ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

Date:

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ ಲೇಖಕರಿಂದ ಗಟ್ಟಿ ಹಾಗೂ ಮೌಲ್ಯಯುತ ಸಾಹಿತ್ಯ ಹೊರಬರಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು.

- Advertisement -

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಜಾಗೃತ ಸಮಿತಿ ಹಾಗೂ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ನಗರದ ಕುಂಬಾರವಾಡ ಬಡಾವಣೆಯ ಸಾಹಿತಿ, ಶಿಕ್ಷಕ ಸಂಜೀವಕುಮಾರ ಅತಿವಾಳೆ ಅವರ ನಿವಾಸದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಸಮಾರಂಭ ಹಾಗೂ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೀದರ್ ಜಿಲ್ಲೆಯಲ್ಲಿ ಅನೇಕ ಪ್ರತಿಭಾನ್ವಿತ ಲೇಖಕರಿದ್ದರೂ ಅವರ ಸಾಹಿತ್ಯ ರಾಜ್ಯಮಟ್ಟದಲ್ಲಿ ಗುರುತಿಸುವ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ. ಬರಹಗಾರರು ಹೆಚ್ಚಿನ ಅಧ್ಯಯನದಲ್ಲಿ ತೊಡಗಿ ಗುಣಮಟ್ಟದ ಹಾಗೂ ಗಟ್ಟಿ ಸಾಹಿತ್ಯ ರಚನೆಗೆ ಮುಂದಾಗಬೇಕು” ಎಂದು ಸಲಹೆ ನೀಡಿದರು.

ಪತ್ರಕರ್ತ ರಾಜೇಶ್ ಸಿಂಧೆ ವಿಶೇಷ ಉಪನ್ಯಾಸ ನೀಡಿ, “ಆಧುನಿಕ ತಂತ್ರಜ್ಞಾನ ಬೆಳೆಯುತ್ತಿರುವ ಸಂದರ್ಭದಲ್ಲಿ ಪುಸ್ತಕ ಓದುವ ಸಂಸ್ಕೃತಿ ಕ್ಷೀಣಿಸುತ್ತಿದೆ. ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿಶೇಷವಾಗಿ ಯುವಜನರು ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಂಡರೆ ಮಾನವೀಯ ಮೌಲ್ಯಗಳು ವೃದ್ಧಿಯಾಗುತ್ತವೆ. ಮೌಲ್ಯಯುತ ಕೃತಿಗಳು ಹಲವು ಸಾಮಾಜಿಕ ಚಳವಳಿಗಳಿಗೆ ಸ್ಫೂರ್ತಿಯಾಗಿವೆ” ಎಂದರು.

ಸಾಹಿತಿ ನಾಗಶೆಟ್ಟಿ ಪಾಟೀಲ್ ಗಾದಗಿ ಮಾತನಾಡಿ, “ಮೊಬೈಲ್‌, ಎಐ ತಂತ್ರಜ್ಞಾನದ ಕಾಲದಲ್ಲಿಯೂ ಪುಸ್ತಕ ಓದುವುದು ಅತ್ಯಗತ್ಯ. ಪ್ರತಿಯೊಬ್ಬರೂ ಪ್ರತಿದಿನ ಸ್ವಲ್ಪ ಸಮಯವನ್ನು ಓದಿಗೆ ಮೀಸಲಿಡಬೇಕು. ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜತೆಗೆ ಪಠ್ಯೇತರ ಪುಸ್ತಕಗಳನ್ನೂ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಉತ್ತಮ ಮಾರ್ಗದರ್ಶಕವಾಗಿದ್ದು, ಜ್ಞಾನ ಮತ್ತು ಚಿಂತನೆಗೆ ಬೆಳಕು ನೀಡುತ್ತದೆ. ಸಮಾಜದಲ್ಲಿ ಪುಸ್ತಕ ಸಂಸ್ಕೃತಿಯ ಬೆಳವಣಿಗೆಗೆ ಎಲ್ಲರೂ ಶ್ರಮಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಮಾತನಾಡಿ, “ಬೀದರ್ ಜಿಲ್ಲೆಯ ಪ್ರತಿಭಾನ್ವಿತ ಸಾಹಿತಿ ಹಾಗೂ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಹೆಚ್ಚಾಗಬೇಕು. ಕಾವ್ಯ, ಕಥೆ ಹಾಗೂ ಸಾಹಿತ್ಯ ಕಮ್ಮಟಗಳ ಮೂಲಕ ಹೊಸ ತಲೆಮಾರಿನ ಯುವಕರನ್ನು ಬರವಣಿಗೆಯತ್ತ ಸೆಳೆಯುವುದು ಅಗತ್ಯ. ಉತ್ತಮ ಓದುಗರಿಂದಲೇ ಮೌಲ್ಯಯುತ ಸಾಹಿತ್ಯ ಸೃಷ್ಟಿಯಾಗಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

WhatsApp Image 2026 10 04 at 3.55.44 PM
ಮನೆಗೊಂದು ಗ್ರಂಥಾಲಯ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟನೆ

ನಿವೃತ್ತ ಪ್ರಾಚಾರ್ಯ ಮುಹಮ್ಮದ್ ನಿಜಾಮುದ್ದೀನ್ ಮಾತನಾಡಿ, “ಓದುವ ಹವ್ಯಾಸವು ಮನಸ್ಸಿನ ಏಕಾಗ್ರತೆ, ನೆಮ್ಮದಿ ಹಾಗೂ ಜ್ಞಾನವನ್ನು ಹೆಚ್ಚಿಸುತ್ತದೆ. ಪ್ರತಿಯೊಂದು ಮನೆಯಲ್ಲೂ ಪುಸ್ತಕಾಲಯ ನಿರ್ಮಾಣವಾಗಬೇಕು. ಉತ್ತಮ ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಅಧ್ಯಯನ ಅಗತ್ಯವಿದೆ” ಎಂದರು.

ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತ ಸಮಿತಿ ಸಂಚಾಲಕ ಬಾಲಾಜಿ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿ, “ಪುಸ್ತಕಗಳು ನಮ್ಮ ಉತ್ತಮ ಸ್ನೇಹಿತರಿದ್ದಂತೆ. ಪ್ರತಿಯೊಂದು ಮನೆಯಲ್ಲಿ ದೇವರ ಕೋಣೆಗೆ ಜಾಗ ಮೀಸಲಿಡುವಂತೆ ಗ್ರಂಥಾಲಯ ನಿರ್ಮಾಣಕ್ಕೂ ಜಾಗ ಮೀಸಲಿಡಬೇಕು. ಪ್ರತಿಯೊಬ್ಬರೂ ಓದುವ ಅಭಿರುಚಿ ಬೆಳೆಸಿಕೊಂಡರೆ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯ. ಮನೆ-ಮನೆಗಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಬೆಳೆಸುವುದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗ್ರಂಥಾಲಯಗಳ ಮಹತ್ವದ ಕುರಿತು ಜನರಲ್ಲಿ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು.

ಗಮನ ಸೆಳೆದ ಕವಿಗೋಷ್ಠಿ

‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಸಮಾರಂಭದ ಅಂಗವಾಗಿ ನಡೆದ ಕವಿಗೋಷ್ಠಿ ಗಮನ ಸೆಳೆಯಿತು. ಕವಿಗಳಾದ ಜಗದೀಶ್ವರ ಬಿರಾದಾರ, ಅಶ್ವಜೀತ ದಂಡೀನ್, ಚನ್ನಬಸವ ಭೂರೆ, ತುಕಾರಾಮ ರಾಜನಾಳೆ, ಎಚ್.ಬಿ. ಪ್ರಿಯಾಂಕಾ, ಉಮಾಕಾಂತ ವಿಳಾಸಪುರೆ, ಸುಜಾತಾ ಹೊಸಮನಿ ಹಾಗೂ ಅವಿನಾಶ ಸೋನೆ ಅವರು ಸ್ವರಚಿತ ಕವಿತೆಗಳನ್ನು ವಾಚಿಸಿದರು.

ಇದನ್ನೂ ಓದಿ : ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಕಾರ್ಯಕ್ರಮದಲ್ಲಿ ಶಂಭುಲಿಂಗ ವಾಲ್ದೊಡ್ಡಿ, ಆರ್.ಎಸ್. ಬಿರಾದರ, ನಿರಂಹಕಾರ ಬಂಡಿ, ಲಕ್ಷ್ಮಣ ಮೇತ್ರೆ, ಅಜಿತ್‌ ನೇಳಗೆ ಸೇರಿದಂತೆ ಸಾಹಿತಿಗಳು, ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...