ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

Date:

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅಲ್ ಅಮೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮುಬಾಶಿರ್ ಸಿಂಧೆ ಹೇಳಿದರು.

- Advertisement -

ಬೀದರ್ ನಗರದ ಅಲ್ ಅಮೀನ್ ಪದವಿ ಕಾಲೇಜಿನಲ್ಲಿ ಸೋಮವಾರ ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮಹಿಳಾ ಸಬಲೀಕರಣ, ನಾಯಕತ್ವ ಬೆಳವಣಿಗೆ, ಕೃತಕ ಬುದ್ಧಿಮತ್ತೆ, ಪರಿಸರ ಸಂರಕ್ಷಣೆ, ಮಹಿಳೆಯರ ಆರೋಗ್ಯ ಹಾಗೂ ಋತುಚಕ್ರ ಸ್ವಚ್ಛತೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಸಾಮಾಜಿಕ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲೂ ಇದೆ. ಹೆಣ್ಣುಮಕ್ಕಳನ್ನು ಸಾಧನೆಯತ್ತ ಪ್ರೇರೇಪಿಸುವುದರ ಜತೆಗೆ ಅವರಲ್ಲಿ ಆತ್ಮವಿಶ್ವಾಸ ಬೆಳೆಸುವ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು ಎಂದು ಹೇಳಿದರು.‌

WhatsApp Image 2026 10 10 at 7.46.08 PM 4
ಜಾಹೀರಾತು

ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಮನೋಹರ ಮೇತ್ರೆ ಮಾತನಾಡಿ, “ಮಹಿಳೆಯರು ಶಿಕ್ಷಣ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮುನ್ನಡೆಯಬೇಕು. ಸಮಾಜದ ಸಮಗ್ರ ಪ್ರಗತಿಗಾಗಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಅವಕಾಶಗಳನ್ನು ಕಲ್ಪಿಸುವುದು ಅತ್ಯಗತ್ಯ” ಎಂದು ತಿಳಿಸಿದರು.

ಸರ್ಕಾರಿ ಪಾಲಿಟೆಕ್ನಿಕ್‌ನ ಗಣಕಯಂತ್ರ ವಿಭಾಗದ ವಿಭಾಗಾಧಿಕಾರಿ ವಿಜಯಕುಮಾರ ವಲ್ಲೂರೆ ಮಾತನಾಡಿ, “ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣ, ಉದ್ಯೋಗ ಹಾಗೂ ದೈನಂದಿನ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನದ ಬಗ್ಗೆ ಅರಿವು ಬೆಳೆಸಿಕೊಂಡು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಪ್ರವೀಣಚಂದ್ರ ಮೀರಾಗಂಜಕರ್ ಮಾತನಾಡಿ, “ಇಂದಿನ ವಿದ್ಯಾರ್ಥಿನಿಯರೇ ನಾಳಿನ ನಾಯಕಿಯರು. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಟ್ರಸ್ಟ್ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದು, ಹೆಣ್ಣುಮಕ್ಕಳು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸುತ್ತಿದೆ” ಎಂದು ಹೇಳಿದರು.

WhatsApp Image 2026 10 10 at 6.59.42 PM 3
ಜಾಹೀರಾತು

ಕೃಷಿ ಅಧಿಕಾರಿ ಡಾ.ವರ್ಷಾ ಗಾಯತೊಂಡೆ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಶಾಲಿನಿ ಫ್ಲಾರೆನ್ಸ್ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಅಲ್ ಅಮೀನ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಮೊಹಮ್ಮದ್ ಮಕ್ಬೂಲ್ ಅಹಮ್ಮದ್ ಹಾಗೂ ಪ್ರಾಚಾರ್ಯ ಮೊಹಮ್ಮದ್ ಖಾಜಾ ಉಪಸ್ಥಿತರಿದ್ದರು. ಡ್ಯಾನಿಯಲ್ ಮೇತ್ರೆ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸೈಯದಾ ಕರೀಮ್ ಖಾದ್ರಿ ವಂದಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಕಲಬುರಗಿ | ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಸಾವು

ಕಲಬುರಗಿ ನಗರದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...