ಬೀದರ್‌ | ವಿಬಿ-ಜಿ ರಾಮ್‌ ಜಿ ಯೋಜನೆಯ ಜಾಗೃತಿಗೆ ಕಾಯಕ ಬಂಧುಗಳ ಸಂಘ ನಿರ್ಧಾರ

Date:

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ವಿಬಿ-ಜಿ ರಾಮ್‌ ಜಿ ಯೋಜನೆಯ ನಿಯಮಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೀದರ್ ತಾಲ್ಲೂಕಿನಾದ್ಯಂತ ಸಾರ್ವಜನಿಕ ಜಾಗೃತಿ ಹಾಗೂ ಮಾಹಿತಿ ಶಿಬಿರಗಳನ್ನು ಹಮ್ಮಿಕೊಳ್ಳಲು ಗ್ರಾಮ ಪಂಚಾಯತ್ ಕಾರ್ಮಿಕ ಮತ್ತು ಕಾರ್ಯಕರ್ತ ಬಂಧುಗಳ ಅಭಿವೃದ್ಧಿ ಸಂಘ ಜಿಲ್ಲಾ ಘಟಕ ನಿರ್ಧರಿಸಿದೆ.

- Advertisement -

ಈ ಕುರಿತು ಸಂಘದ ಪದಾಧಿಕಾರಿಗಳು ಬೀದರ್‌ ತಾಲೂಕು ಪಂಚಾಯತ್‌ ಇಒ ಮಾಣಿಕರಾವ್‌ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಕಾರ್ಯಕ್ರಮಗಳಿಗೆ ಅಗತ್ಯವಿರುವ ಸ್ಥಳಾವಕಾಶ, ಮೂಲಸೌಕರ್ಯ ಹಾಗೂ ಸ್ಥಳೀಯ ಕೂಲಿ ಕಾರ್ಮಿಕರನ್ನು ಒಟ್ಟುಗೂಡಿಸಲು ಸಹಕಾರ ನೀಡಬೇಕು. ಹೊಸ ವಿಬಿ-ಜಿ ರಾಮ್‌ ಜಿ ಯೋಜನೆಯು ವಾರ್ಷಿಕ ಉದ್ಯೋಗದ ದಿನಗಳನ್ನು 125 ದಿನಗಳಿಗೆ ಹೆಚ್ಚಿಸಲಾಗಿದ್ದು, ಬಯೋಮೆಟ್ರಿಕ್ ಹಾಜರಾತಿ ಸೇರಿದಂತೆ ಡಿಜಿಟಲ್ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು, ಕೂಲಿ ಕಾರ್ಮಿಕರು ಹಾಗೂ ಅರ್ಹ ಫಲಾನುಭವಿಗಳಿಗೆ ಸಮಗ್ರ ಮಾಹಿತಿ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶೇಷ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗುವುದು. ಯೋಜನೆಯ ಅರ್ಹತೆ, ನೋಂದಣಿ, ಉದ್ಯೋಗ ಪಡೆಯುವ ವಿಧಾನ, ಹಾಜರಾತಿ, ಕೂಲಿ ಪಾವತಿ ಹಾಗೂ ಕಾರ್ಮಿಕರ ಹಕ್ಕುಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು. ಸಂಘದ ಜಾಗೃತಿ ಕಾರ್ಯಕ್ರಮಗಳಿಗೆ ಎಲ್ಲ ಗ್ರಾಮ ಪಂಚಾಯತ್‌ಗಳಿಗೆ ಅಗತ್ಯ ಸಹಕಾರ ನೀಡುವಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮಾಸಾಶನ ಬಿಡುಗಡೆಗೆ ಜೈಕರವೇ ಆಗ್ರಹ

ಅಧ್ಯಕ್ಷ ರಾಜಕುಮಾರ ಭಾವಿದೊಡ್ಡೆ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಜಡಗೆ ಹಾಗೂ ಸದಸ್ಯ ಸುರೇಶ ಮರಖಲ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ನಿಟ್ಟೂರ(ಬಿ) ಗ್ರಾಮದಲ್ಲಿ ನೈರ್ಮಲ್ಯ‌, ಶುದ್ಧ ನೀರು ಮರೀಚಿಕೆ!

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...

ಡಿಕೆಶಿ ಭರವಸೆಯಷ್ಟೇ ಸಾಲದು ಎಂದ ಕಬ್ಬು ಬೆಳೆಗಾರರು; ಪ್ರತಿಭಟನೆ ತೀವ್ರ!

ಕಬ್ಬಿಗೆ ನ್ಯಾಯಯುತ, ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿ ಸೇರಿದಂತೆ ನಾನಾ...