ಬೀದರ್‌ | ಮಾರ್ಚ್‌ನಲ್ಲಿ ಅಂಬೇಡ್ಕರ್ ಚಿಂತನೆಗಳ ಕುರಿತ ರಾಷ್ಟ್ರೀಯ–ಅಂತರಾಷ್ಟ್ರೀಯ ವಿಚಾರ ಸಂಕಿರಣ

Date:

ಡಾ.ಬಿ.ಆರ್.ಅಂಬೇಡ್ಕರ ಅವರ ʼಭಾರತದ ಪ್ರಸ್ತುತ ಸವಾಲುಗಳು, ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳುʼ ವಿಷಯದ ಕುರಿತು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

- Advertisement -

ʼಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಸವ ಭೂಮಿಯಾದ ಬೀದರದಲ್ಲಿ ಅಂಬೇಡ್ಕರ ಚಿಂತನೆಗಳ ಕುರಿತ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಬುದ್ಧ, ಬಸವ ಮತ್ತು ಅಂಬೇಡ್ಕರ ಅವರ ಆದರ್ಶಗಳು ಸಮಸಮಾಜ ನಿರ್ಮಾಣಕ್ಕೆ ದಾರಿ ತೋರಲಿವೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಿಂದ ಅಂಬೇಡ್ಕರ ಕುರಿತ ನಾಟಕಗಳು, ಸಾಹಿತಿ ಮತ್ತು ಹೋರಾಟಗಾರರಿಂದ ವಿವಿಧ ವಿಷಯಗಳ ವಿಚಾರಗೋಷ್ಠಿಗಳು ನಡೆಯಲಿವೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಗಣ್ಯರನ್ನು ಆಹ್ವಾನಿಸಲಾಗುವುದುʼ ಎಂದು ಸಚಿವರು ತಿಳಿಸಿದರು.

ʼಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರಗಳು ಎಲ್ಲ ಸಮುದಾಯಗಳಿಗೆ ಅಗತ್ಯವಾಗಿವೆ. ಜಿಲ್ಲೆಯ ಎಲ್ಲಾ ವರ್ಗದ ಜನರು, ಮುಖಂಡರು ಹಾಗೂ ಯುವ ಸಮುದಾಯಗಳನ್ನು ಒಳಗೊಳ್ಳುವಂತೆ ವಿಚಾರ ಸಂಕಿರಣವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುವುದುʼ ಎಂದು ತಿಳಿಸಿದರು.

ʼವಿಚಾರ ಸಂಕಿರಣದಲ್ಲಿ ಅಂಬೇಡ್ಕರ ಚಿಂತನೆಗಳು, ಲಿಂಗ ಸಮಾನತೆ, ಅಸ್ಪೃಶ್ಯತೆಯ ಸಬಲೀಕರಣ, ಭಾರತೀಯ ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ, ಜಾತಿ ವ್ಯವಸ್ಥೆ ಸೇರಿದಂತೆ ಆರು ಪ್ರಮುಖ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿವೆʼ ಎಂದು ವಿವರಿಸಿದರು.

ಸಭೆಯಲ್ಲಿ ಸಮಾಜದ ಹಿರಿಯ ಮುಖಂಡರುಗಳು ವಿಚಾರ ಸಂಕಿರಣದ ಯಶಸ್ವಿಗಾಗಿ ವಿವಿಧ ಸಲಹೆಗಳನ್ನು ನೀಡಿದರು. ಎಲ್ಲರ ಸಲಹೆಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಹಾಗೂ ಸಮಾಜದ ಎಲ್ಲ ಮುಖಂಡರುಗಳ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ : AI ಸೃಷ್ಟಿಸುವ ತಪ್ಪು ಮಾಹಿತಿ ಪ್ರಜಾಪ್ರಭುತ್ವದ ದಿಕ್ಕು ತಪ್ಪಿಸಬಹುದು: ಕೇಂದ್ರ ಸಚಿವ ಜಿತಿನ್‌ ಪ್ರಸಾದ ಎಚ್ಚರಿಕೆ

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...