ಬೀದರ್ | ಸಂತೋಷ್ ಲಾಡ್‌ಗೆ ಸಚಿವ ಸ್ಥಾನ: ಮರಾಠಾ ಸಮಾಜ ವಿಜಯೋತ್ಸವ

Date:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸಂತೋಷ್ ಲಾಡ್ ಅವರಿಗೆ ಸಚಿವ ಸ್ಥಾನ ನೀಡಿರುವ ಹಿನ್ನೆಲೆಯಲ್ಲಿ ಸಕಲ ಮರಾಠಾ ಸಮಾಜದ ವತಿಯಿಂದ ಬುಧವಾರ ವಿಜಯೋತ್ಸವ ಆಚರಿಸಲಾಯಿತು.

- Advertisement -

ಬೀದರ್ ನಗರದ ಶಿವಾಜಿ ಚೌಕ್‌ನಲ್ಲಿ ಸಮಾಜದ ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸಮಾಜದ ಪೂಜ್ಯ ದಾದಾ ಮಹಾರಾಜ ನಗರಕರ್ ಮಾತನಾಡಿ, “ಅಧಿಕಾರವು ಜನಸೇವೆಗೆ ದೊರೆತ ಅವಕಾಶ ಎಂಬ ಮನೋಭಾವದೊಂದಿಗೆ ತಳಮಟ್ಟದ ಸ್ಥಳೀಯ ಸಂಸ್ಥೆಯಿಂದ ರಾಜಕೀಯ ಜೀವನ ಆರಂಭಿಸಿ ರಾಜ್ಯ ಸಚಿವ ಸ್ಥಾನದವರೆಗೆ ಬೆಳೆದಿರುವ ಸಂತೋಷ್ ಲಾಡ್ ಅವರ ರಾಜಕೀಯ ಪಯಣ ಗಮನಾರ್ಹವಾಗಿದೆ. ಜನಸೇವೆಯಲ್ಲಿ ಅವರು ಇನ್ನಷ್ಟು ಯಶಸ್ಸು ಸಾಧಿಸುವಂತಾಗಲಿ” ಎಂದು ಹಾರೈಸಿದರು.

ಪತ್ರಕರ್ತ ಪ್ರದೀಪ ಬಿರಾದಾರ ಮಾತನಾಡಿ, “2004ರಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಸಂತೋಷ್ ಲಾಡ್, ಬಳಿಕ ಕಲಘಟಗಿ ಕ್ಷೇತ್ರ ರಾಜಕೀಯ ಕರ್ಮಭೂಮಿಯನ್ನಾಗಿ ಮಾಡಿಕೊಂಡು ಕಾಂಗ್ರೆಸ್ ಪಕ್ಷದಿಂದ 2008, 2013 ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಹಾಗೂ ವಿವಿಧ ಅವಧಿಗಳಲ್ಲಿ ಸಚಿವರಾಗಿ ವಾರ್ತಾ ಮತ್ತು ಪ್ರಸಾರ ಇಲಾಖೆ ಸೇರಿದಂತೆ ಕಾರ್ಮಿಕ ಇಲಾಖೆಯ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ” ಎಂದು ತಿಳಿಸಿದರು.

ಸಮಾಜದ ಮುಖಂಡ ಸತೀಶ ಮುಳೆ ಮಾತನಾಡಿ, “1975ರಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಿಸಿದ ಸಂತೋಷ್ ಲಾಡ್ ಅವರು ಬಿ.ಕಾಂ ಪದವೀಧರರಾಗಿದ್ದು, ಉದ್ಯಮಿಯಾಗಿ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದರು. 2002ರಲ್ಲಿ ಸಂಡೂರು ಪಟ್ಟಣ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ ಅವರು, ಹಂತಹಂತವಾಗಿ ರಾಜ್ಯ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿ ಬೆಳೆದಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಬೀದರ್‌ | ಆ.10ರವರೆಗೆ ಬೆಳೆ ವಿಮೆ ನೋಂದಾಯಿಸಲು ಅವಧಿ ವಿಸ್ತರಣೆ

ಎಪಿಎಂಸಿ ಮಾಜಿ ಅಧ್ಯಕ್ಷ ಕಿಶನರಾವ್ ಪಾಟೀಲ ಇಂಚೂರಕರ್, ಅಮರ ಜಾಧವ, ಸುರೇಶ್ ಟಾಕಳೆ, ವಿದ್ಯಾವಾನ್ ಪಾಟೀಲ, ಸಂದೀಪ್ ಪಾಟೀಲ, ಡಿಸೋಜಾ, ಸತ್ಯದೀಪ್ ಬಿರಾದಾರ, ಮೀನಾಕ್ಷಿ ಕಾಳೆ ಪಾಟೀಲ, ಅನಿತಾ ಭೋಸ್ಲೆ, ಮೀರಾತಾಯಿ ಮುಳೆ, ಉಷಾ ಸೂರ್ಯವಂಶಿ, ಸುರೇಶ್ ಹಲವಾಯಿ, ಅಶೋಕ್ ಪಾಟೀಲ, ಶಿವಾಜಿ ಪಾಟೀಲ, ರಾಜೇಶ್ವರಿ ಸೇರಿದಂತೆ ಸಮಾಜದ ಮುಖಂಡರು, ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...