ಬೀದರ್‌ | ಕನ್ನಡ ಬಳಕೆಯಿಂದ ಭಾಷೆ ಬೆಳೆಯಲು ಸಾಧ್ಯ : ಭಾರತಿ ವಸ್ತ್ರದ

Date:

ಕನ್ನಡ ನಾಡು-ನುಡಿ, ಭಾರತ ಸಂಸ್ಕೃತಿ ಎಲ್ಲವೂ ಸಮೃದ್ಧಿಯಾಗಿದೆ. ಕನ್ನಡ ಹೆಚ್ಚು ಬಳಕೆಯಾದರೆ ಮಾತ್ರ ಕನ್ನಡ ಬೆಳೆದು ಉಳಿಯಲು ಸಾಧ್ಯ ಎಂದು ಹಿರಿಯ ಸಾಹಿತಿ ಭಾರತಿ ವಸ್ತ್ರದ ನುಡಿದರು.

- Advertisement -

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಮಾನವ ಸಂದೇಶ ನೀಡಿದ ಮಹಾಕವಿ ಕುವೆಂಪು ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ʼಕುವೆಂಪು ಮಹಾನ್ ವ್ಯಕ್ತಿ, ಕನ್ನಡದ ಆಸ್ತಿಯಾಗಿದ್ದಾರೆ. ಅವರು ಬರೆದ ಅನೇಕ ಕಾದಂಬರಿಗಳು ಚಲನಚಿತ್ರಗಳಾಗಿವೆ. ಕುವೆಂಪು ಸಾಹಿತ್ಯ ಹೆಚ್ಚು ಅಧ್ಯಯನ ನಡೆಸಬೇಕುʼ ಎಂದರು.

ಚಿಟ್ಟವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ಬಿರಾದಾರ ಮಾತನಾಡಿ, ʼಗಡಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವ ಜೊತೆಗೆ ಗಡಿ ಭಾಗದಲ್ಲಿ ಕುವೆಂಪು ಅವರನ್ನು ಪರಿಚಯಿಸುವ ಕಾರ್ಯ ಆಗಬೇಕಿದೆ. ನಮ್ಮ ಅನುಕೂಲಕ್ಕೆ ತಕ್ಕಂತೆ ಕನ್ನಡ ಬಳಸಬಹುದುʼ ಎಂದರು.

ನೌಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ರಾಜಕುಮಾರ ಅಲ್ಲೂರೆ ಅವರು ವಿಶೇಷ ಉಪನ್ಯಾಸ ನೀಡಿ, ʼತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಕನ್ನಡವನ್ನು ಬಳಸಬೇಕು. ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸುವ ಕಾರ್ಯದಲ್ಲಿ ಕನ್ನಡ ಬಳಕೆ ಹೆಚ್ಚಳವಾಗಬೇಕಿದೆ. ಕುವೆಂಪು ಸಾಹಿತ್ಯದಲ್ಲಿ ವೈಚಾರಿಕ, ವೈಜ್ಞಾನಿಕ ಚಿಂತನೆಯಿದೆ. ಎಲ್ಲರೂ ಕುವೆಂಪು ಸಾಹಿತ್ಯ ಓದಬೇಕುʼ ಎಂದು ತಿಳಿಸಿದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕಿ ಡಾ.ಮಕ್ತುಂಬಿ ಎಂ. ಮಾತನಾಡಿ, ʼಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಪುಸ್ತಕಗಳನ್ನು ಮಕ್ಕಳಿಗೆ ಕೊಟ್ಟು ಪ್ರೋತ್ಸಾಹ ನೀಡಬೇಕು. ಒಂದು ಸಲ ಓದುವ ಹವ್ಯಾಸ ಬೆಳೆಸಿಕೊಂಡರೆ ಅವರು ಮುಂದುವರೆಸಿಕೊಂಡು ಹೋಗುತ್ತಾರೆ. ಹೆಚ್ಚಿನ ಪುಸ್ತಕ ಓದು ಜ್ಞಾನ ವೃದ್ಧಿಸುತ್ತದೆʼ ಎಂದರು.

ಮುಖ್ಯ ಅತಿಥಿಗಳಾದ ಪಾಂಡುರಂಗ ಬೆಂಬೂಳಗಿ ಮಾತನಾಡಿ, ʼಕಲಿಕೆ ಎಂಬುದು ಬದುಕಿನೂದ್ದಕ್ಕೂ ನಿರಂತರವಾಗಿರುತ್ತದೆ. ಶ್ರದ್ಧೆ, ಭಕ್ತಿ, ಜ್ಞಾನ ನಮ್ಮನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತದೆʼ ಎಂದು ನುಡಿದರು.

ಇದನ್ನೂ ಓದಿ : ಬೀದರ್‌ | ಅಸ್ಪೃಶ್ಯತೆ ಆಚರಣೆಗೆ ತಡೆಗೆ ಆಗ್ರಹ

ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಲಕ್ಷ್ಮಿಕಾಂತ ಶಂಕರರಾವ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೌರಮ್ಮ ಅವರು ಜನಪದ ಗೀತೆ ಹಾಡಿದರು. ರಮೇಶ ಪೂಜಾರಿ ನಿರೂಪಿಸಿದರು. ಗೌಡಪ್ಪ ಜಿ ಸ್ವಾಗತಿಸಿದರು. ವೀರಶೆಟ್ಟಿ ಕುಂಬಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...