ಪೋಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್‌ನಲ್ಲಿ ಜರುಗಿದೆ.
ಉಮೇಶ್ ನಾಯ್ಕ್(25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಇವರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಶಂಕೆ ವ್ಯಕ್ತವಾಗಿದೆ.
ಈ ಸುದ್ದಿ ಓದಿದದ್ದೀರಾ? ಹಾಸನ | ಆರು ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ ಎಂಬ ಆದೇಶ ಬಂದಿಲ್ಲ: ಪ್ರಜ್ವಲ್ ರೇವಣ್ಣ
2021ರಲ್ಲಿ ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದ ಪೇದೆ ಕೆಲವು ತಿಂಗಳಿಂದ ಜಿಲ್ಲೆಯ ಬಸವಕಲ್ಯಾಣ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಮೇಶ್ ನಾಯ್ಕ್ ಮೂಲತಃ ವಿಜಯನಗರ ಜಿಲ್ಲೆಯವರು.

ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಆತ್ಮಹತ್ಯೆ ಕುರಿತು ಖಚಿತ ಮಾಹಿತಿ ತಿಳಿದುಬಂದಿಲ್ಲ.