ಬೀದರ್‌ | ಸಂಶೋಧನೆ ವ್ಯಕ್ತಿತ್ವ ನಿರ್ಮಾಣದ ಸಾಧನವಾಗಲಿ: ವೀರೇಶ ಬಡಿಗೇರ

Date:

ಸಂಶೋಧನೆಯು ಕೇವಲ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯಾಗದೆ, ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾದ ಸಾಧನವಾಗಬೇಕು ಎಂದು ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ವೀರೇಶ ಬಡಿಗೇರ ಅಭಿಪ್ರಾಯಪಟ್ಟರು.

- Advertisement -

ನಗರದ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ವಿಭಾಗದ ವತಿಯಿಂದ ‘ಕನ್ನಡ ಸಾಹಿತ್ಯದಲ್ಲಿ ಸಂಶೋಧನೆಯ ಸಾಧ್ಯತೆಗಳು’ ವಿಷಯದ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

“ಸಂಶೋಧಕರು ಸರಿಯಾದ ಮಾರ್ಗದಲ್ಲಿ ಅಧ್ಯಯನ ಕೈಗೊಂಡು, ಸತ್ಯದ ಶೋಧನೆಯತ್ತ ಮುನ್ನಡೆಯಬೇಕು. ವಿವಿಧ ಮಾರ್ಗಗಳನ್ನು ಅನುಸರಿಸುವ ಮೂಲಕ ಸಂಶೋಧನೆಯ ವಿಭಿನ್ನ ಆಯಾಮಗಳನ್ನು ಅನಾವರಣಗೊಳಿಸಬೇಕು. ಉತ್ತಮ ವಿಚಾರಗಳನ್ನು ವಿಮರ್ಶಾತ್ಮಕವಾಗಿ ಅವಲೋಕಿಸುವುದರ ಜೊತೆಗೆ, ಸ್ವತಂತ್ರವಾಗಿ ಅಭಿಪ್ರಾಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಸಂಶೋಧನೆ ನಡೆಯಬೇಕು” ಎಂದು ಹೇಳಿದರು.

“ಸಂಶೋಧನೆಯು ಕೇವಲ ಸಂಶೋಧಕರಿಗೆ ಸೀಮಿತವಾಗದೆ, ಓದುಗರಲ್ಲಿ ಹೊಸ ಚಿಂತನೆ, ಪ್ರೇರಣೆ ಹಾಗೂ ಸಂಶೋಧನಾ ಮನೋಭಾವವನ್ನು ಬೆಳೆಸುವಂತಿರಬೇಕು. ಈ ನಿಟ್ಟಿನಲ್ಲಿ ಸಂಶೋಧಕರು ತಮ್ಮ ಅಧ್ಯಯನವನ್ನು ಹೊಸ ದೃಷ್ಟಿಕೋನದೊಂದಿಗೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಸತೀಶ ಪಾಟೀಲ ಮಾತನಾಡಿ, “ಸಂಶೋಧನೆಯು ಯಾವುದೇ ಪುಸ್ತಕದ ಪ್ರತಿಯಾಗಬಾರದು. ಸ್ವಂತ ಅಧ್ಯಯನ, ವಿಶ್ಲೇಷಣೆ ಮತ್ತು ಚಿಂತನೆಯ ಮೂಲಕ ಹೊಸತನವನ್ನು ಕಟ್ಟಿಕೊಡುವಂತಿರಬೇಕು” ಎಂದು ಹೇಳಿದರು.

WhatsApp Image 2026 08 14 at 11.58.13 AM 6

ಇದನ್ನೂ ಓದಿ : ಬೀದರ್‌ | ಆ.26ರಿಂದ ಸೀರತ್ ಅಭಿಯಾನ, ವಿವಿಧ ಕಾರ್ಯಕ್ರಮ ಆಯೋಜನೆ

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಲ್ಯಾಣ ಕರ್ನಾಟಕ ಸಂಶೋಧನಾ ಕೇಂದ್ರದ ಮಾರ್ಗದರ್ಶಕ ಡಾ. ಲಕ್ಷ್ಮಿಕಾಂತ ಪಂಚಾಳ ಹಾಗೂ ಡಾ. ಅಶೋಕ ಕೋರೆ, ಪ್ರಾಚಾರ್ಯ ಪ್ರೊ.ಸೋಮನಾಥ ಬಿರಾದಾರ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಂತಕುಮಾರ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಮಹಾನಂದ ಮಡಕಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...