ಬೀದರ್‌ | ಸಮ ಸಮಾಜ ಕನಸು ಬಿತ್ತಿದ ಸರ್ವಜ್ಞ : ಸಚಿವ ರಹೀಂ ಖಾನ್

Date:

ಜಾತಿ, ವರ್ಗ, ವರ್ಣ ಭೇದ ಎನ್ನದೇ ಸಮಾಜದ ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.

- Advertisement -

ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬೀದರ್ ನಗರದ‌ ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಆಯೋಜಿಸಿದ ಸಂತ ಕವಿ ಸರ್ವಜ್ಞ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ʼಸಮಾಜದಲ್ಲಿ ಬೇರೂರಿರುವ ಜಾತಿ-ಧರ್ಮ, ಮೇಲು-ಕೀಳು, ಬಡವ-ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸಲು ಸರ್ವಜ್ಞ ಸೇರಿದಂತೆ ಅನೇಕ ಮಹಾತ್ಮರು ಶ್ರಮಿಸಿದ್ದಾರೆ. ಅವರ ಮಾನವೀಯ ಮೌಲ್ಯಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಕುಂಬಾರ ಸಮಾಜದ ಇತಿಹಾಸ ತುಂಬಾ ಪ್ರಾಚೀನವಾಗಿದೆ. ಕುಂಬಾರಿಕೆ ವೃತ್ತಿ ವೈಜ್ಞಾನಿಕವಾಗಿದ್ದು, ಎಲ್ಲರೂ ಮಣ್ಣಿನ ಪರಿಕರಗಳನ್ನು ಹೆಚ್ಚು ಬಳಸಬೇಕು. ಕುಂಬಾರ ಸಮಾಜ ಅಭಿವೃದ್ಧಿ ನಿಗಮಕ್ಕೆ ಅಗತ್ಯ ಅನುದಾನ ಒದಗಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದುʼ ಎಂದು ಭರವಸೆ ನೀಡಿದರು.

ಯುವ ಸಾಹಿತಿ ಈಶ್ವರ ರುಮ್ಮಾ ಅವರು ವಿಶೇಷ ಉಪನ್ಯಾಸ ನೀಡಿ, ʼಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಸರ್ವಜ್ಞ ಕವಿಯ ತ್ರಿಪದಿಗಳು ಆದರ್ಶವಾಗಿವೆ. ಸರ್ವಜ್ಞ ಲಕ್ಷಾಂತರ ತ್ರಿಪದಿಗಳು ರಚಿಸಿ ಸಮಾಜದ ಎಲ್ಲ ಕ್ಷೇತ್ರಗಳ ಅಂಕು-ಡೊಂಕುಗಳನ್ನು ತಿದ್ದಿದರು. ಸಮಾಜದಲ್ಲಿನ ಮೌಢ್ಯ, ಕಂದಾಚಾರ ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ಸರ್ವಜ್ಞ ಕಠೋರವಾಗಿ ಟೀಕಿಸಿದರು. ಸ್ತ್ರೀ ಸಮಾನತೆಯ ಚಿಂತನೆಗಳನ್ನು ತ್ರಿಪದಿಗಳಲ್ಲಿ ಕಾಣಬಹುದು. ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಸರ್ವಜ್ಞರ ತ್ರಿಪದಿಗಳ ಮೈಗೂಡಿಸಿಕೊಳ್ಳಬೇಕುʼ ಎಂದು ಹೇಳಿದರು.

WhatsApp Image 2026 02 20 at 5.54.26 PM
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂತಕವಿ ಸರ್ವಜ್ಞ ಅವರ ಜಯಂತಿ ನಡೆಯಿತು.

ಕಾರ್ಯಕ್ರಮಕ್ಕೂ ಮುಂಚಿತವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರು ಪೂಜೆ ಸಲ್ಲಿಸಿದರು. ಬಳಿಕ ಸಂತಕವಿ ಸರ್ವಜ್ಞರ ಭಾವಚಿತ್ರ ಮೆರವಣಿಗೆ ನಗರದ ಶಿವಾಜಿ ವೃತ್ತದಿಂದ ಚಾಲನೆಗೊಂಡು ಭಗತ್ ಸಿಂಗ್ ವೃತ್ತ, ಬಸವವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ರೋಟರಿ ವೃತ್ತ ಮಾರ್ಗವಾಗಿ ರಂಗಮಂದಿರಕ್ಕೆ ತಲುಪಿತು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಕುಂಬಾರ ಸಮಾಜದ ಎಸ್‌ಎಸ್‌ಎಲ್‌ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಇದನ್ನೂ ಓದಿ : ಸರ್ವಜ್ಞ‌ ಕಾವ್ಯದಲ್ಲಿ ವೈಚಾರಿಕತೆ, ಸಾಮಾಜಿಕ ಪ್ರಜ್ಞೆ

ಬೀದರ್ ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಬಿ.ಕರಾಳೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಜಿಲ್ಲಾ ಕುಂಬಾರ ಸಮಾಜದ ಮುಖಂಡ ವಿಠಲ ಕುಂಬಾರ ಸೇರಿದಂತೆ ಮುಖಂಡರಾದ ನಾಗರಾಜ ಕರ್ಪೂರ್, ಶಿವಾನಂದ ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ರಾಜಕುಮಾರ ಕುಂಬಾರ, ಉಮಾಕಾಂತ ಕುಂಬಾರ, ಅಶೋಕ ನೌಬಾದ್‌, ಬಾಲಾಜಿ ಕುಂಬಾರ, ಕಾಶಿನಾಥ್ ಕುಂಬಾರ, ಶ್ರೀಕಾಂತ್ ಮಾಳಚಾಪುರ, ಗಣಪತಿ ಕುಂಬಾರ, ಪವನ್ ಕುಂಬಾರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಸಾರ್ವಜನಿಕರು ಸೇರಿದಂತೆ ಕುಂಬಾರ ಸಮಾಜದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ...

ಕಮಲನಗರ | ಸಿಇಒ ಗಿತ್ತೆ ಮಾಧವ್‌ ಮಿಂಚಿನ ಸಂಚಾರ, ವಿಬಿ-ಜಿ ರಾಮ್‌ ಜಿ ಕಾಮಗಾರಿ ಪರಿಶೀಲನೆ

ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ...

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...