ಬೀದರ್‌ | ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಲಿ

Date:

ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಬೇಕು ಎಂದು ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಹಾವಗಿರಾವ್ ಮೈಲಾರೆ ಹೇಳಿದರು.

- Advertisement -

ಬೀದರ್ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಬಿ.ಎ. ಹಾಗೂ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಹೆಣ್ಣು ಮಕ್ಕಳು ಈಗ ಸಬಲೆ ಆಗಿದ್ದಾರೆ. ಹೀಗಾಗಿ ತಾನು ಅಬಲೆ ಎನ್ನುವ ಕೀಳರಿಮೆಯನ್ನು ತೊಡೆದು ಹಾಕಬೇಕು. ಜೀವನದಲ್ಲಿ ಯಶಸ್ಸು ಗಳಿಸಲು ತಾಳ್ಮೆ ಹಾಗೂ ಸಹನೆ ಬಹಳ ಅವಶ್ಯಕ” ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಆರ್.ವಿ. ಗಂಗಶೆಟ್ಟಿ ಮಾತನಾಡಿ, “ಶ್ರಮಜೀವಿಗಳು ಜೀವನದಲ್ಲಿ ಎಂದೂ ವಿಫಲವಾಗುವುದಿಲ್ಲ. ಸತತ ಪರಿಶ್ರಮ ವಹಿಸಿದರೆ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹೀಗಾಗಿ ವಿದ್ಯಾರ್ಥಿನಿಯರು ಜೀವನದಲ್ಲಿ ಗುರಿ ಇಟ್ಟುಕೊಂಡು, ಅದರ ಸಾಕಾರಕ್ಕೆ ಪ್ರಯತ್ನಿಸಬೇಕು” ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ನಾಗಪ್ಪ ಜಾನಕನೋರ ಮಾತನಾಡಿ, ʼವಿದ್ಯಾರ್ಥಿನಿಯರು ಪದವಿಗಷ್ಟೇ ಸೀಮಿತರಾಗಬಾರದು. ಉನ್ನತ ಶಿಕ್ಷಣ ಪಡೆದು ಕುಟುಂಬ, ಕಲಿತ ಸಂಸ್ಥೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕುʼ ಎಂದು ಸಲಹೆ ನೀಡಿದರು.

ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ.ಚಂದ್ರಪ್ಪ ಭತಮುರ್ಗೆ ಮಾತನಾಡಿ, ʼವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸಿ ಅವರ ಮಾತಿಗೆ ಬೆಲೆ ಕೊಡುವುದನ್ನು ಕಲಿಯಬೇಕುʼ ಎಂದು ಹೇಳಿದರು.

ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಮಾತನಾಡಿ, ʼವಿದ್ಯಾರ್ಥಿನಿಯರು ಸಂಬಂಧಗಳಿಗೆ ಬೆಲೆ ಕೊಡಬೇಕು. ಹೊಂದಾಣಿಕೆ ಗುಣ ರೂಢಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಶಹಾಪುರನಲ್ಲಿ ಮೇ 15ಕ್ಕೆ ʼಬಸವಾದಿ ಶರಣರ ಜಾಗೃತಿ ಸಮಾವೇಶʼ

ಉಪನ್ಯಾಸಕರಾದ ಈಶ್ವರ ರೆಡ್ಡಿ, ರಾಜಶೇಖರ ಸಜ್ಜನ್, ಡಾ. ಪಂಡಿತ, ದೇವೇಂದ್ರ ಪೂಜಾರಿ, ನಟರಾಜ್ ಸುತಾರ್, ಬಸವರಾಜ ಬಿರಾದಾರ, ಡಾ. ಸಂಗಪ್ಪ ತೌಡಿ, ಡಾ. ಪ್ರವೀಣ್, ಮಂಗಲಾ, ಶ್ರೀಲತಾ, ರಾಜಮ್ಮ ನೇಳಗೆ, ರಾಖಿ ಕಾಡಗೆ, ವಿಜಯಲಕ್ಷ್ಮಿ ಶೆಟಕಾರ್, ಸಪ್ನಾ ಸ್ವಾಮಿ, ಅರ್ಚನಾ, ವಿಜಯಲಕ್ಷ್ಮಿ ಸ್ವಾಮಿ, ಸಿಬ್ಬಂದಿ ಮನೋಹರ ಶೆಟ್ಟಿ, ಆಕಾಶ್, ಶೋಭಾ ಮತ್ತಿತರರು ಇದ್ದರು. ವಿದ್ಯಾರ್ಥಿನಿ ಕನಿಕರ ನಿರೂಪಿಸಿದರು. ವೈಷ್ಣವಿ ಸ್ವಾಗತಿಸಿದರು. ಶ್ವೇತಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...