

- Advertisement -

ಬೀದರ್ ನಗರದ ಕುಂಬಾರವಾಡ ರಸ್ತೆಯಲ್ಲಿ ಇರುವ ಕರುನಾಡು ಸಾಂಸ್ಕೃತಿಕ ಭವನದಲ್ಲಿ ಶ್ರೀ ಕನಕ ಕನ್ನಡ ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ʼಕನ್ನಡ ಹಾಗೂ ಕರ್ನಾಟಕ ರಾಜಪ್ರಭುತ್ವ, ಪರಕೀಯ ಪ್ರಭುತ್ವ ಹಾಗೂ ಪ್ರಜಾಪ್ರಭುತ್ವ ಕಾಲ ಘಟ್ಟದಲ್ಲಿ ಹಾದು ಬಂದಿವೆ. ಅನೇಕ ಸಾಂಸ್ಕೃತಿಕ ದಾಳಿ ಎದುರಿಸಿ, ಜಯಿಸಿವೆ. ತನ್ನ ಚಲನಶೀಲತೆಯಿಂದಾಗಿ ಇಂದಿಗೂ ಅಸ್ತಿತ್ವ ಉಳಿಸಿಕೊಂಡಿವೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಬಿ.ಸಿ. ಮಾತನಾಡಿ, ʼಜಿಲ್ಲೆಯಲ್ಲಿ ಕಲಾವಿದರಿಗೆ ಕೊರತೆ ಇಲ್ಲ. ಅವರಿಗೆ ವೇದಿಕೆ ಒದಗಿಸುವ ಕೆಲಸ ಆಗಬೇಕುʼ ಎಂದು ಹೇಳಿದರು.

ಸಾಹಿತಿ ಸಿದ್ದಮ್ಮ ಬಸವಣ್ಣೋರ್ ಮಾತನಾಡಿ, ʼಕನ್ನಡ ಸಾಹಿತ್ಯ, ಸಂಸ್ಕೃತಿ ಶ್ರೇಷ್ಠವಾಗಿದೆ. ಇವುಗಳಿಗೆ ಎರಡು ಸಾವಿರ ವರ್ಷಗಳ ಇತಿಹಾಸ ಇದೆʼ ಎಂದರು.

ಶಿಕ್ಷಕಿ ಗಾಯತ್ರಿ ಮೇತ್ರೆ ಮಾತನಾಡಿ, ʼಸಂಗೀತ ಹಾಗೂ ಇತರ ಸಾಂಸ್ಕೃತಿಕ ಚಟುವಟಿಕೆಗಳು ಮನಸ್ಸಿಗೆ ನೆಮ್ಮದಿ, ಆನಂದ ನೀಡುತ್ತವೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಡಾ.ಬಿ.ಆರ್.ಅಂಬೇಡ್ಕರವರ 135ನೇ ಜಯಂತಿ : ಅದ್ದೂರಿಯಾಗಿ ಆಚರಣೆಗೆ ನಿರ್ಧಾರ

ಕಲಾವಿದರಾದ ಮಲ್ಲಿಕಾರ್ಜುನ ರಾಂಪುರೆ, ಶ್ರೀದೇವಿ, ಸುಭಾಷ್ ಅಲ್ಲಾಪುರೆ, ವೀರಶೆಟ್ಟಿ ರಾಜೋಳೆ, ಗೌರಮ್ಮ ಮಲ್ಕಾಪುರೆ, ಅಂಬವ್ವ ಮಲ್ಕಾಪುರೆ, ಕಾಂಚನಾ, ಕೃಷ್ಣರಾಜ, ವಂಶಿಕಾ ಜಾಂಪಾಡೆ ಗಾಯನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀ ಕನಕ ಕನ್ನಡ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ಅರ್ಪಿತಾ ಎಸ್. ಬಾಪುರೆ ಅಧ್ಯಕ್ಷತೆ ವಹಿಸಿದ್ದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಅಂಜಲಿ ಬಾಪುರೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ...

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ...