ಬೀದರ್ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯು ನ.3ರಂದು ನಡೆದಿದ್ದು, ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಕಾಲೇಜಿನ ಪ್ರವೀಣ್, ಯುವರಾಜ್, ಪಪ್ಪು, ಸಂಗಮೇಶ ಹಾಗೂ ಸೋನಾಲ್‌ವೀರ್ ತಂಡದಲ್ಲಿ ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ. ತಂಡದ ಕ್ರೀಡಾಪಟು ಪ್ರವೀಣ್ (ತಂದೆ: ರಾಜಕುಮಾರ್), ಬಿ.ಎ. ಮೂರನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದು, ಬೀದರ್ ವಿಶ್ವವಿದ್ಯಾಲಯದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅವರು ನ.7ರಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಉಪಾಧ್ಯಕ್ಷ ಬಿ.ಜಿ. ಶೆಟಕಾರ, ಕಾರ್ಯದರ್ಶಿ ಸತೀಶ ಪಾಟೀಲ, ಜಂಟಿ ಕಾರ್ಯದರ್ಶಿ ಶಿವಾನಂದ ಗಾದಗೆ, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಸೋಮನಾಥ ಬಿರಾದರ, ಉಪಪ್ರಾಂಶುಪಾಲ ಡಾ. ಶಶೀಧರ ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮಾದಯ್ಯ ಸ್ವಾಮಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ : ಬೀದರ್ ವಿವಿ ನೂತನ ಮೌಲ್ಯಮಾಪನ ಕುಲಸಚಿವರಾಗಿ ರಾಜಕುಮಾರ್ ಮಾಲಿಪಾಟೀಲ ನೇಮಕ





