ಬೀದರ್‌ | ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯುವಂತೆ ಸಂಸದ ಸಾಗರ್ ಖಂಡ್ರೆ ಆಗ್ರಹ

Date:

ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ತಲಾ ₹3 ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರ ಅತ್ಯಂತ ಖಂಡನೀಯ. ಈ ನಿರ್ಧಾರವು ಬಡ, ಮಧ್ಯಮ ವರ್ಗದ ಜನರ ಕುತ್ತಿಗೆಗೆ ಆರ್ಥಿಕ ಉರುಳಿನಂತಾಗಿದೆ. ಹಾಗಾಗಿ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ಆಗ್ರಹಿಸಿದರು.

- Advertisement -

ಈ ಕುರಿತು ಇಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ದೇಶದ ಹಾಗೂ ಜಿಲ್ಲೆಯ ಜನಸಾಮಾನ್ಯರು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

“ದೇಶದಲ್ಲಿ ಈಗಾಗಲೇ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂಥ ಪರಿಸ್ಥಿತಿಯಲ್ಲಿ ಇಂಧನ ದರವನ್ನು ಮತ್ತೆ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗಾಗಲೇ ಬೆಲೆ ಏರಿಕೆಯ ಸುಳಿಗೆ ಸಿಲುಕಿ ತತ್ತರಿಸುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಈ ದರ ಏರಿಕೆ ಮತ್ತಷ್ಟು ಆರ್ಥಿಕ ಹೊರೆಯನ್ನು ಹೊರಿಸಿದೆ” ಆತಂಕ ವ್ಯಕ್ತಪಡಿಸಿದ್ದಾರೆ.

“ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ, ಅಡುಗೆ ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಸಾರಿಗೆ ವೆಚ್ಚ ದುಬಾರಿಯಾಗುವುದರಿಂದ ತರಕಾರಿ, ಧಾನ್ಯ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆಯೂ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಜನಸಾಮಾನ್ಯರಿಗೆ ಆರ್ಥಿಕ ನೆರವು ಹಾಗೂ ಪರಿಹಾರ ನೀಡಬೇಕಾದ ಕೇಂದ್ರ ಸರ್ಕಾರ, ಅದಕ್ಕೆ ತದ್ವಿರುದ್ಧವಾಗಿ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವುದು ಪ್ರಜಾಪ್ರಭುತ್ವದ ದುರಂತ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ಮುಂಗಾರು ಹಂಗಾಮಿ ಆಂದೋಲನ : ರೈತರಿಗೆ ವೈಜ್ಞಾನಿಕ ಕೃಷಿ ಅರಿವು ಕಾರ್ಯಕ್ರಮ

“ಕೇಂದ್ರ ಸರ್ಕಾರವು ದೇಶದ ಜನರ ಹಿತದೃಷ್ಟಿಯಿಂದ ಹಾಗೂ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಮನಗಂಡು ತಕ್ಷಣವೇ ಜಾರಿಗೆ ಬರುವಂತೆ ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಅಗತ್ಯ ವಸ್ತುಗಳ ಮೇಲಿನ ದರ ಏರಿಕೆಯನ್ನು ಹಿಂಪಡೆಯಬೇಕು. ಬೆಲೆ ಇಳಿಕೆ ಮಾಡುವ ಮೂಲಕ ಜನರಿಗೆ ಸಮಾಧಾನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಜಯಭೇರಿ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ...

ಯುಪಿ ಚುನಾವಣೆ | ಮತದಾರರ ಮನಗೆಲ್ಲಲು ಯೋಗಿ ಸಂಪುಟದ ಮೆಗಾ ಪ್ಲ್ಯಾನ್; ಹಸು ಖರೀದಿಗೆ ಸಬ್ಸಿಡಿ, ಉಚಿತ ಕೋಳಿ ಮರಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ (2027ರ ಫೆಬ್ರವರಿ–ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆಯಿದೆ)...

ಬ್ರೆಜಿಲ್‌ ಚುನಾವಣೆ | ಸೋಲುಂಡ ಬೆನ್ನಲ್ಲೇ‌ ಪ್ಲೇವಿಯೋ ಬೊಲ್ಸೊನಾರೊ ಅಮೆರಿಕಗೆ ಪಲಾಯನ!

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೊಲ್ಸೊನಾರೊ ಅವರ ಪುತ್ರ, ಹಾಲಿ ಸೆನೆಟರ್...

ಕಲಬುರಗಿ | ಎಸ್ಐಆರ್ ಅಂತಿಮ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 18,94,144 ಮತದಾರರು:

ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಚುನಾವಣಾ ಆಯೋಗದ...