ಬೀದರ್‌ | ವಿಬಿ-ಜಿ ರಾಮ್‌ ಜಿ ಕಾಮಗಾರಿ ವೀಕ್ಷಣೆ, ಗುಳೆ ಹೋಗದಂತೆ ಸಲಹೆ ನೀಡಿದ ಸಚಿವ ಈಶ್ವರ ಖಂಡ್ರೆ

Date:

ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ (ಕಂಟೂರ್ ಟ್ರೆಂಚ್) ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.

- Advertisement -

ಈ ವೇಳೆ ಸಚಿವರು ಕಾಮಗಾರಿ ಸ್ಥಳದಲ್ಲಿದ್ದ ಕೂಲಿಕಾರ್ಮಿಕರೊಂದಿಗೆ ಕೆಲಕಾಲ ಸಂವಾದ ನಡೆಸಿ, ಸ್ವತಃ ಬುಟ್ಟಿಯಲ್ಲಿ ಮಣ್ಣು ಎತ್ತಿ ಹಾಕುವ ಮೂಲಕ ಕೂಲಿ ಕೆಲಸದಲ್ಲಿ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಬಳಿಕ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಚಿವರು, “ವಿಬಿ-ಜಿ ರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಈ ಹಿಂದೆ ದಿನಕ್ಕೆ ₹370 ಇದ್ದ ಕೂಲಿ ಮೊತ್ತವನ್ನು ₹382ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ವಾರ್ಷಿಕ ಉದ್ಯೋಗದ ದಿನಗಳನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದ್ದು, ಯೋಜನೆಯಡಿ ಕೈಗೊಳ್ಳಬಹುದಾದ ಕಾಮಗಾರಿಗಳ ಸಂಖ್ಯೆಯನ್ನು 318ಕ್ಕೆ ಹೆಚ್ಚಿಸಲಾಗಿದೆ. ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಯೋಜನೆಯ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

WhatsApp Image 2026 08 29 at 6.00.37 PM

2026ರ ಜುಲೈ 1ರಿಂದ ಜಾರಿಗೆ ಬಂದಿರುವ ವಿಬಿ-ಜಿ ರಾಮ್‌ಜಿ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 60:40ರ ಅನುಪಾತದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕನಿಗೂ ಕೆಲಸ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ಯೋಗಕ್ಕಾಗಿ ಯಾರೂ ಗುಳೆ ಹೋಗದಂತೆ ಗ್ರಾಮದಲ್ಲಿಯೇ ಕೆಲಸ ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

ಇದೇ ವೇಳೆ ಯೋಜನೆಯಡಿ ಫಲಾನುಭವಿಗಳಿಗೆ ವೈಯಕ್ತಿಕ ಕಾಮಗಾರಿಗಳ ಆದೇಶ ಪತ್ರಗಳನ್ನು ವಿತರಿಸಲಾಯಿತು. ವೈಯಕ್ತಿಕ ಕಾಮಗಾರಿಗಳ ಮೂಲಕ ಗ್ರಾಮೀಣ ಕುಟುಂಬಗಳ ಜೀವನೋಪಾಯಕ್ಕೆ ನೆರವು ನೀಡುವುದರ ಜೊತೆಗೆ ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಕಾಮಗಾರಿ ಸ್ಥಳದಲ್ಲಿಯೇ ಕೂಲಿಕಾರ್ಮಿಕರಿಗಾಗಿ ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿ ಕೂಲಿಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಆರೋಗ್ಯ ಸೇವೆ ಒದಗಿಸಿದರು.

WhatsApp Image 2026 08 29 at 6.00.56 PM

ಇದನ್ನೂ ಓದಿ : ವಚನ ಕಲ್ಯಾಣ | ಸಮತೆಯೆಂಬುದೆ ಯೋಗದಾಗು ನೋಡಾ

ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ದಿಲೀಪ್ ಬದೋಲೆ, ತಹಸೀಲ್ದಾರ್ ಮಹೇಶ ಪಾಟೀಲ್, ಕಾರ್ಯದರ್ಶಿ(ಆಡಳಿತ) ಜೈಪ್ರಕಾಶ ಚವ್ಹಾಣ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಸಿಪಿಐ ರಘುವೀರಸಿಂಗ್ ಠಾಕೂರ್, ಟಿಎಚ್‌ಒ ಡಾ.ಅನಿಲಕುಮಾರ ಎಕಲಾರೆ, ಸಂತಪೂರ ಠಾಣೆಯ ಪಿಎಸ್‌ಐ ದಿನೇಶ್, ಪಿಡಿಒ ನಂದಕುಮಾರ ಶಾಸ್ತ್ರಿ, ತಾಪಂ ಹಾಗೂ ಗ್ರಾಪಂ ಸಿಬ್ಬಂದಿಯವರು, ಸಾರ್ವಜನಿಕರು, ಕೂಲಿಕಾರ್ಮಿಕರು ಹಾಜರಿದ್ದರು.

WhatsApp Image 2026 08 29 at 3.48.01 PM
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...