ಬೀದರ್ ನಗರದ ರಸ್ತೆ ಸಂಪರ್ಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಬಿದ್ರಿ ಚೌಕ್‌ನಿಂದ ಕುಂಬಾರವಾಡ ಕಮಾನ್‌ವರೆಗೆ ₹7 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬಿಟಿ ರಸ್ತೆ ಕಾಮಗಾರಿಗೆ ಬೀದರ್ ಕ್ಷೇತ್ರದ ಶಾಸಕ ರಹೀಂ ಖಾನ್ ಅವರು ಬುಧವಾರ ಚಾಲನೆ ನೀಡಿದರು.
ಶಾಸಕ ರಹೀಂ ಖಾನ್ ಮಾತನಾಡಿ, “ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (CMIDP) ಅಡಿಯಲ್ಲಿ ಮಂಜೂರಾಗಿರುವ ಒಟ್ಟು ₹37.50 ಕೋಟಿ ಮೊತ್ತದ ಅಭಿವೃದ್ಧಿ ಪ್ಯಾಕೇಜ್‌ನ ಭಾಗವಾಗಿ ಈ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬೀದರ್ ನಗರದ ವಿವಿಧ ಭಾಗಗಳಲ್ಲಿ ಈಗಾಗಲೇ ಸುಮಾರು ₹100 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ” ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆ ಮೂಲಕ ಸುಮಾರು ₹200 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಯೋಜನೆಯಿದೆ. ನಗರದ ರಸ್ತೆ ಸಂಪರ್ಕ, ಮೂಲಸೌಕರ್ಯ ಹಾಗೂ ನಾಗರಿಕ ಸೌಲಭ್ಯಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಶಿವಶಂಕರ ಕಾಮಶೆಟ್ಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಕಾಂತ ಚಿಮಕೋಡೆ, ಗುತ್ತಿಗೆದಾರ ಸಚಿನ್ ಕೊಳ್ಳೂರು, ಮಹಾನಗರ ಪಾಲಿಕೆ ಸದಸ್ಯರಾದ ನವಾಜ್ ಖಾನ್, ಧನರಾಜ್ ಹಂಗರಗಿ, ಮೋಹನ್ ಕಾಳೇಕರ್, ಪ್ರಶಾಂತ್ ದೊಡ್ಡಿ, ಶೌಕತ್ ಅಲಿ ಹಾಗೂ ಕಾಂಗ್ರೆಸ್ ಮುಖಂಡರಾದ ಇಸಾಕ್ ಸೆರಿಕಾರ್, ಅಮ್ಜದ್ ಅಲಿ, ಇಮ್ರಾನ್ ಲಾಲವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ನೆಹರು ಜನ್ಮದಿನ : ನ.13 ರಿಂದ 30ರವರೆಗೆ ʼಮಕ್ಕಳ ಗ್ರಾಮಸಭೆʼ ಆಯೋಜಿಸಿ





