ಬೀದರ್ | ಕಲಾವಿದರ ಪ್ರತಿಭೆಗೆ ಗೌರವ ಸಿಗಲಿ : ಸಿದ್ರಾಮ ಸಿಂಧೆ

Date:

ಕಲಾವಿದರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಯೋಗ್ಯ ಗೌರವ ನೀಡಿದಾಗ ಮಾತ್ರ ಅವರು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.

- Advertisement -

ರಂಗ ತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಜಾನಪದ ಸಂಭ್ರಮ ಹಾಗೂ ಗಡಿ ಜಿಲ್ಲೆಗಳ ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಪತ್ರಕರ್ತ ಸುನೀಲ್ ಭಾವಿಕಟ್ಟಿ ಹಾಗೂ ಜೀವನ ಪ್ರಕಾಶ ಕಲ್ಚರಲ್ ವೆಲ್ಫೇರ್ ಸೊಸೈಟಿಯ ಅಧ್ಯಕ್ಷ ದೀಲಿಪಕುಮಾರ ಕಾಡವಾದ ಉಪಸ್ಥಿತರಿದ್ದರು.

ರಂಗ ತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಮುದಾಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಬುದ್ದ ಮುದಾಳೆ ಸ್ವಾಗತಿಸಿದರು. ಶಿವಕುಮಾರ ಭೋಸಲೆ ವಂದಿಸಿದರು.

1005071338

ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ಜಾನಪದ ವೈಭವ ಕಂಗೊಳಿಸಿತು. ಬೀದರಿನ ಹಿರಿಯ ಕಲಾವಿದರಾದ ದೀಲಿಪ ಕಾಡವಾದ, ಅರ್ಜುನ ಚಿಕ್ಲಿ, ಲಕ್ಷ್ಮೀ ಸಿಂಧೆ ಮತ್ತು ರತ್ನಮ್ಮ ಅವರು ಸಂಪ್ರದಾಯಿಕ ಹಾಡುಗಳನ್ನು ಹಾಡಿ ಪ್ರೇಕ್ಷಕರ ಮೆಚ್ಚುಗೆ ಪಡೆದರು.

ವಿವಿಧ ಕಲಾ ತಂಡಗಳಿಂದ ಕನ್ನಡ ಚಿತ್ರಗೀತೆಗಳು, ಅಂಬೇಡ್ಕರ್ ಹಾಡುಗಳು, ಕೋಲಾಟ ಹಾಗೂ ಬುಲಾಯಿ ಹಾಡು ಗಮನ ಸೆಳೆಯಿತು.

ಸವಿತಾ ಮತ್ತು ತಂಡದಿಂದ ಸಂಪ್ರದಾಯಿಕ ಹಾಡುಗಳು, ಮಲ್ಲಪ್ಪ ಮತ್ತು ತಂಡದಿಂದ ಭಾವಗೀತೆಗಳು, ಸಂಬುದ್ದ ಮತ್ತು ತಂಡದಿಂದ ಸುಗಮ ಸಂಗೀತ, ಅಕ್ಕ ಮಹಾದೇವಿ ಕೋಲಾಟ ತಂಡದಿಂದ ಮಹಿಳಾ ಕೋಲಾಟ ನೃತ್ಯ ಹಾಗೂ ರಮೇಶ್ ಅಮಲಾಪುರ ಅವರಿಂದ ಕನ್ನಡ ಚಿತ್ರಗೀತೆಗಳು ಪ್ರದರ್ಶನಗೊಂಡವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಬೀದರ್‌ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ನೆರವಾಗುವ ಉದ್ದೇಶದಿಂದ ರಿಶೈನ್‌ ಆರ್ಗನೈಸೇಷನ್‌...

ಬಸವಕಲ್ಯಾಣ | ಬೌದ್ಧ ವಿಹಾರ, ಅಂಬೇಡ್ಕರ್ ಭವನಕ್ಕೆ 25 ಎಕರೆ ಜಮೀನು ನೀಡಲು ಆಗ್ರಹ

ಬಸವಕಲ್ಯಾಣ ನಗರದಲ್ಲಿ ಬೌದ್ಧ ವಿಹಾರ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ...

ಬೀದರ್‌ | ರೇಷನ್‌ ಕಾರ್ಡ್‌ ಇ-ಕೆವೈಸಿ ಮಾಡಿಸಿಕೊಳ್ಳಲು ʼಅನ್ನ ಸೇವೆʼ ಮೊಬೈಲ್ ಆ್ಯಪ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿರುವ...