ಬೀದರ್ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಶೇ. 86.47ರಷ್ಟು ಮತ ಚಲಾವಣೆ

Date:

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಬೀದರ್ ಜಿಲ್ಲೆಯಾದ್ಯಂತ ಶುಕ್ರವಾರ ಶಾಂತಿಯುತವಾಗಿ ಜರುಗಿದ್ದು, ಒಟ್ಟಾರೆ ಶೇ. 86.47ರಷ್ಟು ಮತದಾನ ದಾಖಲಾಗಿದೆ.

- Advertisement -

ಜಿಲ್ಲೆಯಲ್ಲಿ ಒಟ್ಟು 7,038 ನೋಂದಾಯಿತ ಶಿಕ್ಷಕ ಮತದಾರರಿದ್ದು, ಅವರಲ್ಲಿ 3,794 ಪುರುಷರು ಹಾಗೂ 3,244 ಮಹಿಳೆಯರಿದ್ದಾರೆ. ಈ ಪೈಕಿ 3,414 ಪುರುಷರು ಮತ್ತು 2,672 ಮಹಿಳೆಯರು ಸೇರಿದಂತೆ ಒಟ್ಟು 6,086 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪುರುಷರಲ್ಲಿ ಶೇ. 89.98ರಷ್ಟು ಹಾಗೂ ಮಹಿಳೆಯರಲ್ಲಿ ಶೇ. 82.37ರಷ್ಟು ಮತದಾನವಾಗಿದ್ದು, ಜಿಲ್ಲೆಯ ಒಟ್ಟಾರೆ ಮತದಾನದ ಪ್ರಮಾಣ ಶೇ. 86.47ರಷ್ಟು ದಾಖಲಾಗಿದೆ.

WhatsApp Image 2026 10 23 at 8.12.05 PM

ಬೆಳಿಗ್ಗೆ 8 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲೂ ಯಾವುದೇ ಅಹಿತಕರ ಘಟನೆಗಳಿಲ್ಲದೆ ಸುಸೂತ್ರವಾಗಿ ನಡೆಯಿತು. ಮತದಾನ ಶಾಂತಿಯುತವಾಗಿ ನಡೆಯಲು ಎಲ್ಲ ಮತಗಟ್ಟೆಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್ ಅವರು ಬೀದರ್ ನಗರ, ಹಳ್ಳಿಖೇಡ, ಹುಮನಾಬಾದ್, ರಾಜೇಶ್ವರ ಮತ್ತು ದುಬಲಗುಂಡಿ ಸೇರಿದಂತೆ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರೂ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಶಾಂತಿಯುತ ಮತದಾನಕ್ಕೆ ಕೈಗೊಂಡಿದ್ದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಇದನ್ನೂ ಓದಿ : ಬೀದರ್‌ | ಸಿಇಸಿ ಜ್ಞಾನೇಶ ಕುಮಾರ್ ವಜಾ, ಎಸ್‌ಐಆರ್‌ ರದ್ದತಿಗೆ ಆಗ್ರಹ, ತಿರಂಗಾ ಮೆರವಣಿಗೆ

WhatsApp Image 2026 10 10 at 7.46.08 PM 20
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಬೀದರ್‌ | ಸಿಇಸಿ ಜ್ಞಾನೇಶ ಕುಮಾರ್ ವಜಾ, ಎಸ್‌ಐಆರ್‌ ರದ್ದತಿಗೆ ಆಗ್ರಹ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ರದ್ದುಗೊಳಿಸಬೇಕು, ಕೇಂದ್ರ ಮುಖ್ಯ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...