ಬೀದರ್‌ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಶೈಲೇಂದ್ರ ಬೆಲ್ದಾಳೆ : ಮೃತ ಕುಟುಂಬಸ್ಥರಿಗೆ ಸಾಂತ್ವನ

Date:

ನೆರೆಯ ತೆಲಂಗಾಣದ ಜಹೀರಾಬಾದ್ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ರಾಜಗೀರಾ ಗ್ರಾಮದ ಆರು ಜನ ಮೃತಪಟ್ಟಿರುವ ಘಟನೆಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಬುಧವಾರ ಭೇಟಿ ನೀಡಿ ಕುಟುಂಬದವರ ದುಃಖದಲ್ಲಿ ಭಾಗಿಯಾಗಿ ಸಾಂತ್ವನ ಹೇಳಿದರು. ಒಂದೇ ಗ್ರಾಮದ ಆರು ಜೀವಗಳನ್ನು ಕಳೆದುಕೊಂಡಿರುವುದು ಹೃದಯವಿದ್ರಾವಕ ಘಟನೆಯಾಗಿದೆ ಎಂದು ತಿಳಿಸಿದ ಅವರು, ಸಂಕಷ್ಟದ ಸಂದರ್ಭದಲ್ಲಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ದೊರೆಯಬೇಕಾದ ಪರಿಹಾರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ಪರಿಹಾರ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದರು.

ಬಳಿಕ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೆಲ್ದಾಳೆ ಅವರು, ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು. ಬ್ರಿಮ್ಸ್ ವೈದ್ಯ, ಸಿಬ್ಬಂದಿಯಿಂದ ಗಾಯಾಳುಗಳ ಆರೋಗ್ಯ ಪರಿಸ್ಥಿತಿ, ನೀಡಲಾಗುತ್ತಿರುವ ಚಿಕಿತ್ಸೆ, ಅಗತ್ಯ ಔಷಧೋಪಚಾರ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಗಾಯಾಳುಗಳ ಚಿಕಿತ್ಸೆಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ ಅವರು, ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.

ಇದನ್ನೂ ಓದಿ : ವಚನ ಕಲ್ಯಾಣ | ನಿಷ್ಠೆಯುಳ್ಳ ಭಕ್ತ ನಟ್ಟಡವಿಯಲ್ಲಿದ್ದಡೇನು? ಅದು ಪಟ್ಟಣವೆಂದೆನಿಸೂದು

ಈ ಸಂದರ್ಭದಲ್ಲಿ ಬಾಬುರಾವ ಕಾರಬಾರಿ, ಶಿವಕುಮಾರ ಸ್ವಾಮಿ, ಉದಯ ತೋರಣ, ಜೋಸೆಫ್ ಕೊಡ್ಡೆಕರ್, ಪರಮೇಶ ಪಾಟೀಲ, ಅರುಣಕುಮಾರ ಚಿಟ್ಟಾ ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...