ಬೀದರ್‌ | 4.12 ಲಕ್ಷ ಹೆಕ್ಟೇರ್‌ನಲ್ಲಿ ಮುಂಗಾರು ಬಿತ್ತನೆ ಗುರಿ : ಬೀಜ, ರಸಗೊಬ್ಬರ ಕೊರತೆ ಇಲ್ಲ

Date:

ಬೀದರ್ ಜಿಲ್ಲೆಯು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಂಪೂರ್ಣ ಸಜ್ಜಾಗಿದ್ದು, 2026ನೇ ಸಾಲಿನಲ್ಲಿ ಒಟ್ಟು 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸುವ ಗುರಿ ಹೊಂದಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ತಿಳಿಸಿದ್ದಾರೆ.

- Advertisement -

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ದಾಸ್ತಾನು ಲಭ್ಯ ಇದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಜಿಲ್ಲೆಯ ಎಲ್ಲಾ ರಸಗೊಬ್ಬರ ಮಾರಾಟಗಾರರು ಜಿಲ್ಲೆಯ ಪಾಲಿನ ರಸಗೊಬ್ಬರವನ್ನು ಅನ್ಯ ಜಿಲ್ಲೆಗಳಿಗೆ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಂತರರಾಜ್ಯ ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್‌ಗಳ ಮೂಲಕ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಗಾಣಿಕೆಗೆ ನಿಗಾ ವಹಿಸಲಾಗುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಬಿಕ್ಕಟ್ಟಿನ ಪರಿಣಾಮ ರಸಗೊಬ್ಬರ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ರೈತರು ಅನಗತ್ಯ ಆತಂಕಕ್ಕೆ ಒಳಗಾಗದೇ ಅಗತ್ಯಕ್ಕಿಂತ ಹೆಚ್ಚು ರಸಗೊಬ್ಬರ ಖರೀದಿಸಬಾರದು. ರೈತರು ಕೇವಲ ಡಿಎಪಿ ಗೊಬ್ಬರದ ಮೇಲೆಯೇ ಅವಲಂಬಿತರಾಗದೇ, 20:20:0:13, 12:32:16, 15:15:15 ಸೇರಿದಂತೆ ಇತರೆ ಸಂಯುಕ್ತ ರಸಗೊಬ್ಬರಗಳನ್ನು ಪರ್ಯಾಯವಾಗಿ ಬಳಸಬೇಕು” ಎಂದು ಸಲಹೆ ನೀಡಿದರು.

“ಜಿಲ್ಲೆಯ ವಾರ್ಷಿಕ ಸರಾಸರಿ ಮಳೆ 838 ಮಿ.ಮೀ. ಇದ್ದು, ಮುಂಗಾರು ಹಂಗಾಮಿನ ವಾಡಿಕೆ ಮಳೆ 650 ಮಿ.ಮೀ. ಆಗಿದೆ. ಪೂರ್ವ ಮುಂಗಾರು ಅವಧಿಯಲ್ಲಿ 60 ಮಿ.ಮೀ. ವಾಡಿಕೆ ಮಳೆಯ 77.90 ಮಿ.ಮೀ. ಮಳೆಯಾಗಿದ್ದು, ಇದು ವಾಡಿಕೆಗಿಂತ ಶೇ.31ರಷ್ಟು ಹೆಚ್ಚಾಗಿದೆ. ಮುಂಗಾರು ಹಂಗಾಮಿಗಾಗಿ ಜಿಲ್ಲೆಗೆ 1,04,339.70 ಕ್ವಿಂಟಲ್ ಬಿತ್ತನೆ ಬೀಜಗಳ ಹಂಚಿಕೆ ಮಾಡಲಾಗಿದೆ. ಇದರಲ್ಲಿ 1,03,165.51 ಕ್ವಿಂಟಲ್ ಸೋಯಾಅವರೆ, 951.92 ಕ್ವಿಂಟಲ್ ತೊಗರಿ, 101.09 ಕ್ವಿಂಟಲ್ ಹೆಸರು ಹಾಗೂ 87.70 ಕ್ವಿಂಟಲ್ ಉದ್ದು ಬೀಜ ಲಭ್ಯವಿದೆ. ಜಿಲ್ಲೆಯಲ್ಲಿ 30 ರೈತ ಸಂಪರ್ಕ ಕೇಂದ್ರಗಳು ಹಾಗೂ 127 ಹೆಚ್ಚುವರಿ ವಿತರಣಾ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಬೀಜ ವಿತರಣೆ ನಡೆಯುತ್ತಿದ್ದು, ಇದುವರೆಗೆ ಸುಮಾರು 37,800 ಕ್ವಿಂಟಲ್ ಬೀಜಗಳನ್ನು ವಿತರಿಸಲಾಗಿದೆ” ಎಂದು ವಿವರಿಸಿದರು.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಒಟ್ಟು 43,366 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಜೂನ್ ಅಂತ್ಯದ ವೇಳೆಗೆ 21,559 ಮೆಟ್ರಿಕ್ ಟನ್ ಅಗತ್ಯವಿದೆ. ಇದಕ್ಕೆ ಎದುರಾಗಿ ಜೂನ್ 2ರ ವೇಳೆಗೆ 24,065 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದ್ದು, 8,212 ಮೆಟ್ರಿಕ್ ಟನ್ ವಿತರಣೆಗೊಂಡ ನಂತರವೂ 17,485 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ.
ಜಿಲ್ಲೆಯ ಚಿಲ್ಲರೆ ಮತ್ತು ಸಗಟು ಮಾರಾಟಗಾರರ ಬಳಿ ಒಟ್ಟು 13,303 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಇದರಲ್ಲಿ 4,537 ಮೆಟ್ರಿಕ್ ಟನ್ ಯೂರಿಯಾ, 2,360 ಮೆಟ್ರಿಕ್ ಟನ್ ಡಿಎಪಿ, 5,005 ಮೆಟ್ರಿಕ್ ಟನ್ ಎನ್‌ಪಿಕೆಎಸ್, 708 ಮೆಟ್ರಿಕ್ ಟನ್ ಎಂಒಪಿ ಹಾಗೂ 697 ಮೆಟ್ರಿಕ್ ಟನ್ ಎಸ್‌ಎಸ್‌ಪಿ ರಸಗೊಬ್ಬರಗಳಿವೆ” ಎಂದರು.

ಜಿಲ್ಲೆಯ 189 ಪ್ಯಾಕ್ಸ್‌ಗಳ ಪೈಕಿ 165 ಪ್ಯಾಕ್ಸ್‌ಗಳು ರಸಗೊಬ್ಬರ ಮಾರಾಟ ಪರವಾನಗಿ ಹೊಂದಿದ್ದು, ಕಾಪು ದಾಸ್ತಾನು ಯೋಜನೆಯಡಿ 900.25 ಮೆಟ್ರಿಕ್ ಟನ್ ಡಿಎಪಿ, 589 ಮೆಟ್ರಿಕ್ ಟನ್ ಯೂರಿಯಾ ಹಾಗೂ ವಿವಿಧ ಸಂಯುಕ್ತ ರಸಗೊಬ್ಬರಗಳನ್ನು ಪೂರೈಸಲಾಗಿದೆ. ಇದುವರೆಗೆ 93 ಪ್ಯಾಕ್ಸ್‌ಗಳಿಗೆ ರಸಗೊಬ್ಬರ ಸರಬರಾಜು ಮಾಡಲಾಗಿದ್ದು, ಉಳಿದ ಪ್ಯಾಕ್ಸ್‌ಗಳಿಗೆ ಜೂನ್ ತಿಂಗಳಲ್ಲಿ ಆದ್ಯತೆ ಮೇರೆಗೆ ಪೂರೈಕೆ ಮಾಡಲಾಗುವುದು. ಇಫ್ಕೋ ಸಂಸ್ಥೆಯ ನ್ಯಾನೋ ಡಿಎಪಿ ದ್ರವರೂಪದ ಗೊಬ್ಬರವು ಪರಿಣಾಮಕಾರಿಯಾಗಿದ್ದು, 500 ಮಿ.ಲೀ. ನ್ಯಾನೋ ಡಿಎಪಿ 1 ಚೀಲ ಸಾಂಪ್ರದಾಯಿಕ ಡಿಎಪಿಗೆ ಸಮಾನ ಪರಿಣಾಮ ನೀಡುವುದರ ಜೊತೆಗೆ ವೆಚ್ಚವನ್ನು ಅರ್ಧಕ್ಕಿಂತ ಕಡಿಮೆ ಮಾಡುತ್ತದೆ “ಎಂದು ಹೇಳಿದರು.‌

ಇದನ್ನೂ ಓದಿ : ಬೀದರ್‌ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಉಪ ನಿರ್ದೇಶಕರು ಅನ್ಸಾರಿ ಎಂ.ಎ .ಕೆ ಮತ್ತು ಹವಾಮಾನ ತಜ್ಞ ಬಸವರಾಜ್ ಬಿರಾದರ್ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...