ಬೀದರ್‌ | ಆತ್ಮಹತ್ಯೆ ಮಾಡಿಕೊಂಡ ರೈತ ವೀರಪ್ಪ ಕುಟುಂಬಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ನೆರವು

Date:

ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಿಂಧೋಲ ಗ್ರಾಮದ ರೈತ ವೀರಪ್ಪ ಅವರ ಕುಟುಂಬಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ವೈಯಕ್ತಿಕವಾಗಿ ಧನ ಸಹಾಯ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

- Advertisement -

ವೀರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು, ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಸಂಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಹಾಗೂ ಇತರ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಶೀಘ್ರವೇ ₹5 ಲಕ್ಷ ಪರಿಹಾರ ದೊರಕುವಂತೆ ಹಾಗೂ ಮೃತ ರೈತನ ಪತ್ನಿಗೆ ಪ್ರತಿ ತಿಂಗಳು ₹2 ಸಾವಿರ ಮಾಸಾಶನ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

“ರೈತ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಅನ್ನದಾತನ ಕುಟುಂಬ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಅವರಿಗೆ ಧೈರ್ಯ ಹಾಗೂ ನೆರವು ನೀಡುವುದು ನಮ್ಮ ಕರ್ತವ್ಯ. ಸರ್ಕಾರದ ನೆರವು ತ್ವರಿತವಾಗಿ ಕುಟುಂಬಕ್ಕೆ ತಲುಪುವಂತೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಹೇಳಿದರು.

WhatsApp Image 2026 08 29 at 3.48.01 PM 3

ಇದನ್ನೂ ಓದಿ : ಬೀದರ್‌ | ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ : ಸಚಿವ ಈಶ್ವರ ಖಂಡ್ರೆ

ಮುಖಂಡರಾದ ಗುರುನಾಥ ರಾಜಗೀರಾ, ಚಂದ್ರಯ್ಯ ಸ್ವಾಮಿ, ಸಂತೋಷ ರೆಡ್ಡಿ, ಶಿವಕುಮಾರ ಸುಲ್ತಾನಪುರ, ದಿಲೀಪ್ ನೀಲಮನ್, ಶಾಮರಾವ ಶೇರಿಕಾರ, ಪಂಚಯ್ಯ ಸ್ವಾಮಿ, ಪ್ರಭು ಮೋರೆ, ರಾಜಕುಮಾರ ಪೊಲೀಸ್ ಪಾಟೀಲ, ರಾಜಕುಮಾರ ಪಾಟೀಲ, ಅನೀಲಕುಮಾರ ಶೇರಿಕಾರ, ಶಂಕರೆಪ್ಪ ಬಾಪೂರ, ಪರಮೇಶ ಪಾಟೀಲ, ಅಮರ ಚಟನಳ್ಳಿ ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...