ಬೀದರ್‌ | ಕನೇರಿ ಸ್ವಾಮೀಜಿ ಸಮಾವೇಶ ವಿರುದ್ಧ ಬೃಹತ್‌ ಪ್ರತಿಭಟನೆ : ನಾಳೆ ಪೂರ್ವಭಾವಿ ಸಭೆ

Date:

‌ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವದ್ರೋಹಿ ಕನೇರಿ ಸ್ವಾಮೀಜಿ ನೇತ್ರತ್ವದಲ್ಲಿ ಜೂ.28 ರಂದು ಬಸವಾದಿ ಶಿವಶರಣರ ಹಿಂದೂ ಸಮಾವೇಶ ಆಯೋಜಿಸಿದ್ದು, ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ ಬಸವಕಲ್ಯಾಣಕ್ಕೆ ಸ್ವಾಮೀಜಿ ಪ್ರವೇಶವನ್ನು ವಿರೋಧಿಸಿ ಹಮ್ಮಿಕೊಳ್ಳಲಾಗುತ್ತಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ ನಾಳೆ ಕರೆಯಲಾಗಿದೆ.

- Advertisement -

ನಾಳೆ (ಜೂ.7)ರಂದು ಸಂಜೆ 4.00 ಗಂಟೆಗೆ ಬೀದರ ನಗರದ ಗಾಂಧಿಗಂಜ ಬಸವೇಶ್ವರ ದೇವಸ್ಥಾನದಲ್ಲಿ ಸಭೆ ಆಯೋಜಿಸಲಾಗಿದ್ದು, ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯದಲ್ಲಿ ಹಾಗೂ ಜಿಲ್ಲೆಯ ಸಮಸ್ತ ಮಠಾಧೀಶರ, ಪೂಜ್ಯರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

“ಇಂದಿಗೂ ಬಸವ ತತ್ತ್ವವನ್ನು ತಮ್ಮ ಜೀವನದ ಉಸಿರಾಗಿಸಿಕೊಂಡು, ನಾಡಿನ ಉದ್ದಾರಕ್ಕಾಗಿ ಅದರ ಮೌಲ್ಯಗಳನ್ನು ಬಿತ್ತಿ ಬೆಳೆಸುತ್ತಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಪ್ರೀಂ ಕೋರ್ಟ್‌ನಿಂದ ಛೀಮಾರಿಗೆ ಒಳಗಾಗಿರುವ ಕನೇರಿ ಸ್ವಾಮೀಜಿಯವರು, ಬಸವ ಚಿಂತಕರು ಹಾಗೂ ಬಸವ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ “ಬಸವ ತಾಲಿಬಾನಿ” ಎಂಬ ಪದಪ್ರಯೋಗ ಮಾಡಿರುವುದು ತೀವ್ರ ಖಂಡನೀಯ” ಎಂದು ತಿಳಿಸಿದ್ದಾರೆ.

“ಸುಮಾರು 900 ವರ್ಷಗಳ ಹಿಂದೆ ಸಕಲ ಜೀವಿಗಳಿಗೆ ಲೇಸ ಬಯಸಿ ಶತಮಾನಗಳಿಂದ ಜಾತಿ, ವರ್ಗ, ವರ್ಣ ಹಾಗೂ ಲಿಂಗಭೇದಗಳಿಂದ ಜಿಡ್ಡುಗಟ್ಟಿದ್ದ ಮೌಢ್ಯಪೂರ್ಣ ಸಮಾಜವನ್ನು ಸುಧಾರಿಸಿ, ಸರ್ವರಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಮಾನವ ಘನತೆಯ ಸಂದೇಶವನ್ನು ಸಾರಿದ ಮಹಾನ್ ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರು ಮತ್ತು ಬಸವಾದಿ ಶರಣರು ಮಾನವ ಕುಲಕೋಟಿಗೆ ಅಮೂಲ್ಯವಾದ ಬಸವ ತತ್ತ್ವವನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ವೈಚಾರಿಕ ಪರಂಪರೆಯ ನೆಲ ʼಕಲ್ಯಾಣʼ : ವಿವೇಕಾನಂದ ಸಜ್ಜನ

ನಾಳೆಯ ಸಭೆಯಲ್ಲಿ ನಾಡಿನ ಸಮಸ್ತ ಪೂಜ್ಯರು, ಬಸವ ಪರ ಸಂಘಟನೆಗಳ ಪ್ರಮುಖರು, ಕನ್ನಡ ಪರ ಸಂಘಟನೆಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಬಸವ ಭಕ್ತರು ಭಾಗವಹಿಸಿ, ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಿ ತಮ್ಮ ಅಮೂಲ್ಯ ಅಭಿಪ್ರಾಯಗಳು, ಸಲಹೆ, ಸೂಚನೆಗಳನ್ನು ನೀಡುವಂತೆ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಹೊಂಡದಲ್ಲಿ ಮುಳುಗಿ ತಂದೆ, ಮಗ ಸಾವು

ಬಳ್ಳಾರಿ ನಗರದ ಕೋಟೆಯಲ್ಲಿರುವ ಹೊಂಡದಲ್ಲಿ ಮುಳುಗಿ ತಂದೆ ಮತ್ತು ಮಗ ಮಂಗಳವಾರ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ವಿರೋಧಿಸಿ, ಪ್ರಜಾಪ್ರಭುತ್ವದ ಮರುಸ್ಥಾಪನೆ...

ಏಷ್ಯನ್ ಪ್ಯಾರಾ ಗೇಮ್ಸ್: 5ನೇ ಸ್ಥಾನಕ್ಕೇರಿದ ಭಾರತ, 62 ಪದಕಗಳ ಸಾಧನೆಯೊಂದಿಗೆ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಪರಾಕ್ರಮ

ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2026 ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು...