ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

Date:

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು ಸೂಕ್ತ ಅರಿವು ಇಲ್ಲದೆ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕಾರಂಜಾ ಮುಳುಗಡೆ ಸಂತ್ರಸ್ತರು ತೀವ್ರವಾಗಿ ಖಂಡಿಸಿದ್ದಾರೆ

- Advertisement -

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹಾಗೂ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ ಅವರು ಸಂಯುಕ್ತವಾಗಿ ಪ್ರಕಟಣೆ ನೀಡಿದ್ದು, ʼಸುಮಾರು ನಾಲ್ಕು ದಶಕಗಳಿಂದ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಕಾರಂಜಾ ಸಂತ್ರಸ್ತರ ಬೇಡಿಕೆಗಳ ಬಗ್ಗೆ ಸಚಿವರು ಸದನದಲ್ಲಿ ನೀಡಿದ ಉತ್ತರ ಬೇಜವಾಬ್ದಾರಿಯಾಗಿದೆʼ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼವಿಧಾನಮಂಡಲ ಅಧಿವೇಶನದಲ್ಲಿ ಎಂಎಲ್ಸಿ ಎಂ.ಜಿ.ಮುಳೆ ಅವರು ಕಾರಂಜಾ ಸಂತಸ್ತರಿಗೆ ಮಾನವೀಯ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡುವ ಕುರಿತು ಪ್ರಶ್ನಿಸಿದರು, ಅದಕ್ಕೆ ಸಚಿವ ತಂಗಡಗಿ ಅವರು ಸ್ಪಷ್ಟನೆ ನೀಡಲು ವಿಫಲರಾಗಿದ್ದು, ಗಡಿ ಜಿಲ್ಲೆಯ ಜನರಿಗೆ ಅವಮಾನವಾಗುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆʼ ಎಂದು ದೂರಿದ್ದಾರೆ.

ಕಾರಂಜಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ, ನ್ಯಾಯಾಲಯದ ತೀರ್ಪುಗಳು, ವಿವಿಧ ಸಮಿತಿಗಳ ಶಿಫಾರಸುಗಳು ಹಾಗೂ ಹಿಂದಿನ ಸರ್ಕಾರಗಳ ಭರವಸೆಗಳಿದ್ದರೂ ಸಹ ರೈತರಿಗೆ ಸಮರ್ಪಕ ಪರಿಹಾರ ದೊರಕಿಲ್ಲ ಎಂಬುದು ಬಹುಕಾಲದಿಂದಲೂ ತಿಳಿದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಹಾಗೂ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ ಅವರು ನೀಡಿದ ಭರವಸೆಗಳನ್ನು ನೆನಪಿಸಿಕೊಂಡ ಅವರು, ಈ ವಿಷಯದಲ್ಲಿ ಸಮಗ್ರ ಅಧ್ಯಯನ ಮಾಡದೆ ಸಚಿವರು ನೀಡಿದ ಹೇಳಿಕೆ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತಂದಿದೆ ಎಂದು ಕಿಡಿಕಾರಿದ್ದಾರೆ.

ʼಸಚಿವ ಶಿವರಾಜ ತಂಗಡಿಯವರ ಕಲ್ಯಾಣ ವಿರೋಧಿ ಧೋರಣೆ ಬಗ್ಗೆ ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರ ಖಂಡಿಸಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಲಕ್ಷ್ಮಣ ದಸ್ತಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ತಿರ್ಮಾನಿಸಲಾಗಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ಈ ಸಂದರ್ಭದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಕರ ಪಾಟೀಲ ಹುಚಕನಳ್ಳಿ, ಮುಖಂಡರಾದ ವಿನಯ ಮಾಳಗೆ, ರಾಜಪ್ಪಾ ಕೋಸಂ, ರಾಜಕುಮಾರ ಬುಸ್ಸಾ, ಸಂಗಾರೆಡ್ಡಿ ಅವರಾದ, ಮಹಮ್ಮದ್ ಸೋಲಾಪೂರೆ ಬಗದಲ್, ಯೂಸುಫ್ ರೇಕುಳಗಿ, ರೋಹನಕುಮಾರ, ಮಾದಪ್ಪಾ, ರಂಜೋಳ, ವೀರೆಂದ್ರ ಭತಮುರ್ಗ ಸಮಿತಿಯ ಪದಾಧಿಕಾರಿಗಳು ಖಂಡನಾ ಪ್ರಕಟಣೆ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...