ಬೀದರ್‌ | ಮಹಾ ಶಿವರಾತ್ರಿ : ವಿವಿಧೆಡೆ ಸಾಮೂಹಿಕ ಇಷ್ಟಲಿಂಗ ಪೂಜೆ ಸಂಭ್ರಮ

Date:

ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ನಡೆದ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಅನೇಕ ಭಕ್ತರು ಶ್ರದ್ಧೆ, ಭಕ್ತಿಯಿಂದ ಲಿಂಗಪೂಜೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

- Advertisement -

ಬೀದರ್ ನಗರದ ಬಸವ ಮಂಟಪದಲ್ಲಿ ಬೆಳಿಗ್ಗೆ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ವತಿಯಿಂದ ಆಯೋಜಿಸಿದ ಸಾಮೂಹಿಕ ಇಷ್ಟಲಿಂಗ ಪೂಜೆ ಪ್ರಾತ್ಯಕ್ಷಿಕೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಕೊರಳಲ್ಲಿರುವ ಲಿಂಗವನ್ನು ಗೂಟಕ್ಕೆ ನೇತುಹಾಕಿ ಕೇವಲ ಶಿವರಾತ್ರಿಗೊಮ್ಮೆ ಪೂಜಿಸದೆ ನಿತ್ಯ ನಿತ್ಯ ಲಿಂಗವ ಪೂಜಿಸಬೇಕುʼ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ.ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ಇಷ್ಟಲಿಂಗ ಪೂಜೆಯಿಂದ ದೀರ್ಘಕಾಲಿನ ಕಾಯಿಲೆಗಳು ನಿಯಂತ್ರಣದಲ್ಲಿರುವುದರ ಜೊತೆಗೆ ಮಾನಸಿಕ ನೆಮ್ಮದಿ ಲಭಿಸುತ್ತದೆ. ಆತ್ಮಾನಂದದ ಅನುಭವ, ಧನಾತ್ಮಕ ವಿಚಾರಗಳನ್ನು ವೃದ್ಧಿಸುತ್ತದೆ. ಲಿಂಗವು ಸೃಷ್ಟಿಕರ್ತನ ಕುರುಹವಾಗಿದ್ದು, ನಮಗೆ ಅನ್ನ, ಅರಿವೆ, ಆಶ್ರಯ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಲು ನಿತ್ಯವೂ ಲಿಂಗಪೂಜೆ ಮಾಡಬೇಕುʼ ಎಂದು ಪ್ರತಿಪಾದಿಸಿದರು.

WhatsApp Image 2026 02 15 at 4.41.47 PM
ಬೀದರ್ ನಗರದ ಬಸವ ಮಂಟಪದಲ್ಲಿ ನಡೆದ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಬಸವಾನುಯಾಯಿಗಳು ಪಾಲ್ಗೊಂಡಿದ್ದರು.

ಬಸವ ಮಂಟಪದ ಮಾತೆ ಸತ್ಯಾದೇವಿ ಮಾತನಾಡಿ, ʼ12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ನೀಡಿದ ಇಷ್ಟಲಿಂಗವು ಸರ್ವಶರಣರಿಗೆ ಪ್ರಾಣವಾಗಿತ್ತು. ಲಿಂಗಪೂಜೆಯ ನಂತರ ತೀರ್ಥಪ್ರಸಾದ ಪಡೆದುಕೊಂಡ ನಂತರವೇ ಕಾಯಕ ದಾಸೋಹ ಮಾಡುತಿದ್ದರು.‌ ಇಷ್ಟಲಿಂಗ ವೈಜ್ಞಾನಿಕ ಹಿನ್ನೆಲೆ ಹೊಂದಿದೆ. ತ್ರಾಟಕ ಯೋಗದಿಂದ ಕಣ್ಣಿನ ಕಾಂತಿ ವೃದ್ಧಿಸುವುದರ ಜೊತೆಗೆ ಮನಸ್ಸು ಪ್ರಶಾಂತವಾಗಿರುತ್ತದೆʼ ಎಂದರು.

ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಬಿರಾದಾರ ಧ್ವಜಾರೋಹಣ ನೆರವೇರಿಸಿದರು. ಪ್ರೊ. ವೀರಶೆಟ್ಟಿ ಮೈಲೂರಕರ್ ಬಸವಪೂಜೆ ನೆರವೇರಿಸಿ ಪ್ರಸಾದ ದಾಸೋಹಗೈದರು.

ಇದೇ ವೇಳೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮ ಸುಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ ಲಿಂಗಾಯತ ಧರ್ಮ ಮಹಾಪೀಠದ ಕಾರ್ಯಯೋಜನೆಯ ಭಿತ್ತಿಪತ್ರ ಹಾಗೂ ಗಂಗಾವತಿಯಲ್ಲಿ ಮಾ.22 ರಂದು ನಡೆಯಲಿರುವ ಮಹಾದಂಡನಾಯಕರ ಸ್ಮರಣೋತ್ಸವ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ : ಔರಾದ್‌ | ಸಮಾನತೆ ಸಂದೇಶ ಸಾರಿದ ಸಂತ ಸೇವಾಲಾಲ್‌ : ಶಾಸಕ ಪ್ರಭು‌ ಚವ್ಹಾಣ

ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ, ಪಶುವೈದ್ಯಕೀಯ ವಿ.ವಿ.ಯ ನಿವೃತ್ತ ಡೀನ್ ಡಾ. ಸುರೇಶ ಪಾಟೀಲ, ಉದ್ಯಮಿ ನಾಗಶೆಟ್ಟಿ ದಾಡಗಿ, ಡಾ.ವೀರಶೆಟ್ಟಿ ಮೈಲೂರಕರ್, ಶಿವಶರಣಪ್ಪ ಪಾಟೀಲ ಹಾರೂರಗೇರಿ, ನಿರ್ಮಲಾ ನಿಲಂಗೆ, ಶಿವಕುಮಾರ ಪಾರಾ, ನ್ಯಾಯವಾದಿ ಅಶೋಕ ಮಾನೂರೆ, ಬಸವರಾಜ ಲಾಧಾ, ಬಸವರಾಜ ಸಂಗಮದ, ಮನ್ಮಥಯ್ಯ ಸ್ವಾಮಿ, ಗಣಪತಿ ಬಿರಾದಾರ, ಶ್ರೀನಾಥ ಕೋರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಲ್ಯಾಣರಾವ ಬಂಬುಳಗಿ ವಚನ ಗಾಯನ ಮಾಡಿದರು. ಮಹಾರುದ್ರ ಡಾಕುಳಗೆ ಸ್ವಾಗತಿಸಿದರು. ಸತೀಶ ಪಾಟೀಲ ನಿರೂಪಿಸಿದರೆ, ಬಸವಕುಮಾರ ಚಟನಳ್ಳಿ ವಂದಿಸಿದರು.

ಭಾಲ್ಕಿ : ಮಕ್ಕಳಲ್ಲಿ ಲಿಂಗಪೂಜೆ ಆಸಕ್ತಿ ಬೆಳೆಸಿ : ಬಸವಲಿಂಗ ಪಟ್ಟದ್ದೇವರು

ಭಾಲ್ಕಿಯ ಚನ್ನಬಸವಾಶ್ರಮ ಪರಿಸರ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿತು.

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಭಾನುವಾರ ನಡೆದ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ವಿವಿಧೆಡೆಯ ಅನೇಕ ಭಕ್ತರು ಶ್ರದ್ಧೆ, ಭಕ್ತಿಯಿಂದ ಲಿಂಗಪೂಜೆಯಲ್ಲಿ ಭಾಗಿಯಾಗಿದ್ದರು.

ಲಿಂಗಪೂಜೆಯ ವಿಧಿ ವಿಧಾನ ತಿಳಿಸಿ ಕೊಟ್ಟ ಬಳಿಕ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಇಷ್ಟಲಿಂಗದಲ್ಲಿ ಅದ್ಭುತ ಶಕ್ತಿ ಅಡಗಿದೆ. ಮನದ ಮೈಲಿಗೆ ತೊಳೆದು ಮನಸ್ಸು ಶಾಂತಗೊಳಿಸುವ ಮತ್ತು ಮನುಷ್ಯ ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡುವ ಶಕ್ತಿ ಇಷ್ಟಲಿಂಗ ಪೂಜೆಯಲ್ಲಿದೆ. ಲಿಂಗಪೂಜೆಯನ್ನು ಒಂದು ದಿನಕ್ಕೆ ಸೀಮಿತಗೊಳಿಸಬಾರದು. ಪ್ರತಿಯೊಬ್ಬರು ಪ್ರತಿನಿತ್ಯ ಇಷ್ಟಲಿಂಗ ಪೂಜೆಯನ್ನು ಮಾಡುವುದು ರೂಢಿಸಿಕೊಳ್ಳಬೇಕುʼ ಎಂದರು.

WhatsApp Image 2026 02 15 at 7.10.34 PM
ಭಾಲ್ಕಿಯ ಚನ್ನಬಸವಾಶ್ರಮ ಪರಿಸರ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಬಸವಾನುಯಾಯಿಗಳು ಪಾಲ್ಗೊಂಡಿದ್ದರು.

ʼಮಕ್ಕಳಲ್ಲಿ ಬಾಲ್ಯದಿಂದಲೇ ಇಷ್ಟಲಿಂಗ ಪೂಜೆಯ ಆಸಕ್ತಿ ಬೆಳೆಸಿದಲ್ಲಿ ಅವರು ಮುಂದೆ ದೇಶಕ್ಕೆ ಉತ್ತಮ ಆಸ್ತಿಯಾಗುತ್ತಾರೆ. ವರ್ಷಕ್ಕೊಮ್ಮೆ ಬರುವ ಶಿವರಾತ್ರಿ ದಿನದಂದು ನಡೆಯುವ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಭಾಗಿಯಾಗುವುದರಿಂದ ದೈವಿ ಶಕ್ತಿ ಹೆಚ್ಚಿಸುತ್ತದೆ. ಹಾಗಾಗಿ ಎಲ್ಲರೂ ಪ್ರತಿದಿನ ಲಿಂಗಪೂಜೆ ಮಾಡುವುದಾಗಿ ಸಂಕಲ್ಪ ಮಾಡಬೇಕುʼ ಎಂದು ತಿಳಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಬಸವಲಿಂಗ ದೇವರು ನೇತೃತ್ವ ವಹಿಸಿದ್ದರು.

ಇದನ್ನೂ ಓದಿ : ಭಾಲ್ಕಿ | ಹಿರೇಮಠ ಸಂಸ್ಥಾನ ಸಹಯೋಗದಲ್ಲಿ ನಾಳೆ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಹಿರಿಯ ನ್ಯಾಯವಾದಿ ರಾಜಶೇಖರ ಅಷ್ಟೂರೆ, ಶಾರದಾ ಹೋಟೆಲ್ ಮಾಲಿಕ ಬಾಬುರಾವ ಹುಣಜೆ ಬಸವಗುರುವಿನ ಪೂಜೆ ನೆರವೇರಿಸಿದರು. ತಾಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಮಲ್ಲಮ್ಮ ನಾಗನಕೇರೆ ಸೇರಿದಂತೆ ಹಲವರು ಇದ್ದರು. ಕಲಾವಿದ ನವಲಿಂಗ ಪಾಟೀಲ್ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಮನಾಬಾದ್ | ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ : ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳು, ಹೆರಿಗೆಗೆ ಬರುವ ಮಹಿಳೆಯರು...

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು...