ಬೀದರ್‌ | ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಓಂಪ್ರಕಾಶ ಧಡ್ಡೆ ಆಯ್ಕೆ

Date:

ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಔರಾದ್‌ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಓಂಪ್ರಕಾಶ ಧಡ್ಡೆ ಅವರು ನೇಮಕವಾಗಿದ್ದಾರೆ.

- Advertisement -

ಬೀದರ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (ಕನ್ಯಾ)ಯಲ್ಲಿ‌ ನಡೆದ ಸಂಘದ ಸಭೆಯಲ್ಲಿ ವಿವಿಧ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ ಬಳಿಕ ಪ್ರಾಂಶುಪಾಲರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಭೆಯಲ್ಲಿ ಸಂಘದ ಅಧ್ಯಕ್ಷರಾಗಿ ಓಂಪ್ರಕಾಶ ಧಡ್ಡೆ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಚಂದ್ರಕಾಂತ ಗಂಗಶೆಟ್ಟಿ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಲದ್ದೆ, ಪ್ರತಿಭಾ ಹಾಗೂ ರಮೇಶ ಪಾಟೀಲ ಆಯ್ಕೆಯಾಗಿದ್ದಾರೆ. ಕೋಶಾಧ್ಯಕ್ಷರಾಗಿ ಭಗವಾನ ಬಿರಾದರ, ಕಾರ್ಯಾಧ್ಯಕ್ಷರಾಗಿ ವಿಜಯಕುಮಾರ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ ಬಿರಾದರ ಹಾಗೂ ಸಹ ಕಾರ್ಯದರ್ಶಿಯಾಗಿ ಪ್ರೇಮನಾಥ ಪಾಂಚಾಳ ನೇಮಕಗೊಂಡಿದ್ದಾರೆ.

ರಾಜ್ಯ ಪ್ರತಿನಿಧಿಯಾಗಿ ಮಾರುತಿರೆಡ್ಡಿ ಹಾಗೂ ಮಹಿಳಾ ಪ್ರತಿನಿಧಿಯಾಗಿ ಶಾಂತಲಾ ಆಯ್ಕೆಯಾಗಿದ್ದಾರೆ. ಕಾರ್ಯಕಾರಿಣಿ ಮಂಡಳಿ ಸದಸ್ಯರಾಗಿ ಸುಖದೇವ ಬಿರಾದರ, ರಾಜೇಂದ್ರ ಚವ್ಹಾಣ, ಭಾಗ್ಯಶ್ರೀ, ಮಲ್ಲಪ್ಪ ಅಮಣಿ, ಅಶೋಕ ರೆಡ್ಡಿ ಬಸವಕಲ್ಯಾಣ ಹಾಗೂ ವಿಜಯಕುಮಾರ ಠಾಣಾಕೂಶನೂರ ಅವರನ್ನು ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ನೂತನ ಪದಾಧಿಕಾರಿಗಳು ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿ, ಆಡಳಿತಾತ್ಮಕ ಸಮಸ್ಯೆಗಳ ಪರಿಹಾರ ಹಾಗೂ ಶಿಕ್ಷಕ-ವಿದ್ಯಾರ್ಥಿಗಳ ಹಿತಾಸಕ್ತಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...