ಬೀದರ್‌ | ₹9.78 ಲಕ್ಷ ಮೌಲ್ಯದ 15 ಬೈಕ್‌ ಕದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Date:

ಬೀದರ್ ನಗರದ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು 15 ಬೈಕ್‌ ಸಮೇತ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಭಾಲ್ಕಿ ತಾಲೂಕಿನ ಗಣೇಶಪುರವಾಡಿ ನಿವಾಸಿ ಗಣಪತಿ ಗಂಗಾಜಿ ಎಂಬುವವರು ಮಾ.19ರಂದು ಗಾಂಧಿಗಂಜ್ ಎಪಿಎಂಸಿ ಮಾರುಕಟ್ಟೆ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಈ ಬಗ್ಗೆ ಗಾಂಧಿ ಗಂಜ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಬಂಧಿತ ಆರೋಪಿಯಿಂದ ವಿವಿಧ ಕಡೆಗಳಲ್ಲಿ ಕಳವು ಮಾಡಲಾಗಿದ್ದ ಒಟ್ಟು 15 ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯವು ಸುಮಾರು ₹9.78 ಲಕ್ಷ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬೀದರ್‌ ನಗರದ ವಿವಿಧ ಕಡೆ 14 ಬೈಕ್‌ ಹಾಗೂ ಹುಮನಾಬಾದ್‌ನಲ್ಲಿ 1 ಬೈಕ್‌ ಕಳ್ಳತನ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳ್ಳತನಕ್ಕೊಳಗಾದ ಬೈಕ್‌ಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಮಾಲೀಕರು ಗಾಂಧಿಗಂಜ್ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾಹನಗಳನ್ನು ಪಡೆಯಲು ಸೂಚಿಸಲಾಗಿದೆ.

ಇದನ್ನೂ ಓದಿ : ಔರಾದ್‌ | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ

ಕಾರ್ಯಾಚರಣೆಯಲ್ಲಿ ಗಾಂಧಿ ಗಂಜ ಪೊಲೀಸ್‌ ನಿರೀಕ್ಷಕರಾದ ಆನಂದರಾವ ಎಸ್.ಎನ್.‌ ಪಿಎಸ್‌ಐ ವಿದ್ಯಾವಾನ್‌ ಹಾಗೂ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಅನೀಲ್‌, ಇರ್ಫಾನ್‌, ಗಂಗಾಧರ, ಸುಧಾಕರ, ಹರ್ಷವರ್ಧನ್‌ ತುಕ್ಕಾರೆಡ್ಡಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...