ಬೀದರ್‌ | 1 ತಿಂಗಳ ಕೂಸು ಬಿಟ್ಟು ತಾಯಿ ನಾಪತ್ತೆ : ಪ್ರಕರಣ ದಾಖಲು

Date:

ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ತಾಯಿ ನಾಪತ್ತೆಯಾದ ಘಟನೆ ಚಿಟಗುಪ್ಪ ತಾಲೂಕಿನ ಮನ್ನಾಏಖೇಳಿ ಬಸ್ ನಿಲ್ದಾಣದಲ್ಲಿ ಏ.2ರಂದು ಜರುಗಿದ್ದು ಈ ಸಂಬಂಧ ಮನ್ನಾಏಖೇಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೇಮಲಾ ನಾಯಕ ತಾಂಡಾದ ಕೂಲಿ ಕೆಲಸ ಮಾಡುವ ಕರುಣಾಬಾಯಿ ಗಂಡ ಹೀರಾಸಿಂಗ್ ರಾಥೋಡ್ ನಾಪತ್ತೆಯಾದ ಮಹಿಳೆಯಾಗಿದ್ದಾಳೆ. ಕರುಣಾಬಾಯಿ ತನ್ನ ಗಂಡ ಹೀರಾಸಿಂಗ್ ಕೂಲಿಕೆಲಸ ಮಾಡಲು 15 ದಿನಗಳ ಹಿಂದೆ ತೆಲಂಗಾಣಾದ ಜಹೀರಾಬಾದ್‌ಗೆ ಹೋಗಿ ಅಲ್ಲಿಯೇ ನೆಲೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಲ್ಲಿಂದ ಕರುಣಾಬಾಯಿ ಗಂಡನಿಗೆ ಹೇಳದೇ ಮನೆ ಬಿಟ್ಟು ಹೋಗಿದ್ದಾಳೆ. ಬಳಿಕ ಗಂಡ ಹಾಗೂ ಹೆಂಡತಿಯ ಪೋಷಕರು ಸೇರಿ ಮಹಿಳೆಯನ್ನು ಸಿಕಿಂದ್ರಾಬಾದ್ ರೇಲ್ವೆ ನಿಲ್ದಾಣದಲ್ಲಿ ಪತ್ತೆಹಚ್ಚಿ ಮರಳಿ ವಾಪಸ್ ಊರಿಗೆ ಹೋಗಬೇಕೆಂದು ಬಸ್‌ನಲ್ಲಿ ಬಂದು ಏ.2ರಂದು ತಡ ರಾತ್ರಿ ಮನ್ನಾಏಖೇಳಿ ಬಸ್‌ ನಿಲ್ದಾಣದಲ್ಲಿ ಇಳಿದು ಅಲ್ಲೇ ತಂಗಿದರು.

ಬೆಳಿಗ್ಗೆ ಊರಿಗೆ ಹೋಗುವ ಸಂಬಂಧ ಬಸ್ ನಿಲ್ದಾಣದ ಎದುರಿನ ಆಟೋ ನಿಲ್ದಾಣದ ಬಳಿ ಬೆಳ್ಳಿಗೆ 7ಗಂಟೆ ಸುಮಾರಿಗೆ ನಿಂತಿದ್ದ ವೇಳೆ ಯಾರಿಗೂ ಹೇಳದೇ ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು 27 ವರ್ಷದ ಮಹಿಳೆ ನಾಪತ್ತೆಯಾಗಿದ್ದಾಳೆ.

ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗದ ಹಿನ್ನೆಲೆ ಕರುಣಾಬಾಯಿ ಗಂಡ ಹೀರಾಸಿಂಗ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಏ.11, 12ರಂದು ಪತ್ರಕರ್ತರ ರಾಜ್ಯ ಸಮ್ಮೇಳನ : 5 ಸಾವಿರ ಪತ್ರಕರ್ತರು ಭಾಗಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ...

ಕಮಲನಗರ | ಸಿಇಒ ಗಿತ್ತೆ ಮಾಧವ್‌ ಮಿಂಚಿನ ಸಂಚಾರ, ವಿಬಿ-ಜಿ ರಾಮ್‌ ಜಿ ಕಾಮಗಾರಿ ಪರಿಶೀಲನೆ

ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ...

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...