ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಲ್ಲಿ ಅಪ್ಪಳಿಸಿದ ಸಿಡಿಲಾಘಾತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಭಾಲ್ಕಿ ಪಟ್ಟಣದ ಸಿದ್ಧಾರ್ಥ ಕಾಲೋನಿ ನಿವಾಸಿ ಮಲ್ಲಿಕಾರ್ಜುನ ಶಿವರಾಜ್ (27) ಮೃತ ಯುವಕ ಎಂದು ತಿಳಿದುಬಂದಿದೆ.
ಮೇ 19 ರಂದು ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಬಿರುಗಾಳಿ ಸಹಿತ ಮಳೆ ಆರಂಭವಾದ ವೇಳೆ ಮರದ ಕೆಳಗೆ ಆಶ್ರಯ ಪಡೆದಿದ್ದ ವೇಳೆ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ತೆಲಂಗಾಣದ ಸಂಗಾರೆಡ್ಡಿಯ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರು. ಗುರುವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಈ ಕುರಿತು ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಬೀದರ್ | KKRTC ಬಸ್‌ಗಳಲ್ಲಿ UPI ಕ್ರಾಂತಿ: ಚಿಲ್ಲರೆ ಸಮಸ್ಯೆಗೆ ಸಿಕ್ತು ಮುಕ್ತಿ!




