ಬೀದರ್‌ | ʼವಿಬಿ- ಜಿ ರಾಮ್‌ ಜಿʼ ಕರಾಳ ಕಾಯ್ದೆ ಹಿಂಪಡೆಯಲು ದೇಶಾದ್ಯಂತ ಆಂದೋಲನ : ಸಚಿವ ಈಶ್ವರ ಖಂಡ್ರೆ

Date:

ಕೇಂದ್ರ ಸರ್ಕಾರ ಹೊಸತಾಗಿ ಜಾರಿಗೆ ತಂದಿರುವ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ ಗ್ರಾಮೀಣ (ವಿಬಿ- ಜಿ ರಾಮ್‌ ಜಿ) ಕಾಯ್ದೆಯನ್ನು ಹಿಂಪಡೆದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕಾಯ್ದೆಯನ್ನು ಮರುಸ್ಥಾಪಿಸಬೇಕೇಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ‘ಮನರೇಗಾ ಬಚಾವೋ ಅಭಿಯಾನ’ವನ್ನು ಹಮ್ಮಿಕೊಂಡಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ಪ್ರಧಾನಿ ಮಂತ್ರಿ ಮನಮೋಹನ್‌ ಸಿಂಗ್‌ ನೇತ್ರತ್ವದ ಯುಪಿಎ ಸರ್ಕಾರವು 2005ರಲ್ಲಿ ನರೇಗಾ ಯೋಜನೆ ಜಾರಿಗೊಳಿಸಿತು. ಗ್ರಾಮೀಣ ಭಾಗದ ಅನಕ್ಷರಸ್ಥ ನಿರುದ್ಯೋಗಿಗಳಿಗೆ ಉದ್ಯೋಗ ಖಾತ್ರಿ ಮಾಡುವ ಈ ಕಾಯಿದೆ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ಪಡೆದಿತ್ತು. ಭಾರತದಲ್ಲಿ ಹೊಸ ಆರ್ಥಿಕ ಮಾದರಿ ಹುಟ್ಟು ಹಾಕಿದ್ದು ಈಗ ಇತಿಹಾಸʼ ಎಂದು ಭಾನುವಾರ ಬೀದರ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಗ್ರಾಮೀಣ ಭಾಗದ ಮಹಿಳೆಯರು, ದುರ್ಬಲ ವರ್ಗದವರು, ದಲಿತರು, ತಳ ಸಮುದಾಯಗಳು ನೆಮ್ಮದಿಯಿಂದ, ಗೌರವದಿಂದ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ನೆರವಾಗಿದ್ದ ಮನರೇಗಾ ಹಳ್ಳಿಯ ಜನರ ಜೀವನಕ್ಕೆ ಹೊಸ ದಿಕ್ಕು ತೋರಿಸಿತ್ತು. ಅದನ್ನು ಇಂದಿನ ಕೇಂದ್ರದ ಬಿಜೆಪಿ ಸರ್ಕಾರ ಹೆಸರು ಬದಲಾಯಿಸಿ ವಿಬಿ-ಜಿ ರಾಮ್‌ ಜಿ ಎಂಬ ಕರಾಳ ಕಾಯ್ದೆ ಜಾರಿಗೆ ತಂದಿದೆʼ ಎಂದು ಖಂಡಿಸಿದರು.

ʼಗ್ರಾಮಗಳು ಅಭಿವೃದ್ಧಿ ಆಗಬೇಕು ಎನ್ನುವುದು ಮಹಾತ್ಮ ಗಾಂಧೀಜಿ ಅವರ ಪರಿಕಲ್ಪನೆ. ಆ ಕಾರಣದಿಂದಲೇ ಮನರೇಗಾ ಯೋಜನೆ ರೂಪಿಸಲಾಗಿತ್ತು. ಆದರೆ ಅದಕ್ಕೆ ವಿರುದ್ಧವಾಗಿ ಕೇಂದ್ರ ಸರ್ಕಾರ ನಡೆದುಕೊಂಡು ಗಾಂಧೀಜಿ ಹೆಸರು ಅಳಿಸುವ ದುಸ್ಸಾಹಕ್ಕೆ ಕೈಹಾಕಿದೆ. ಜಿಎಸ್‌ಟಿ ಸೇರಿದಂತೆ ಬೇರೆ ಬೇರೆ ತೆರಿಗೆಗಳನ್ನು ರಾಜ್ಯವು ಕೇಂದ್ರಕ್ಕೆ ನೀಡುತ್ತದೆ. ಆದರೆ ನಮಗೆ ನಮ್ಮ ರಾಜ್ಯದ ಪಾಲನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ನಮ್ಮ ದೇಶದಲ್ಲಿ 12 ಕೋಟಿ ಹಾಗೂ ಕರ್ನಾಟಕದಲ್ಲಿ 78.18 ಲಕ್ಷ ಕ್ರಿಯಾಶೀಲ ನರೇಗಾ ಕೂಲಿಕಾರರಿದ್ದಾರೆ. ಈ ಎಲ್ಲರ ಉದ್ಯೋಗದ ಹಕ್ಕನ್ನು ಮೋದಿ ಸರ್ಕಾರ ನೀರುಪಾಲು ಮಾಡಿದೆʼ ಎಂದು ದೂರಿದರು.

ʼಬೀದರ್‌ ಜಿಲ್ಲೆಯಲ್ಲಿ 2.39 ಲಕ್ಷ ಒಟ್ಟು ಮನರೇಗಾ ಕೂಲಿ ಕಾರ್ಮಿಕರು ಜಾಬ್‌ ಕಾರ್ಡ್‌ ಹೊಂದಿದ್ದಾರೆ. ಅದರಲ್ಲಿ1.40 ಲಕ್ಷ ಕಾರ್ಮಿಕರು ಕ್ರಿಯಾಶೀಲರಾಗಿ ಕೂಲಿ ಮಾಡುತ್ತಿದ್ದಾರೆ. ಮನರೇಗಾ ಕಾಮಗಾರಿ ಬಡ ಕುಟುಂಬಗಳಿಗೆ ಆರ್ಥಿಕ ಸಬಲರಾಗಲು ಸಹಕಾರಿಯಾಗಿದೆ. ಈ ಹಿಂದೆ ಕೇಂದ್ರದ ಪಾಲು ಶೇ 90-10 ರಷ್ಟು ಇತ್ತು. ಆದರೆ ಈಗ ಯೋಜನೆಯ ಸ್ವರೂಪ ಬದಲಿಸಿ ಕೇಂದ್ರದ್ದು ಶೇ 60-40 ಎಂದಿದ್ದಾರೆ. ಈ ಹಿಂದೆ ಅಂಗನವಾಡಿ ಕಟ್ಟಡ, ಕೊಟ್ಟಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನರೇಗಾದಡಿ ಅನುಷ್ಠಾನಗೊಳಿಸಬಹುದಿತ್ತು. ಹೊಸ ಕಾಯ್ದೆಯಿಂದ ಬಂಡವಾಳಿಶಾಹಿಗಳಿಗೆ ಅನುಕೂಲವಿದೆʼ ಎಂದರು.

ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ ಶೂನ್ಯಯಾಗಿದೆ. ಅವರ ಸರ್ಕಾರ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳ ಹೆಸರುಗಳನ್ನು ಬದಲಾವಣೆ ಮಾಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಇದೀಗ ಮನರೇಗಾ ಹೆಸರು ಬದಲಾಯಿಸಿ ಕಾರ್ಮಿಕ ವಿರೋಧಿ ನಿಲುವು ತಾಳಿದ್ದಾರೆ ಎಂದು ಅವರು, ʼವಿಬಿ- ಜಿ ರಾಮ್‌ ಜಿ ಕಾಯ್ದೆ ಜಾರಿಯಾದರೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ಕನಿಷ್ಠ ವೇತನ ರಕ್ಷಣೆಯಿಲ್ಲದೆ ಕಾರ್ಮಿಕರು ಸಂಕಷ್ಟಕ್ಕೆ ತಳ್ಳಲ್ಪಡುತ್ತಾರೆ. ದಲಿತ ಮತ್ತು ಆದಿವಾಸಿ ಕುಟುಂಬಗಳ ಮೇಲೆ ಶೋಷಣೆ ಮತ್ತು ಒತ್ತಡ ಅಧಿಕ ಆಗುತ್ತದೆ. ಗ್ರಾಮೀಣ ಸಂಕಷ್ಟ ತೀವ್ರಗೊಳ್ಳುತ್ತದೆʼ ಎಂದು ತಿಳಿಸಿದರು.

ʼಈ ಹಿಂದಿನ ಮನರೇಗಾ ಕಾಯ್ದೆ ಮರುಸ್ಥಾಪಿಸಬೇಕು. ಜನರ ಉದ್ಯೋಗದ ಹಕ್ಕನ್ನು ಪುನರ್‌ ಸ್ಥಾಪಿಸಬೇಕು. ದೇಶಾದ್ಯಂತ ಮನರೇಗಾ ಅಡಿ ಕೂಲಿ ಮಾಡುವ ಜನರಿಗೆ ಪ್ರತಿ ದಿನಕ್ಕೆ ಕನಿಷ್ಠ 400 ವೇತನ ನೀಡಬೇಕು. ಬಡವರ ಹೊಟ್ಟೆಮೇಲೆ ಹೊಡೆದು ರಕ್ತಹೀರುವ ಕಾರ್ಯ ಮಾಡುತ್ತಿರುವ ಕೇಂದ್ರದ ವಿರುದ್ಧ ದೇಶ, ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷ ಗ್ರಾಮೀಣ ಮಟ್ಟದಿಂದ ʼಮನರೇಗಾ ಬಚಾವೋ ಆಂದೋಲನʼ ನಿರಂತರವಾಗಿ ಮುಂದುವರೆಯುತ್ತದೆʼ ಎಂದರು.

ಬಿಜೆಪಿಯವರು ನಕಲಿ ರಾಷ್ಟ್ರವಾದಿಗಳು :

ʼಸತ್ಯ, ಅಹಿಂಸೆ ಹಾಗೂ ಶಾಂತಿಯ ಅಸ್ತ್ರ ಹಿಡಿದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಹೆಸರು ಅಳಿಸುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಇದೇಯಾ? ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲು ಕೊಟ್ಟು ಎಲ್ಲರ ಅಭಿವೃದ್ಧಿ ಮಾಡುವ ಮೂಲಕ ದೇಶದಲ್ಲಿ ರಾಮರಾಜ್ಯ ನಿಜವಾಗಿಯೂ ಸ್ಥಾಪಿಸಿದ್ದು ಕಾಂಗ್ರೆಸ್‌ ಪಕ್ಷವಾಗಿದೆʼ ಎಂದು ಈಶ್ವರ ಖಂಡ್ರೆ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮನರೇಗಾ ಯೋಜನೆಯಲ್ಲಿ ಅವ್ಯವಹಾರ ಆಗಿದ್ದು, ಅದನ್ನು ತಡೆಯಲು ಹೊಸ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಬಿಜೆಪಿ ಹೇಳಿರುವುದರ ಕುರಿತಾದ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ʼ2014ರಲ್ಲಿ ಬಿಜೆಪಿ ಸುಳ್ಳು ಹೇಳಿ ಅಧಿಕಾರಕೇರಿದರು. ಜನರಿಗೆ ಭರವಸೆ ನೀಡಿದ ಕಪ್ಪು ಹಣ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣ ಸೇರಿ ಯಾವುದೇ ಭರವಸೆ ಈಡೇರಿಸಿಲ್ಲ’ ಎಂದು ಹೇಳಿದರು.

ʼ2019ರ ಲೋಕಸಭಾ ಚುನಾವಣೆಯಲ್ಲಿ ಬಾಲಕೋಟ್‌ ದಾಳಿ ನಡೆಸಿ ಜನರಿಗೆ ಭಯ ವಾತಾವರಣ ನಿರ್ಮಿಸಿ ಎರಡನೇ ಬಾರಿಗೆ ಗೆದ್ದು ಬಂದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ʼಓಟ್‌ ಚೋರಿʼ ನಡೆಸಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದಾರೆ ಎಂದ ಅವರು, ರಾಷ್ಟ್ರೀಯತೆಯೇ ದೇಶಭಕ್ತಿ ಎನ್ನುವ ಬಿಜೆಪಿಯವರು ನಕಲಿ ರಾಷ್ಟ್ರವಾದಿಗಳು. ಇವರ ಇತಿಹಾಸ ನೋಡಿದರೆ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆಗಳಿಲ್ಲʼ ಎಂದು ಟೀಕಿಸಿದರು.

ಇದನ್ನೂ ಓದಿ : ವಿಬಿ-ಜಿ ರಾಮ್ ಜಿ ಕಾಯ್ದೆ: ಮನರೇಗಾ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ರಾಜಶೇಖರ ಪಾಟೀಲ್‌, ವಿಧಾನ ಪರಿಷತ್‌ ಸದಸ್ಯರಾದ ಭೀಮರಾವ್‌ ಪಾಟೀಲ್‌, ಡಾ.ಚಂದ್ರಶೇಖರ ಪಾಟೀಲ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ ಸೇರಿದಂತೆ ಸಂಜಯ ಜಾಗೀರದಾರ್‌, ವಿನೋದ ಅಪ್ಪೆ ಮತ್ತಿರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಭಾಲ್ಕಿ | ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ನೆಲೆ ಅರಿಯಬೇಕು: ಧನಲಕ್ಷ್ಮಿ ಪಾಟೀಲ್

ಹಬ್ಬಗಳು ಕೇವಲ ಸಂಭ್ರಮದ ಆಚರಣೆಗಳಾಗಿರದೆ, ಅವುಗಳ ಹಿಂದಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...