ಬೀದರ್ |‌ ಸಮಾಜದ ಅಭಿವೃದ್ಧಿಗೆ ಕ್ರೈಸ್ತ ಮಿಷನರಿಗಳ ಬದುಕು ಮುಡುಪು

Date:

ಕ್ರೈಸ್ತ ಮಿಷನರಿಗಳು ಪ್ರಾತಃ ಸ್ಮರಣೀಯರು ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದಾರೆ ಎಂದು ಸೇಂಟ್ ಪೌಲ್ ಮೆಥೋಡಿಸ್ಟ್ ಕೇಂದ್ರ ಸಭೆಯ (ಉತ್ತರ) ಜಿಲ್ಲಾ ಮೇಲ್ವಿಚಾರಕ ರೆವರೆಂಡ್ ಡಿಸೋಜ ಥಾಮಸ್ ಅಭಿಪ್ರಾಯಪಟ್ಟರು.

- Advertisement -

ಬೀದರ್ ನಗರದ ಮಂಗಲಪೇಟ್‍ನ ರೆವರೆಂಡ್ ಎಂ.ಡಿ.ರಾಸ್ ಮೆಮೋರಿಯಲ್ ಚರ್ಚ್‍ನಲ್ಲಿ ಗುರುವಾರ ನಡೆದ ರೆವರೆಂಡ್ ಜೆ. ಟಿ. ಸಿಮಂಡ್ಸ್ ಕನ್ನಡ ಸಾಹಿತ್ಯ ಸಂಘದ 4ನೇ ವರ್ಷಾಚರಣೆಯ ಸಾನಿಧ್ಯ ವಹಿಸಿ ಮಾತನಾಡಿ, “ನಮ್ಮ ಇಂದಿನ ವ್ಯವಸ್ಥಿತ ಬದುಕಿನ ಹಿಂದೆ ಮಿಷನರಿಗಳ ಶ್ರಮ ಇದೆ. ಇದನ್ನು ನಾವು ಎಂದಿಗೂ ಮರೆಯಬಾರದು” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ವಿಶ್ರಾಂತ ಪ್ರಾಚಾರ್ಯ ಡಾ.ದೇವಿದಾಸ ತುಮಕುಂಟೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಮಿಷನರಿಗಳು ಇಲ್ಲಿಗೆ ಬಂದು ಅರಿವು ಬಿತ್ತುವ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿದ್ದಾರೆ. ಜಿಲ್ಲೆಯಲ್ಲಿ ಮಿಷನರಿಗಳ ಸೇವೆ ಕುರಿತು ವಿಶೇಷ ಉಪನ್ಯಾಸ ನೀಡಿದ ಜೈಕರ್ ರತ್ನಪ್ಪ ಅವರು, ನಾರ್ಮ ಮತ್ತು ಫೆಂಡ್ರಿಚ್ ಎಂಬ ಇಬ್ಬರು ಮಹಿಳಾ ಕ್ರೈಸ್ತ ಮಿಷನರಿಗಳು ಕ್ರಿಸ್ತ ಶಕ 1908ರಲ್ಲಿ ಮೊಟ್ಟ ಮೊದಲ ಬಾರಿಗೆ ಬೀದರನಲ್ಲಿ ಕನ್ನಡ ಮಾಧ್ಯಮ ಶಾಲೆ ಆರಂಭಿಸಿದರು. ಈ ಶಾಲೆ ಇಂದಿಗೂ ಕಾರ್ಯ ನಿರ್ವಹಿಸುತ್ತಿರುವುದು ಅಭಿಮಾನದ ಸಂಗತಿಯಾಗಿದೆ” ಎಂದು ಹೇಳಿದರು.

ಕ್ರೈಸ್ತ ಮಿಷನರಿಗಳು ಕ್ರಿಸ್ತ ಶಕ 1903 ರಲ್ಲಿಯೇ ಬೀದರ್‍ನಲ್ಲಿ ಸಾರ್ವಜನಿಕ ಆರೋಗ್ಯ ಸೇವೆಯನ್ನು ಆರಂಭಿಸಿದರು. ಈ ಆಸ್ಪತ್ರೆಯಲ್ಲಿ ಎಲ್ಲ ವೈದ್ಯಕೀಯ ಸೌಲಭ್ಯಗಳು ಲಭ್ಯವಿದ್ದವು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ  ಬಿ.ಕೆ.ಸುಂದರ ರಾಜ್ ಮಾತನಾಡಿ, “ಕ್ರೈಸ್ತ ಮಿಷನರಿಗಳು  ದೀನ-ದಲಿತರ, ಬಡವರ, ನಿರ್ಗತಿಕರ ಹಾಗೂ ಅಸಹಾಯಕ ಸ್ಥಿತಿಯಲ್ಲಿರುವವರನ್ನು ಮೇಲಕ್ಕೆ ಎತ್ತುವ ಕಾರ್ಯ ಮಾಡಿದ್ದಾರೆ” ಎಂದು ಹೇಳಿದರು.

ಸೆಂಟ್ ಪೌಲ್ ಮೆಥೋಡಿಸ್ಟ್ ಕೇಂದ್ರ ಸಭೆಯ(ಉತ್ತರ) ಸಭಾ ಪಾಲಕ ರೆವರೆಂಡ್ ಎಸ್.ಎಲ್.ತುಕಾರಾಮ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ  ಟಿ.ಜೆ.ಹಾದಿಮನಿ ವಾರ್ಷಿಕ ವರದಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಡಾ.ತುಡಮೆ ಧನರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಜುಲೈ 27ರಂದು ಉದ್ಯೋಗ ಮೇಳ

ರೆವರೆಂಡ್ ಧೂಳಪ್ಪ, ರೆವರೆಂಡ್ ಸೈಮನ್ ಮಾರ್ಕ್, ಶಂಭುಲಿಂಗ ವಾಲ್ದೊಡ್ಡಿ, ಬಸವರಾಜ ಮಯೂರ, ಗುರುನಾಥ ಅಕ್ಕಣ್ಣ, ಬಸವರಾಜ ಬಲ್ಲೂರ,  ವಿದ್ಯಾವತಿ ಬಲ್ಲೂರ,  ಶಾಂತಮ್ಮ ಬಲ್ಲೂರ, ರಾಮಚಂದ್ರ ಗಣಾಪುರ, ಈಶ್ವರಯ್ಯ ಕೊಡಂಬಲ್,  ಜಗನ್ನಾಥ ಕಮಲಾಪುರೆ, ದೇವೇಂದ್ರ ಕರಂಜೆ, ಸುನೀಲ ಮಾಳಗೆ,  ಸುಭಾಷ ರತ್ನ, ಭೀಮಣ್ಣ ಅಷ್ಟೂರು, ಮಾರುತಿ ಮಿತ್ರ, ವಿರಾಜಾನಂದ ಮತ್ತಿತರರು ಭಾಗವಹಿಸಿದ್ದರು.ಪ್ರಧಾನ ಕಾರ್ಯದರ್ಶಿ ಟಿ.ಎಂ.ಮಚ್ಚೆ ಸ್ವಾಗತಿಸಿದರು. ಉಪಾಧ್ಯಕ್ಷ  ಶಿರೋಮಣಿ ಡಾಕುಳಗಿ ನಿರೂಪಿಸಿದರು. ನಿರ್ದೇಶಕ ಕಂಟೆಪ್ಪ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...