ಬೀದರ್‌ | 31 ತಿಂಗಳಲ್ಲಿ ₹28.92 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; 202 ಆರೋಪಿಗಳ ಬಂಧನ

Date:

ಬೀದರ ಜಿಲ್ಲೆಯಲ್ಲಿ 2023ರಿಂದ 2026ರ ಜುಲೈ 27ರವರೆಗೆ ಅಂದರೆ 31 ತಿಂಗಳಲ್ಲಿ ಪೊಲೀಸರು ಒಟ್ಟು 145 ಮಾದಕ ವಸ್ತು ಪ್ರಕರಣಗಳನ್ನು ದಾಖಲಿಸಿ, 202 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

- Advertisement -

ಮಾದಕ ದ್ರವ್ಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಮಿಂಚಿನ ಕಾರ್ಯಾಚರಣೆಯಲ್ಲಿ ₹28.92 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕಳೆದ 2023ರಲ್ಲಿ 32 ಪ್ರಕರಣದಲ್ಲಿ 66 ಆರೋಪಿಗಳ ಬಂಧನ, 2024ರಲ್ಲಿ 24 ಪ್ರಕರಣದಲ್ಲಿ 44 ಆರೋಪಿಗಳ ಬಂಧನ, 2025ರಲ್ಲಿ 34 ಪ್ರಕರಣ ದಾಖಲಿಸಿ 55 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು 2026ರ ಜುಲೈವರೆಗೆ ಅಂದರೆ 7 ತಿಂಗಳಲ್ಲಿ 55 ಪ್ರಕರಣ ದಾಖಲಿಸಿ 37 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ 2026ರಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.

2023ರಿಂದ ಇಲ್ಲಿಯವರೆಗೆ ದಾಖಲಾದ 145 ಪ್ರಕರಣಗಲ್ಲಿ 3,524 ಕೆ.ಜಿ.ಗಾಂಜಾ, 66,955 ಮಾದಕ ಮಾತ್ರೆಗಳು, 1,991 ಸಿರಪ್ ಬಾಟಲಿಗಳು, 366 ಗ್ರಾಂ ಕೊಕೇನ್, 499 ಗ್ರಾಂ ಎಂಡಿ ಮೆಥಾಂಫೆಟಮೈನ್ ಹಾಗೂ 6.75 ಗ್ರಾಂ ಎಂಡಿಎಂಎ ಸೇರಿವೆ.

2024ರಿಂದ ಇಲ್ಲಿಯವರೆಗೆ ಮಾದಕ ದ್ರವ್ಯಗಳ ವಿರುದ್ಧ ಸಾವಿರಾರು ಜಾಗೃತಿ ಕಾರ್ಯಕ್ರಮ, ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮಾಯವಾದ ಮಳೆ: ಬರಿದಾದ 57 ಕೆರೆಗಳ ಒಡಲು!

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್ ಗಡಿ ದಾಟಿದ ಗೆಲುವು: ಜನತಂತ್ರಕ್ಕೆ ಆಶಾಕಿರಣವಾದ ಲುಲಾ, ಆದರೆ ಅಳಿಸಿಲ್ಲ ಬಲಪಂಥದ ಹೆಜ್ಜೆಗುರುತು

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...