ಬೀದರ್‌ | ನಿಗೂಢ ಸ್ಪೋಟ : ಎಂಟು ಜನರಿಗೆ ಗಾಯ, ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

Date:

ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದ ಬಯಲಿನಲ್ಲಿ ಶನಿವಾರ ಬೆಳಿಗ್ಗೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನಾ ಸ್ಥಳದಲ್ಲಿದ್ದ ಎಂಟು ಜನರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

- Advertisement -

ಕಳೆದ ಕೆಲ ತಿಂಗಳ ಹಿಂದೆ ಇದೇ ಗ್ರಾಮದಲ್ಲಿ ಸ್ಫೋಟ ನಡೆದಿತು. ಇದು ಎರಡನೇ ಸ್ಫೋಟ ಪ್ರಕರಣವಾಗಿದೆ. ಗ್ರಾಮದ ಹೊರವಲಯದ ಮೋಳಿಗೆ ಮಾರಯ್ಯ ದೇವಸ್ಥಾನ ಸಮೀಪದ ರಸ್ತೆಯಲ್ಲಿ ಸ್ಫೋಟ ಪ್ರಕರಣ ನಡೆದಿದೆ. ಸದ್ಯ ಎಂಟು ಜನರು ಗಾಯಾಳುಗಳಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್‌ಗೆ ಕಳುಹಿಸಲಾಗಿದೆ. ಘಟನೆ ನಂತರ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸ್ಫೋಟದಲ್ಲಿ ಗಂಭೀರ ಗಾಯಗೊಂಡ ಓರ್ವರನ್ನು ಹೈದ್ರಾಬಾದ್‌ನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ. ಇನ್ನುಳಿದ ಪುಟ್ಟ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ಹಂಚಿಕೊಂಡಿದೆ.

ಸ್ಥಳಕ್ಕೆ ಬೀದರ್ ಎಸ್‌ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ ಮನೆ ಮಾಡಿದೆ. ಘಟನಾ ಸ್ಥಳದಲ್ಲಿ‌ ಬ್ಯಾರಿಕೇಡ್ ಹಾಕಿ ಸ್ಪೋಟಗೊಂಡ ವಸ್ತುಗಳನ್ನ ತಜ್ಞರ ತಂಡ ಪರಿಶೀಲನೆ‌ ನಡೆಸುತ್ತಿದೆ.

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ತನಿಖೆಗೆ ಆದೇಶ ನೀಡಿದ್ದಾರೆ.

1004883981
Oplus_16908288

ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮತ್ತು ಚಿಕಿತ್ಸಾವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿರುವ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಸ್ಫೋಟ ಸ್ಥಳದಲ್ಲಿ ಮಾದರಿ ಸಂಗ್ರಹಿಸಿ ತನಿಖೆ ಮಾಡಲು ಆದೇಶಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಅಲೆಮಾರಿಗಳ ಸಂಘಟಿತ ಹೋರಾಟಕ್ಕೆ ಜಯ : ನೊಂದವರ ನೋವಿಗೆ ದನಿಯಾದ ಸದನ!

ಸ್ಫೋಟಕ್ಕೆ ಕಾರಣವೇನು, ಸ್ಫೋಟಕ್ಕೆ ಬಳಕೆಯಾಗಿರುವ ವಸ್ತು ಯಾವುದು, ಆ ಸ್ಫೋಟಕ ವಸ್ತು ಅಲ್ಲಿಗೆ ಹೇಗೆ ಬಂತು, ಯಾವ ಉದ್ದೇಶಕ್ಕೆ ಅದು ಬಳಕೆಯಾಗುತ್ತಿದ್ದು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...