ಬೀದರ್‌ | ಟನ್ ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ

Date:

ಪ್ರತಿ ಟನ್ ಕಬ್ಬಿಗೆ ₹5,500 ದರನಿಗದಿಪಡಿಸುವುದು ಸೇರಿದಂತೆ ರೈತರ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಬೀದರ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ಬೀದರ್ ತಾಲ್ಲೂಕಿನ ಆಣದೂರ ಗ್ರಾಮದಲ್ಲಿ ಬೀದರ್‌–ಹುಮನಾಬಾದ್‌ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಕಬ್ಬು ಕಟಾವಿನ ನಂತರ 14 ದಿನಗಳ ಒಳಗಾಗಿ ರೈತರಿಗೆ ಹಣ ಪಾವತಿಸಬೇಕು. ವಿಳಂಬವಾದಲ್ಲಿ ಶೇ.15ರಷ್ಟು ಬಡ್ಡಿ ಸಮೇತ ಹಣ ನೀಡಬೇಕು. ಶೇ.9.25ರ ಸಕ್ಕರೆ ಇಳುವರಿಗೆ ₹5,500 ದರ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಸಕ್ಕರೆ ಇಳುವರಿ ನಿರ್ಧರಿಸುವ ಸಂದರ್ಭದಲ್ಲಿ ಕಾರ್ಖಾನೆ, ರೈತರು ಹಾಗೂ ರೈತ ಸಂಘಟನೆಯ ಪದಾಧಿಕಾರಿಗಳನ್ನು ಒಳಗೊಂಡ ಹೋಬಳಿ ಮಟ್ಟದ ಸಮಿತಿ ರಚಿಸಿ, ಅದರ ಸದಸ್ಯರ ಸಮ್ಮುಖದಲ್ಲಿಯೇ ಇಳುವರಿ ಪರೀಕ್ಷೆ ನಡೆಸಬೇಕು. ಕಬ್ಬಿನಿಂದ ಸಕ್ಕರೆ ಮಾತ್ರವಲ್ಲದೆ ಎಥನಾಲ್‌, ಮೊಲಾಸಿಸ್‌, ಪ್ರೆಸ್‌ಮಡ್‌, ಬಗ್ಯಾಸೆಸ್‌ ಹಾಗೂ ವಿದ್ಯುತ್‌ ಸೇರಿದಂತೆ ಹಲವು ಉಪ ಉತ್ಪನ್ನಗಳು ದೊರೆಯುತ್ತವೆ. ಇವುಗಳಿಂದ ಕಾರ್ಖಾನೆ ಮತ್ತು ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿರುವುದರಿಂದ, ಕೇವಲ ಸಕ್ಕರೆಯ ಬೆಲೆಯನ್ನು ಆಧರಿಸಿ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ನಿರ್ಧರಿಸಬಾರದು. ಉಪ ಉತ್ಪನ್ನಗಳಿಂದ ಬರುವ ಆದಾಯವನ್ನೂ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

Advertisements

ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಗಳೇ ಭರಿಸಬೇಕು. ಕಬ್ಬು ಕಟಾವು ಕಾರ್ಮಿಕರು ರೈತರಿಂದ ಹೆಚ್ಚುವರಿಯಾಗಿ ₹8 ಸಾವಿರದಿಂದ ₹10 ಸಾವಿರದವರೆಗೆ ವಸೂಲಿ ಮಾಡುವುದನ್ನು ತಡೆಯಬೇಕು. ಇಲ್ಲವಾದಲ್ಲಿ ಕಾರ್ಖಾನೆಗಳೇ ಕಾರ್ಮಿಕರ ಕೂಲಿ ಪಾವತಿಸಬೇಕು. ಕಬ್ಬು ಕಟಾವಿನ ನಂತರ ತೂಕದಲ್ಲಿ ನಡೆಯುವ ಮೋಸ ತಡೆಗಟ್ಟಲು ಎಲ್ಲ ಎಪಿಎಂಸಿಗಳಲ್ಲಿ ಸರ್ಕಾರದಿಂದ ಡಿಜಿಟಲ್‌ ತೂಕದ ಯಂತ್ರಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

WhatsApp Image 2026 10 31 at 7.15.46 PM

ಉತ್ತರಾಖಂಡ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಪ್ರೋತ್ಸಾಹಧನ ನೀಡಬೇಕು. ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ ₹15 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು. ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾತನಾಡಿ, “2019-20ರಲ್ಲಿ ನಾನು ಎರಡನೇ ಬಾರಿ ಸಂಸದನಾದ ಸಂದರ್ಭದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮಾಲೀಕರ ಮೇಲೆ ಒತ್ತಡ ಹೇರಿ, ಪ್ರತಿ ಟನ್‌ ಕಬ್ಬಿಗೆ ₹1,200–1,400 ಇದ್ದ ದರವನ್ನು ₹2,200ಕ್ಕೆ ಹೆಚ್ಚಿಸುವಂತೆ ಮಾಡಿದ್ದೆ. ಈಗ ರಾಜ್ಯ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ರೈತರ ಹೆಸರಿನಲ್ಲಿ ಹಾಲು, ಮೊಸರು ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಆದರೆ ರೈತರ ಹಿತದೃಷ್ಟಿಯಿಂದ ಕಬ್ಬಿನ ಬೆಲೆ ಹೆಚ್ಚಿಸಲು ಮುಂದಾಗುತ್ತಿಲ್ಲ. ಇದು ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಟೀಕಿಸಿದರು.

WhatsApp Image 2026 10 10 at 7.46.08 PM 30

ಜಿಲ್ಲೆಯ ರೈತರ ಜೀವನಾಡಿಯಾಗಿದ್ದ ಬೀದರ್‌ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಬಂದ್‌ ಆಗಿದ್ದು, ಅದನ್ನು ಪುನರಾರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನಸ್ಸು ಮಾಡುತ್ತಿಲ್ಲ. ಇಂತಹವರ ಕೈಗೆ ಆಡಳಿತ ಹೋಗಿ ಸಿಲುಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, “ಕಬ್ಬು ಬೆಳೆಗಾರರು ಉತ್ಪಾದನಾ ವೆಚ್ಚ ಹೆಚ್ಚಳ, ಬೆಳೆ ಹಾನಿ ಹಾಗೂ ಸೂಕ್ತ ಬೆಲೆ ಸಿಗದಿರುವುದರಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಬೆಲೆ ದೊರೆಯಬೇಕು. ಬರಗಾಲದಿಂದ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಒದಗಿಸಬೇಕು. ರೈತರ ಬೆವರಿಗೆ ನ್ಯಾಯ ಸಿಗಬೇಕು, ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯಬೇಕು ಹಾಗೂ ಸಂಕಷ್ಟದಲ್ಲಿರುವ ಅನ್ನದಾತನ ಕೈಹಿಡಿಯಬೇಕು. ರೈತರ ಹಿತ ಕಾಪಾಡುವವರೆಗೂ ಅವರ ಧ್ವನಿಯಾಗಿ ನಮ್ಮ ಹೋರಾಟ ನಿರಂತರವಾಗಿರಲಿದೆ” ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಶಿವರಾಜ ಪಾಟೀಲ್‌ ಅತಿವಾಳ ಮುಖಂಡರಾದ ಸಂತೋಷ ರೆಡ್ಡಿ, ಚೇತನ ಸೋರಳ್ಳಿ, ಸೇರಿದಂತೆ ರೈತ ಸಂಘಟನೆಯ ಮುಖಂಡರು ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ನ.26ರಂದು ಸಂವಿಧಾನ ರಕ್ಷಣೆಗಾಗಿ ಬೃಹತ್ ಜನಾಂದೋಲನ ಸಮಾವೇಶ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ವಿರುದ್ಧ ‘ಇಂಡಿಯಾ’ ಒಕ್ಕೂಟದ ಸಾಂಕೇತಿಕ ‘ಮಹಾಭಿಯೋಗ’: ಮುಂದುವರಿದ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ'...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರರಕಣ; ಅಪರಾಧ ಸ್ಥಳ ಮರುಸೃಷ್ಟಿಸಿದ SIT

ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು...

ತೇಣಿ ಜೈಲ್‌ಬ್ರೇಕ್; ಹಿರಿಯ ಜೈಲು ಅಧಿಕಾರಿಯನ್ನು ಅಮಾನತುಗೊಳಿಸಿದ ಸಿಎಂ ವಿಜಯ್!

 ಆಗಸ್ಟ್ 6, 2024 ರಿಂದ ತೇಣಿ ಜಿಲ್ಲಾ ಜೈಲಿನ ಹೆಚ್ಚುವರಿ ಸೂಪರಿಂಟೆಂಡೆಂಟ್...

ಪಂಜಾಬ್ ಚುನಾವಣೆಗೆ AAP ಮೊದಲ ಪಟ್ಟಿ ಬಿಡುಗಡೆ!

ಆಮ್ ಆದ್ಮಿ ಪಾರ್ಟಿ (ಎಎಪಿ) 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ತನ್ನ...