ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

Date:

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ ಎರಡನೇ ಹಂತದ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಎಚ್ಚರಿಕೆ ನೀಡಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಬೀದರ್ ಜಿಲ್ಲೆಯ ಏಕೈಕ ಬೃಹತ್ ನೀರಾವರಿ ಯೋಜನೆಯಾದ ಕಾರಂಜಾ ಯೋಜನೆ ಜಿಲ್ಲೆಯ ಜನರ ಜೀವನಾಡಿಯಾಗಿದೆ. ಆದರೆ, ಈ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಐದು ದಶಕಗಳು ಕಳೆದರೂ ಸಮರ್ಪಕ ಪರಿಹಾರ ದೊರೆತಿಲ್ಲ. ಕಲ್ಯಾಣ ಕರ್ನಾಟಕ ಹಾಗೂ ಬೀದರ್ ಜಿಲ್ಲೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

“ಕಾರಂಜಾ ಯೋಜನೆಗಾಗಿ ಐದು ದಶಕಗಳ ಹಿಂದೆ ಯಾವುದೇ ಷರತ್ತಿಲ್ಲದೆ ಭೂಮಿ ನೀಡಿದ ರೈತರಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ದಿ. ಎನ್. ಧರ್ಮಸಿಂಗ್ ಅವರ ಆಡಳಿತಾವಧಿಯಲ್ಲಿ 2005ರಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಸಮಿತಿ ಶಿಫಾರಸು ಮಾಡಿದ್ದರೂ, 2014ರಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆ ಶಿಫಾರಸನ್ನು ತಿರಸ್ಕರಿಸಲಾಯಿತು. 2018ರಲ್ಲಿ ಅಂದಿನ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ಪರಿಹಾರ ನೀಡುವ ಭರವಸೆ ನೀಡಿದ್ದರೂ ಅದನ್ನು ಈಡೇರಿಸಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022ರಿಂದ ಸತತ 920 ದಿನಗಳ ಕಾಲ ಅಹೋರಾತ್ರಿ ಸತ್ಯಾಗ್ರಹ ನಡೆಸಿದ ಬಳಿಕ ಸರ್ಕಾರ ಹೋರಾಟಕ್ಕೆ ಸ್ಪಂದಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಪಕ್ಷಗಳ ಶಾಸಕರ ಸಹಕಾರದೊಂದಿಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಲಾಗಿತ್ತು. ಬೆಂಗಳೂರಿನಲ್ಲಿ ಹಾಗೂ ಬೀದರ್‌ನಲ್ಲಿಯೂ ಮುಖ್ಯಮಂತ್ರಿಗಳು ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ, ತೆಲಂಗಾಣ ಮುಖ್ಯಮಂತ್ರಿಗಳನ್ನು ಸಂಪರ್ಕಿಸುವಂತೆ ಸೂಚಿಸಿದರೆ ಮುಂದಿನ ಹೋರಾಟದ ಕುರಿತು ಗಂಭೀರವಾಗಿ ಚಿಂತಿಸಬೇಕಾಗುತ್ತದೆ. ಈ ಸಂಬಂಧ ಒಂದೆರಡು ದಿನಗಳಲ್ಲಿ ಸಭೆ ನಡೆಸಿ ಹೋರಾಟದ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು. ಅಲ್ಲದೆ, ‘ಹೋರಾಟ ಸಮಿತಿಯ ನಡೆ ಜನಪ್ರತಿನಿಧಿಗಳ ಮನೆ ಕಡೆ’ ಎಂಬ ಅಭಿಯಾನ ಹಮ್ಮಿಕೊಂಡು ಜನಪ್ರತಿನಿಧಿಗಳ ಮನೆಗಳ ಮುಂದೆ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಚಿಂತಕ ಪ್ರೊ. ಆರ್.ಕೆ.ಹುಡುಗಿ ಮಾತನಾಡಿ, “ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳಿಕೊಳ್ಳುತ್ತದೆ. ಆದರೆ, ನಮ್ಮ ಸಮಿತಿಯೊಂದಿಗೆ ಈಗಾಗಲೇ ಎರಡು-ಮೂರು ಬಾರಿ ಸಭೆ ನಡೆಸಿದ್ದರೂ ಸಂತ್ರಸ್ತ ರೈತರಿಗೆ ಪರಿಹಾರ ನೀಡದಿರುವುದೇಕೆ ಎಂಬುದೇ ನಮ್ಮ ಮುಂದಿರುವ ಪ್ರಶ್ನೆಯಾಗಿದೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚ್ಚಕ್ಕನಳ್ಳಿ, ಚಿಂತಕ ವಿನಯಕುಮಾರ ಮಾಳಗೆ, ಪ್ರಮುಖರಾದ ರಾಜಪ್ಪ ಕೋಸಂ, ರಾಜಶೇಖರ, ಯೂಸುಫ್ ಮಿಯಾ, ವೀರೇಂದ್ರ ಭತ್ಮೂರ್ಗೆ, ಸಂಗಾರೆಡ್ಡಿ, ಚಂದ್ರಶೇಖರ ಮುತ್ತಣ್ಣ, ಮಾದಪ್ಪ, ರೋಹನ್ ಕುಮಾರ ಹಾಗೂ ಲಕ್ಷ್ಮೀಬಾಯಿ ಕೌದೆ ಉಪಸ್ಥಿತರಿದ್ದರು.

ಇದನ್ನೂ ಓದಿ : ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

WhatsApp Image 2026 11 13 at 8.18.17 PM 3





eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...