ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಅವರ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಬೀದರ್ ನಗರದ ಹಕ್ ಕಾಲೊನಿ, ಹುಮನಾಬಾದಿನ ಟೀಚರ್ ಕಾಲೊನಿಯಲ್ಲಿರುವ ಮನೆ ಹಾಗೂ ಚಿಟಗುಪ್ಪದ ಮುತ್ತಂಗಿ ಗ್ರಾಮದಲ್ಲಿರುವ ಫಾರ್ಮ್ ಹೌಸ್‌ಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಮಾಣಿಕರಾವ್ ಕೆಲ ದಿನಗಳ ಹಿಂದೆ ಕೆಲಸದಿಂದ ನಿವೃತ್ತರಾಗಿದ್ದಾರೆಂದು ತಿಳಿದುಬಂದಿದ್ದು, ಲೋಕಾಯುಕ್ತ ಕಲಬುರಗಿ ವಿಭಾಗದ ಎಸ್‌ಪಿ ಸಿದ್ದರಾಜು ಮಾರ್ಗದರ್ಶನಲ್ಲಿ ಬೀದರ್ ಡಿವೈಎಸ್‌ಪಿ ಹನುಮಂತರಾಯ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ.
ಇದನ್ನೂ ಓದಿದ್ದೀರಾ? ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದರಿಂದ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿರುವುದು ಮೂಲಗಳಿಂದ ತಿಳಿದುಬಂದಿರುವುದಾಗಿ ವರದಿಯಾಗಿದೆ.




