ಬೀದರ್‌ | ಮೆಡಿಕಲ್‌ ಶಾಪ್ ಬಂದ್ ಯಶಸ್ವಿ : ಆನ್‍ಲೈನ್ ಔಷಧ ಮಾರಾಟ ರದ್ದತಿಗೆ ಆಗ್ರಹ

Date:

ಆನ್‍ಲೈನ್ ಔಷಧ ಮಾರಾಟ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿ ಔಷಧ ವ್ಯಾಪಾರಿಗಳು ಜಿಲ್ಲೆಯಲ್ಲಿ ಬುಧವಾರ ಮೆಡಿಕಲ್‌ ಶಾಪ್ ಬಂದ್ ಮಾಡಿ ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಔಷಧಿ ಅಂಗಡಿಗಳು ಮುಚ್ಚಿದ್ದವು. ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಹಾಗೂ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘ ದೇಶದಾದ್ಯಂತ ಅಂಗಡಿ ಬಂದ್‍ಗೆ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಜಿಲ್ಲೆಯಲ್ಲೂ ಅಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಅಂಗಡಿ ಬಂದ್ ಸಂಪೂರ್ಣ ಯಶಸ್ವಿಯಾಗಿದೆ” ಎಂದು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ತಿಳಿಸಿದರು.

“ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆನ್‍ಲೈನ್ ವೇದಿಕೆಗಳಲ್ಲಿ ಔಷಧ ಮಾರಾಟಕ್ಕೆ ಅನುಮತಿ ಕೊಟ್ಟಿತ್ತು. ಅದನ್ನು ಆನ್‍ಲೈನ್ ವೇದಿಕೆಗಳು ಈಗಲೂ ಮುಂದುವರಿಸಿವೆ. ಅತ್ಯಧಿಕ ಡಿಸ್ಕೌಂಟ್ ಜತೆ ಆರ್ಡರ್ ಮಾಡಿದವರ ಮನೆ ಬಾಗಿಲಿಗೆ ಔಷಧ ತಲುಪಿಸುತ್ತಿವೆ. ಇದರಿಂದ ಔಷಧ ಅಂಗಡಿಗಳ ವ್ಯಾಪಾರದ ಮೇಲೆ ಭಾರಿ ಪರಿಣಾಮ ಉಂಟಾಗಿದೆ” ಎಂದು ತಿಳಿಸಿದರು.

“ನಿಯಮಗಳ ಪ್ರಕಾರ ಔಷಧಗಳ ಲಾಭಾಂಶ ಮಿತಿಯನ್ನು ಶೇ 16 ರಿಂದ ಶೇ 20 ರವರೆಗೆ ನಿಗದಿಪಡಿಸಲಾಗಿದೆ. ಆದರೆ, ಅನೇಕ ಕಾರ್ಪೋರೇಟ್ ವೇದಿಕೆಗಳು ಇದನ್ನು ಉಲ್ಲಂಘಿಸುತ್ತಿವೆ. ಅನೇಕ ಆನ್‍ಲೈನ್ ವೇದಿಕೆಗಳಲ್ಲಿ ನಕಲಿ ಔಷಧ ಮಾರಾಟವಾಗುತ್ತಿವೆ. ಆಂಟಿಬಯೋಟಿಕ್ ಔಷಧಗಳ ದುರುಪಯೋಗ ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ” ಎಂದು ಹೇಳಿದರು.

ʼಕೂಡಲೇ ಆನ್‍ಲೈನ್ ಔಷಧ ಮಾರಾಟ ಆದೇಶ ಹಿಂಪಡೆಯಬೇಕು. ಕಾಪೆರ್Çೀರೇಟ್ ಕಂಪನಿಗಳ ಅತಿಯಾದ ರಿಯಾಯಿತಿ ತಡೆಯಲು ಲೆವೆಲ್ ಪ್ಲೇಯಿಂಗ್ ಫೀಲ್ಡ್ ನೀತಿ ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೂರು ವರ್ಷ ಮುಗಿಸಿದ್ದೇ ಸರ್ಕಾರದ ಮಹಾನ್ ಸಾಧನೆ!

ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ ರಾಜ್ಯ ಉಪಾಧ್ಯಕ್ಷ ಶಿವರಾಜ ಪಾಟೀಲ, ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ನಮೋಶಿ, ಸಹ ಕಾರ್ಯದರ್ಶಿ ಏತೆಶಾಮುಲ್ ಹಕ್, ಖಜಾಂಚಿ ಸಿದ್ಧರಾಮೇಶ್ವರ ಆನಂದೆ, ಸದಸ್ಯರಾದ ವಿಜಯಕುಮಾರ ಬಿರಾದಾರ, ಸಾಯಿಬಣ್ಣ, ಮಹಮ್ಮದ್ ಖಾಲೀದ್ ಷರೀಫ್, ಓಂರೆಡ್ಡಿ, ಪ್ರಕಾಶ್ ಪಾಟೀಲ, ಸಂತೋಷ್ ಸ್ವಾಮಿ, ದಿಲೀಪ್ ಮಹಮ್ಮದ್ ತಾಹ, ಸುರೇಶ ಬಿರಾದಾರ, ಮಾಣಿಕ ಕರಂಜೆ, ಸಂಜು ನೂಕಲವಾರ್, ಬಸವರಾಜ ಮಡಕಿ, ಮಹೇಶ ಧನವಂತ್ರಿ, ಮಹಮ್ಮದ್ ಸಮಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...