ಬೀದರ್‌ | ಹುಮನಾಬಾದ್‌ ತಾಲೂಕಿನಾದ್ಯಂತ ಜ.5ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Date:

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲೂಕಿನಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜ.5ರ ಮಧ್ಯಾಹ್ನ 2ರಿಂದ ಮುಂದಿನ ಆದೇಶದವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಹುಮನಾಬಾದ್‌ ತಾಲೂಕು ತಹಸೀಲ್ದಾರ್‌‌ ಹಾಗೂ ದಂಡಾಧಿಕಾರಿಗಳಾದ ಅಂಜುಮ್‌ ತಬಸ್ಸುಮ್ ಆದೇಶಿಸಿದ್ದಾರೆ.

- Advertisement -

ʼಬೀದರ್ ಜಿಲ್ಲಾ ಪಂಚಾಯತಿಯಲ್ಲಿ ಜ.5ರಂದು ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಮಧ್ಯೆ ನಡೆದ ಗದ್ದಲ/ಜಗಳ/ಕಲಹ/ಮಾತಿನ ಚಕಮಕಿಯಿಂದಾಗಿ ಹುಮನಾಬಾದ ತಾಲೂಕಿನಾದ್ಯಂತ ಅಶಾಂತಿ ಸೃಷ್ಟಿಯಾಗುವ ಹಾಗೂ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದ್ದು, ನಿಷೇಧಾಜ್ಞೆ ಹೊರಡಿಸಲು ಕೋರಿರುತ್ತಾರೆ. ಹಾಗಾಗಿ ತಾಲ್ಲೂಕಿನ ಶಾಂತಿ ಸುವ್ಯವಸ್ಥೆ ಕಾಪಾಡುವುದು ಅತ್ಯವಶ್ಯಕವೆಂದು ಮನಗಂಡು ಆದೇಶ ಹೊರಡಿಸಲಾಗಿದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಷರತ್ತುಗಳೇನು?

1.ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನಾದ್ಯಂತ 5 ಕ್ಕಿಂತ ಹೆಚ್ಚಿನ ಜನರು ಗುಂಪು-ಗುಂಪಾಗಿ ತಿರುಗಾಡುವುದನ್ನು ನಿಷೇಧಿಸಿದೆ.

2. ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನಾದ್ಯಂತ ಜನರು/ಸಾರ್ವಜನಿಕರು ಯಾವುದೇ ಆಯುಧ/ಲಾಠಿ/ಚಾಕು/ಚೂರಿ/ಕತ್ತಿ/ತಲವಾರ ಇತರೆ ಯಾವುದೇ ಮಾನವ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ಹರಿತವಾದ/ಚೂಪಾದ ವಸ್ತುಗಳನ್ನು ಹಿಡಿದುಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ.

3. ಯಾವುದೇ ಪಕ್ಷದ/ವ್ಯಕ್ತಿಯ ಪರ ಅಥವಾ ವಿರೋಧ ಘೋಷಣೆಗಳನ್ನು ಮತ್ತು ಪ್ರಚೋದನಕಾರಿ ಭಾಷಣಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

4. ಇತರ ರಾಜಕೀಯ ಸಂಬಂಧಪಟ್ಟ ವಿಚಾರಗಳನ್ನು ಗುಂಪುಗಳಲ್ಲಿ ಚರ್ಚೆ ಮಾಡತಕ್ಕದಲ್ಲ.‌

ಇದನ್ನೂ ಓದಿ : ಬೀದರ್ | ಕೆಡಿಪಿ ಸಭೆಯಲ್ಲಿ ಕೈಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಶಾಸಕರು : ಸಮಾಜಕ್ಕೆ ಇದು ಮಾದರಿಯೇ?

WhatsApp Image 2026 01 05 at 5.29.37 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...